Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐರ್ಲೆಂಡ್‌, ಇಂಗ್ಲೆಂಡ್‌ ಪ್ರವಾಸಕ್ಕೆ ನೀತಿಶ್‌ ಕುಮಾರ್‌ ರೆಡ್ಡಿ ಅಲಭ್ಯ; ಸೂರ್ಯಾಂಶ್‌ಗೆ ಸ್ಥಾನ

ಟೀಮ್ ಇಂಡಿಯಾ ಯುರೋಪ್ ಪ್ರವಾಸವನ್ನು ಕೈಗೊಳ್ಳುವ ಮುನ್ನವೇ ದೊಡ್ಡ ಪೆಟ್ಟು ಬಿದ್ದಿದೆ. ಐರ್ಲೆಂಡ್‌ ವಿರುದ್ಧದ ಟಿ20 ಸರಣಿಗೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಗಾಯದ ಕಾರಣದಿಂದ ತಂಡದಿಂದ ಹೊರ ನಡೆದಿದ್ದಾರೆ. ಗಾಯದ ಕಾರಣದಿಂದ ನಿತೀಶ್‌ ಐರ್ಲೆಂಡ್‌ ಪ್ರವಾಸ ಕೈಗೊಳ್ಳುತ್ತಿಲ್ಲ. ಇವರು ಇಂಗ್ಲೆಂಡ್‌ ವಿರುದ್ಧದ ಸರಣಿಗೂ ತಂಡಕ್ಕೆ ಆಯ್ಕೆ ಆಗಿದ್ದರಿಂದ ತಂಡ ಚಿಂತೆ ಹೆಚ್ಚಾಗಿದೆ. ಆದರೆ ಬಿಸಿಸಿಐ ಈಗ ಐರ್ಲೆಂಡ್‌ ಪ್ರವಾಸಕ್ಕೆ ಬದಲಿ ಆಟಗಾರನನ್ನು ಘೋಷಣೆ ಮಾಡಿದೆ.

ಭಾರತ ಮತ್ತು ಐರ್ಲೆಂಡ್ ನಡುವಿನ ಟಿ20ಐ ಸರಣಿ ಜೂನ್ 26 ರಂದು ಆರಂಭವಾಗಲಿದೆ. ಈ ಸರಣಿಗೂ ಮುನ್ನ, ಟೀಮ್ ಇಂಡಿಯಾ ಬಗ್ಗೆ ಮಹತ್ವದ ಸುದ್ದಿ ಹೊರಬಿದ್ದಿದೆ. ಸ್ಟಾರ್ ಆಲ್‌ರೌಂಡರ್ ನಿತೀಶ್ ರೆಡ್ಡಿ ಐರ್ಲೆಂಡ್‌ನಲ್ಲಿ ನಡೆಯಲಿರುವ 2 ಟಿ20 ಹಾಗೂ ಇಂಗ್ಲೆಂಡ್‌ನಲ್ಲಿ ನಡೆಯಲಿರುವ 5 ಟಿ20 ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಬಿಸಿಸಿಐ ಬದಲಿ ಆಟಗಾರನನ್ನು ಘೋಷಿಸಿದೆ.

Suryansh Shedge

ಪುರುಷರ ಆಯ್ಕೆ ಸಮಿತಿಯು ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಭಾರತೀಯ ತಂಡದಲ್ಲಿ ಸೂರ್ಯಾಂಶ್ ಶೆಡ್ಗೆಗೆ ಅವಕಾಶ ನೀಡಿದೆ. ಜೂನ್ 20 ರಂದು ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದ ನಂತರ ನಿತೀಶ್ ತಮ್ಮ ಎಡ ತೊಡೆಗೆ ಗಾಯಮಾಡಿಕೊಂಡಿದ್ದರು. ಇವರಿಗೆ ಬಿಸಿಸಿಐ ವೈದ್ಯಕೀಯ ತಂಡವು ಪುನರ್ವಸತಿಗೆ ಒಳಗಾಗಲು ಸಲಹೆ ನೀಡಿದೆ, ಎರಡೂ ಟಿ20ಐ ಸರಣಿಗಳಿಂದ ಅವರನ್ನು ಹೊರಗಿಡಲಾಗಿದೆ.

ಶ್ರೀಲಂಕಾದಲ್ಲಿ ಉತ್ತಮ ಪ್ರದರ್ಶನ

ಇತ್ತೀಚೆಗೆ ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ಭಾರತ ಎ ಪರ ಅದ್ಭುತ ಪ್ರದರ್ಶನ ನೀಡಿದ ನಂತರ ಸೂರ್ಯಾಂಶ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. 23 ವರ್ಷದ ಸೂರ್ಯಾಂಶ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಐದು ಪಂದ್ಯಗಳಲ್ಲಿ 147 ರನ್ ಗಳಿಸಿದರು. 2024-25ರಲ್ಲಿ ಮುಂಬೈ ತಂಡದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದಾಗ ಸೂರ್ಯಾಂಶ್ ಪ್ರಮುಖ ಕಾಣಿಕೆ ನೀಡಿದ್ದರು.

Suryansh Shedge

ಐರ್ಲೆಂಡ್ ವಿರುದ್ಧದ ಟಿ20I ಸರಣಿಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಹರ್ಷಿತ್ ರಾಣಾ, ಅರ್ಶದೀಪ್ ಸಿಂಗ್, ಪ್ರಿನ್ಸ್‌ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ, ಸೂರ್ಯಾಂಶ್‌ ಶೆಡ್ಗೆ

Story first published: Tuesday, June 23, 2026, 16:40 [IST]
Other articles published on Jun 23, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+