For Quick Alerts
ALLOW NOTIFICATIONS  
For Daily Alerts
 

Suzie Bates: ಟೀಮ್ ಇಂಡಿಯಾ ಮಾಜಿ ನಾಯಕಿ ದಾಖಲೆ ಮುರಿದ ಕಿವೀಸ್ ಬ್ಯಾಟರ್

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ಮಹಿಳೆಯರು ಇತಿಹಾಸ ಸೃಷ್ಟಿಸಿದ್ದಾರೆ. ಸೋಫಿ ಡಿವೈನ್ ನಾಯಕತ್ವದಲ್ಲಿ ನ್ಯೂಜಿಲೆಂಡ್ ವನಿತೆಯರ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಮೊಟ್ಟ ಮೊದಲ ಬಾರಿಗೆ ಟಿ20 ವಿಶ್ವಕಪ್‌ ಗೆದ್ದು ಬೀಗಿದೆ.

ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ಧ ದಿಟ್ಟ ಆಲ್‌ರೌಂಡರ್‌ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದೆ. ದಕ್ಷಿಣ ಆಫ್ರಿಕಾ ಸತತ ಎರಡನೇ ಬಾರಿಗೆ ವಿಶ್ವಕಪ್‌ ಫೈನಲ್‌ನಲ್ಲಿ ಮುಗ್ಗರಿಸಿದೆ. ಕಳೆದ ಬಾರಿ 2023 ವಿಶ್ವಕಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಇದೀಗ ಕಿವೀಸ್ ಪಡೆ ಎದುರು ಪ್ರಶಸ್ತಿಯನ್ನು ಕೈ ಚೆಲ್ಲಿದೆ.

Suzie Bates breaks the former Indian womens team captain record

ನ್ಯೂಜಿಲೆಂಡ್ ಪ್ರಶಸ್ತಿ ಗೆದ್ದು ಸಂಭ್ರಮಿಸಿದರೆ, ಅನುಭವಿ ಬ್ಯಾಟರ್ ಸೂಝೀ ಬೇಟ್ಸ್ ಅವರು ವಿಶ್ವ ದಾಖಲೆ ಸೃಷ್ಟಿಸಿದ್ದಾರೆ. ಸೂಝೀ ಬೇಟ್ಸ್ ಮಹಿಳಾ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಇದರೊಂದಿಗೆ ಭಾರತದ ಮಾಜಿ ನಾಯಕಿ ಮತ್ತು ಶ್ರೇಷ್ಠ ಬ್ಯಾಟರ್ ಮಿಥಾಲಿ ರಾಜ್ ಅವರನ್ನು ಸೂಝೀ ಬೇಟ್ಸ್ ಹಿಂದಿಕ್ಕಿದ್ದಾರೆ.

37 ವರ್ಷದ ಬೇಟ್ಸ್ ಅಕ್ಟೋಬರ್ 20 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್ 2024ರ ಫೈನಲ್‌ ಪಂದ್ಯ ಆಡುವ ಮೂಲಕ ಈ ಸಾಧನೆ ಮಾಡಿದ್ದಾರೆ. 2006ರಲ್ಲಿ ತಮ್ಮ 19ನೇ ವಯಸ್ಸಿನಲ್ಲಿ ಬೇಟ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದು, ಇಲ್ಲಿಯವರೆಗೆ ಬೇಟ್ಸ್ ಒಟ್ಟು 334 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದಾರೆ. ಇದರಲ್ಲಿ 163 ಏಕದಿನ ಮತ್ತು 171 ಟಿ20 ಮಹಿಳಾ ಅಂತರಾಷ್ಟ್ರೀಯ ಪಂದ್ಯಗಳಿವೆ. ಮಿಥಾಲಿ ಅವರು ತಮ್ಮ ವೃತ್ತಿಜೀವನದಲ್ಲಿ ಭಾರತವನ್ನು 333 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.

ಮಿಥಾಲಿ ಅವರು ತಮ್ಮ ವೃತ್ತಿಜೀವನದಲ್ಲಿ ಭಾರತವನ್ನು 333 ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ. ಇದರಲ್ಲಿ ಮಿಥಾಲಿ ರಾಜ್ 12 ಟೆಸ್ಟ್, 232 ಏಕದಿನ ಮತ್ತು 89 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಮಿಥಾಲಿ ರಾಜ್ ನಂತರ ಆಸ್ಟ್ರೇಲಿಯದ ಆಲ್‌ರೌಂಡರ್ ಎಲ್ಲಿಸ್ ಪೆರ್ರಿ (322), ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ (316) ಮತ್ತು ಇಂಗ್ಲೆಂಡ್‌ನ ಹಿರಿಯ ಆಟಗಾಟ ಚಾರ್ಲೊಟ್ ಎಡ್ವರ್ಡ್ಸ್ (309) ಟಾಪ್ 5ರಲ್ಲಿ ಸ್ಥಾನ ಪಡೆದಿದ್ದಾರೆ. ಭಾರತದಲ್ಲಿ ಮಿಥಾಲಿ ರಾಜ್ ನಂತರ ಹರ್ಮನ್‌ಪ್ರೀತ್ ಕೌರ್ ಅತಿ ಹೆಚ್ಚು ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ದಾಖಲೆಯನ್ನು ಹೊಂದಿದ್ದಾರೆ.

ಪ್ರಸ್ತುತ ವಿಶ್ವ ಕ್ರಿಕೆಟ್‌ನ ಸ್ಟಾರ್ ಕ್ರಿಕೆಟಿಗರಾದ ಹರ್ಮನ್‌ಪ್ರೀತ್ ಕೌರ್, ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ ಮತ್ತು ಸ್ಟಾಫಾನಿ ಟೇಲರ್ ಜೊತೆಗೆ ಮಹಿಳಾ ಟಿ20 ವಿಶ್ವಕಪ್‌ನ ಎಲ್ಲಾ ಆವೃತ್ತಿಗಳನ್ನು ಬೇಟ್ಸ್ ಆಡಿದ್ದಾರೆ. ಬೇಟ್ಸ್ 163 ಏಕದಿನ ಪಂದ್ಯಗಳನ್ನು ಆಡಿದ್ದು, 13 ಶತಕಗಳು ಮತ್ತು 34 ಅರ್ಧ ಶತಕಗಳೊಂದಿಗೆ 5718 ರನ್ ಬಾರಿಸಿದ್ದಾರೆ.

Story first published: Monday, October 21, 2024, 12:13 [IST]
Other articles published on Oct 21, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+