ಸೂರ್ಯಕುಮಾರ್ ಯಾದವ್‌ಗೆ ಶಸ್ತ್ರಚಿಕಿತ್ಸೆ; ಬೇಗ ಚೇತರಿಸಿಕೊಳ್ಳಿ ಎಂದ ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟರ್!
ಜರ್ಮನಿಯ ಮ್ಯೂನಿಚ್‌ನಲ್ಲಿ ತೊಡೆಸಂದು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಸ್ಟ್ರೇಲಿಯಾದ ಮಹಿಳಾ ಕ್ರಿಕೆಟ್ ಆಟಗಾರ್ತಿ ಅಮಂಡಾ-ಜೇಡ್ ವೆಲ್ಲಿಂಗ್ಟನ್ ಹಾರೈಸಿದ್ದಾರೆ.
ಕಳೆದ ವರ್ಷ ಅಡಿಲೇಡ್ ಸ್ಟ್ರೈಕರ್ಸ್ ಮಹಿಳಾ ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ಪ್ರಶಸ್ತಿ ವಿಜೇತ ತಂಡದ ಭಾಗವಾಗಿದ್ದ ಅಮಂಡಾ-ಜೇಡ್ ವೆಲ್ಲಿಂಗ್ಟನ್ ಅವರು ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ 'ಶೀಘ್ರವಾಗಿ ಚೇತರಿಸಿಕೊಳ್ಳಿ' ಎಂದು ಬೆರಳುಗಳನ್ನು ಕ್ರಾಸ್ ಮಾಡುವ ಎಮೋಜಿಯೊಂದೊಗೆ ಪೋಸ್ಟ್ ಮಾಡಿದ್ದಾರೆ.

ಇದಕ್ಕೂ ಮೊದಲು ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ ತಮ್ಮ ಎಕ್ಸ್ (ಟ್ವಿಟ್ಟರ್) ಖಾತೆಯಲ್ಲಿ ಚಿತ್ರವನ್ನು ಪೋಸ್ಟ್ ಮಾಡಿದರು ಮತ್ತು ತಮ್ಮ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡರು.
"ನನ್ನ ಆರೋಗ್ಯಕ್ಕಾಗಿ ಕಾಳಜಿ ಮತ್ತು ಶುಭಾಶಯಗಳಿಗಾಗಿ ನಾನು ನಿಮ್ಮೆಲ್ಲರಿಗೂ ಧನ್ಯವಾದ ಹೇಳಲು ಬಯಸುತ್ತೇನೆ. ನಾನು ಶೀಘ್ರದಲ್ಲೇ ಹಿಂತಿರುಗುತ್ತೇನೆ ಎಂದು ನಿಮಗೆ ಹೇಳಲು ನನಗೆ ಸಂತೋಷವಾಗಿದೆ," ಎಂದು ವಿಶ್ವದ ನಂ.1 ಟಿ20 ಬ್ಯಾಟರ್ ಸೂರ್ಯಕುಮಾರ್ ಯಾದವ್ ಬರೆದುಕೊಂಡಿದ್ದಾರೆ.
ಕಳೆದ ವರ್ಷದ ಅಂತ್ಯದಲ್ಲಿ ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಸೂರ್ಯಕುಮಾರ್ ಯಾದವ್ ಪಾದದ ಗಾಯಕ್ಕೆ ತುತ್ತಾಗಿದ್ದರು. ಕ್ರೀಡಾ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ಸೂರ್ಯಕುಮಾರ್ ಜರ್ಮನಿಗೆ ಹೋಗುತ್ತಾರೆ ಎಂದು ನಂತರ ತಿಳಿಸಲಾಗಿತ್ತು.
ಸೂರ್ಯಕುಮಾರ್ ಯಾದವ್ ಪುನರಾಗಮನ ಯಾವಾಗ?
33 ವರ್ಷದ ಸೂರ್ಯಕುಮಾರ್ ಯಾದವ್ ಬೆಂಗಳೂರಿನ ಎನ್‌ಸಿಎನಲ್ಲಿ ತಮ್ಮ ಪುನರ್ವಸತಿಯನ್ನು ಫೆಬ್ರವರಿ ಮಧ್ಯದಿಂದ ಪ್ರಾರಂಭಿಸುವ ಸಾಧ್ಯತೆಯಿದೆ.
ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಹಿಂದಿರುಗುವ ಸಾಧ್ಯತೆಯಿದೆ. ಅಲ್ಲಿ ಅವರು ಮುಂಬೈ ಇಂಡಿಯನ್ಸ್ ತಂಡದ ಪರ ಆಡಲಿದ್ದಾರೆ.
ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾದಲ್ಲಿ ಭಾರತ ಟಿ20 ತಂಡದ ನಾಯಕರಾಗಿದ್ದರು. ಗ್ಕೆಬರ್ಹಾದಲ್ಲಿರುವ ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ 36 ಎಸೆತಗಳಲ್ಲಿ 56 ರನ್ ಗಳಿಸಿದರು.

ನಂತರ, ಸೂರ್ಯಕುಮಾರ್ 56 ಎಸೆತಗಳಲ್ಲಿ 100 ರನ್ ಗಳಿಸಿದರು ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ರೋಹಿತ್ ಶರ್ಮಾ ಅವರ ಟಿ20 ಶತಕಗಳ (4) ದಾಖಲೆಯನ್ನು ಸರಿಗಟ್ಟಿದ್ದರು.
ಆದಾಗ್ಯೂ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಇತ್ತೀಚೆಗೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಐದನೇ ಟಿ20 ಶತಕವನ್ನು ಗಳಿಸಿದ್ದರಿಂದ ಸೂರ್ಯಕುಮಾರ್ ಯಾದವ್ ಅವರು ಮತ್ತೆ ಹಿಂದೆ ಬಿದ್ದರು.
ವೆಸ್ಟ್ ಇಂಡೀಸ್ ಮತ್ತು ಯುಎಸ್ಎನಲ್ಲಿ ನಡೆಯಲಿರುವ 2024ರ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಆಡುವಾಗ ಸೂರ್ಯಕುಮಾರ್ ಯಾದವ್ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.
ಇದುವರೆಗೆ ಆಡಿದ 60 ಟಿ20 ಪಂದ್ಯಗಳಲ್ಲಿ, ಸೂರ್ಯಕುಮಾರ್ ಯಾದವ್ 45.55ರ ಸರಾಸರಿ ಮತ್ತು 171.55 ಸ್ಟ್ರೈಕ್ ರೇಟ್‌ನೊಂದಿಗೆ 2141 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕಗಳು ಮತ್ತು 17 ಅರ್ಧಶತಕಗಳು ಒಳಗೊಂಡಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications