ಬಾಂಗ್ಲಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ: ಮಯಾಂಕ್ ಯಾದವ್‌ಗೆ ಅವಕಾಶ
ಭಾರತ ಸದ್ಯ ಬಾಂಗ್ಲಾದೇಶದ ವಿರುದ್ಧ ಟೆಸ್ಟ್ ಸರಣಿಯನ್ನು ಆಡುತ್ತಿದೆ. ಈ ಸರಣಿ ಮುಗಿದ ಬಳಿಕ ಉಭಯ ತಂಡಗಳ ನಡುವೆ ಟಿ20 ಸರಣಿ ನಡೆಯಲಿದೆ. ಈ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಿಸಿಸಿಐ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ.
ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಗೆ ತಂಡವನ್ನು ಪ್ರಕಟಿಸಲಾಗಿದೆ. ಟಿ20 ಸರಣಿಗೆ ಭಾರತ ತಂಡವನ್ನು ಭಾರತ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಐಪಿಎಲ್‌ನಲ್ಲಿ ಮಿಂಚು ಹರಿಸಿದ್ದ ಲಕ್ನೋ ಸೂಪರ್ ಸ್ಟಾರ್ ಬೌಲರ್ ಮಯಾಂಕ್ ಯಾದವ್ ಮೊದಲ ಬಾರಿಗೆ ಬ್ಲ್ಯೂ ಜೆರ್ಸಿಯನ್ನು ತೊಡಲಿದ್ದಾರೆ. ಭಾರತ ತಂಡ ಅಳೆದು ತೂಗಿ ಆಟಗಾರರನ್ನು ಆಯ್ಕೆ ಮಾಡಿದೆ. ಭಾರತ ಟಿ20 ತಂಡದಲ್ಲಿ ಒಟ್ಟು 15 ಆಟಗಾರರಿಗೆ ಅವಕಾಶ ಸಿಕ್ಕಿದೆ.

ಉಪನಾಯಕನಿಲ್ಲ
ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಟಿ20 ಪಂದ್ಯದಲ್ಲಿ ಭಾರತ ತಂಡದಲ್ಲಿ ಯಾರಿಗೂ ಉಪನಾಯಕನ ಪಟ್ಟವನ್ನು ನೀಡಲಾಗಿಲ್ಲ. ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದರೂ, ಸೂರ್ಯಕುಮಾರ್ ಅವರನ್ನು ಮುನ್ನಡೆಸಲಿದ್ದಾರೆ.
ಟಿ20 ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದ ಹಾರ್ದಿಕ್ ಪಾಂಡ್ಯ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇವರು ಲಂಕಾ ವಿರುದ್ಧದ ಸರಣಿಯಲ್ಲೂ ಸ್ಥಿರ ಪ್ರದರ್ಶನ ನೀಡಿದ್ದರು. ಯುವ ಆಲ್‌ರೌಂಡರ್‌ಗಳಾದ ವಾಶಿಂಗ್ಟನ್ ಸುಂದರ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ.
ಮೂರು ವರ್ಷಗಳ ಬಳಿಕ ತಂಡಕ್ಕೆ ಎಂಟ್ರಿ
ವರುಣ್ ಚಕ್ರವರ್ತಿ 2021ರ ಟಿ20 ವಿಶ್ವಕಪ್ ಬಳಿಕ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಯುಎಇದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ವರುಣ್ ಚಕ್ರವರ್ತಿ ಖಾಲಿ ಕೈಯಲ್ಲಿ ವಾವಸ್ ಆಗಿದ್ದರು. ಪಾಕ್ ವಿರುದ್ಧ 33, ಕಿವೀಸ್ ವಿರುದ್ಧ 23, ಸ್ಕಾಟ್ಲೆಂಡ್ ವಿರುದ್ಧ 15 ರನ್ ನೀಡಿದರು. ಈ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವಲ್ಲಿ ವಿಫಲವಾಗಿತ್ತು. ವರುಣ್ ಈ ವರೆಗೆ ಆರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೇವಲ ಎರಡು ವಿಕೆಟ್ ಪಡೆದಿದ್ದಾರೆ.
ಇಶಾಂತ್‌ಗೆ ಇಲ್ಲ ಅವಕಾಶ
ಇಶಾನ್ ಕಿಶನ್ ಕಳೆದ ಒಂದು ವರ್ಷದಿಂದ ತಂಡಕ್ಕೆ ಮರಳಲು ಹರಸಾಹಸ ಪಡುತ್ತಿದ್ದಾರೆ. ಇವರನ್ನು ಬಿಸಿಸಿಐ ಕೇಂದ್ರ ಒಪ್ಪಂದದಿಂದ ಕೈಟ್ಟಿದೆ. ಆದರೆ ದೇಶೀಯ ಕ್ರಿಕೆಟ್‌ನಲ್ಲಿ ಇಶಾನ್ ಸ್ಥಿರ ಪ್ರದರ್ಶನದ ಹೊರತಾಗಿಯೂ ಬಿಸಿಸಿಐ ಆಯ್ಕೆ ಸಮಿತಿ ಇವರನ್ನು ಕಡೆಗಣಿಸಿದೆ. ದುಲೀಪ್ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ, ಅವರನ್ನು ಟಿ20 ಸರಣಿಗೆ ಪರಿಗಣಿಸಲಾಗಿಲ್ಲ. ರಿಷಬ್ ಪಂತ್ ಮತ್ತು ಧ್ರುವ ಜುರೆಲ್ ಟೆಸ್ಟ್ ತಂಡದಲ್ಲಿ ಹೆಚ್ಚು ಆದ್ಯತೆ ಪಡೆಯುತ್ತಿರುವ ಕಾರಣ ಇಶಾನ್ ಕಿಶನ್ ಕಮ್ ಬ್ಯಾಕ್ ಮಾಡುವುದು ಕಷ್ಟ.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ ಮತ್ತು ಮಯಾಂಕ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications