ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ICC T20 Ranking: ಎರಡನೇ ಸ್ಥಾನಕ್ಕೆ ಜಿಗಿದ ಸೂರ್ಯಕುಮಾರ್ ಯಾದವ್, ನಂಬರ್ 1 ಆಗಲು ಇನ್ನೊಂದು ಮೆಟ್ಟಿಲು ಬಾಕಿ

Suryakumar Yadav Surpass Babar Azam Moves To Second Place In ICC T20 Rankings

ಐಸಿಸಿ ಟಿ20 ಶ್ರೇಯಾಂಕ: ಆಸ್ಟ್ರೇಲಿಯಾ ವಿರುದ್ಧದ ಬಿರುಸಿನ ನಂತರ ಐಸಿಸಿ ಶ್ರೇಯಾಂಕದಲ್ಲಿ ಸೂರ್ಯಕುಮಾರ್ ಯಾದವ್ ಎರಡನೇ ಸ್ಥಾನಕ್ಕೆ ತೆರಳಿದರು, ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ

ಭಾರತದ ಮಧ್ಯಮ ಕ್ರಮಾಂಕದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ನಿರ್ಣಾಯಕ ಟಿ20 ಪಂದ್ಯದಲ್ಲಿ 36 ಎಸೆತಗಳಲ್ಲಿ ಭರ್ಜರಿ 69 ರನ್ ಗಳಿಸಿದ ನಂತರ, ರ್‍ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ.

ಸೂರ್ಯಕುಮಾರ್ 801 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ವಿಕೆಟ್‌ಕೀಪರ್-ಬ್ಯಾಟರ್ ಮೊಹಮ್ಮದ್ ರಿಜ್ವಾನ್ ಅಗ್ರಸ್ಥಾನದಲ್ಲಿ ಮುಂದುವರೆದಿದ್ದಾರೆ. ಮೊಹಮ್ಮದ್ ರಿಜ್ವಾನ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಎರಡು ಅರ್ಧಶತಕಗಳನ್ನು ಗಳಿಸಿ ಈಗ 861 ಅಂಕಗಳನ್ನು ಹೊಂದಿದ್ದಾರೆ. ಇಬ್ಬರ ನಡುವೆ ನಂಬರ್ 1 ಸ್ಥಾನಕ್ಕೆ ಭಾರಿ ಪೈಪೋಟಿ ಏರ್ಪಟ್ಟಿದ್ದು ಇನ್ನು ಮೂರು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಉತ್ತಮ ಪ್ರದರ್ಶನ ನೀಡಿದರೆ, ಮೊದಲನೇ ಸ್ಥಾನಕ್ಕೇರಲು ಅವಕಾಶ ಸಿಗಲಿದೆ.

ಇಬ್ಬರೂ ಆಟಗಾರರು ಸತತವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವುದು ಎರಡೂ ತಂಡಗಳಿಗೆ ಸಂತಸ ತಂದಿದೆ. ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಕೆಲವೇ ದಿನಗಳು ಬಾಕಿ ಇರುವಾಗ ಸೂರ್ಯಕುಮಾರ್ ಯಾದವ್ ರ್‍ಯಾಂಕಿಂಗ್‌ನಲ್ಲಿ ಜೀವನ ಶ್ರೇಷ್ಠ ಸಾಧನೆ ಮಾಡಿರುವುದು ಭಾರತದ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸ ತಂದಿದೆ.

Suryakumar Yadav Surpass Babar Azam Moves To Second Place In ICC T20 Rankings

ಟಿ20 ಟಾಪ್ 5 ಆಟಗಾರರು ಇವರು

ಪಾಕಿಸ್ತಾನ ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್ ಮೊದಲನೇ ಸ್ಥಾನದಲ್ಲಿದ್ದರೆ. ಪಾಕಿಸ್ತಾನದ ಮತ್ತೊಬ್ಬ ಸ್ಟಾರ್ ಬ್ಯಾಟರ್ ಬಾಬರ್ ಅಜಂ ರ್‍ಯಾಂಕಿಂಗ್‌ನಲ್ಲಿ ಕುಸಿತ ಕಂಡಿದ್ದು, ಎರಡನೇ ಸ್ಥಾನದಲ್ಲಿದ್ದ ಬಾಬರ್ ಅಜಂ ಮೂರನೇ ಸ್ಥಾನದಲ್ಲಿದ್ದಾರೆ. ಮೂರನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ಬ್ಯಾಟರ್ ಐಡನ್ ಮಾಕ್ರಮ್ 4ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ. ಆಸ್ಟ್ರೇಲಿಯಾ ತಂಡದ ನಾಯಕ ಆರನ್ ಫಿಂಚ್ 5ನೇ ಸ್ಥಾನದಲ್ಲಿ ಮುಂದುವರೆದಿದ್ದಾರೆ.

ನಂಬರ್ 1 ಸ್ಥಾನದ ಮೇಲೆ ಕಣ್ಣಿಟ್ಟ ಸೂರ್ಯಕುಮಾರ್ ಯಾದವ್

ಬ್ಯಾಟರ್‌ಗಳಿಗಾಗಿ ಐಸಿಸಿ ಟಿ 20 ಐ ಶ್ರೇಯಾಂಕದಲ್ಲಿ ಎರಡನೇ ಸ್ಥಾನಕ್ಕೆ ಬಂದ ನಂತರ, ಸೂರ್ಯಕುಮಾರ್ ಈಗ ಐಸಿಸಿ ಶ್ರೇಯಾಂಕದಲ್ಲಿ ನಂಬರ್ ಒನ್ ಸ್ಥಾನಕ್ಕೆ ಕಣ್ಣಿಟ್ಟಿದ್ದಾರೆ. ಸೂರ್ಯಕುಮಾರ್ ಪ್ರಸ್ತುತ ರಿಜ್ವಾನ್‌ಗಿಂತ 60 ಅಂಕಗಳು ಹಿಂದಿದ್ದಾರೆ, ಸೂರ್ಯಕುಮಾರ್ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಟಿ20 ಪಂದ್ಯಗಳನ್ನು ಆಡಲಿದ್ದಾರೆ.

ಮತ್ತೊಂದೆಡೆ, ರಿಜ್ವಾನ್ ಇಂಗ್ಲೆಂಡ್ ವಿರುದ್ಧ ಇನ್ನೂ ಮೂರು ಪಂದ್ಯಗಳನ್ನು ಆಡಬೇಕಾಗಿದೆ. ಅವರು ಪ್ರಸ್ತುತ ನಾಲ್ಕು ಪಂದ್ಯಗಳಿಂದ 252 ರನ್ ಗಳಿಸುವ ಮೂಲಕ ಸರಣಿಯಲ್ಲಿ ರನ್ ಗಳಿಸಿದ ಪ್ರಮುಖ ಆಟಗಾರರಾಗಿದ್ದಾರೆ. ರಿಜ್ವಾನ್ ಕೂಡ ತಮ್ಮ ಉತ್ತಮ ಪ್ರದರ್ಶನ ಮುಂದುವರೆಸಿದರೆ ಐಸಿಸಿ ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಉಳಿಯುತ್ತಾರೆ.

Story first published: Wednesday, September 28, 2022, 15:33 [IST]
Other articles published on Sep 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X