IPL 2025: ಪರ್ಪಲ್ ಕ್ಯಾಪ್ ಮೇಲೆ ಕಣ್ಣಿಟ್ಟಿ ಆರ್‍ಸಿಬಿ ಬೌಲರ್
ಇಂಡಿಯನ್ ಪ್ರೀಮಿಯರ್ ಲೀಗ್ 2025 (ಐಪಿಎಲ್) ಟೂರ್ನಿಗಾಗಿ ಕಾಯುವಿಕೆ ಬಹುತೇಕ ಮುಗಿದಿದೆ. ಈ ಮೆಗಾ ಲೀಗ್ ಮಾರ್ಚ್ 22 ರಂದು ಆರಂಭವಾಗಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಉದ್ಘಾಟನಾ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಐಪಿಎಲ್ 2025 ರಲ್ಲಿ ಒಟ್ಟು 74 ಪಂದ್ಯಗಳು ನಡೆಯಲಿದ್ದು, ಸ್ಟಾರ್ ಆಟಗಾರರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಐಪಿಎಲ್ ಸೀಸನ್‌ವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗೆ ಪರ್ಪಲ್ ಕ್ಯಾಪ್ ಮತ್ತು ಹೆಚ್ಚು ರನ್ ಬಾರಿಸಿದ ಬ್ಯಾಟರ್‍ಗೆ ಆರೆಂಜ್ ಕ್ಯಾಪ್ ನೀಡಲಾಗುತ್ತಿದೆ. ಐಪಿಎಲ್ 2025ರಲ್ಲಿ ಕೆಲವು ಸ್ಟಾರ್ ಬೌಲರ್‌ಗಳು ಪರ್ಪಲ್ ಕ್ಯಾಪ್ ಮೇಲೆ ಕಣ್ಣಿಟ್ಟಿದ್ದಾರೆ. ಹಾಗೆಯೇ ಆರ್‍ಸಿಬಿಯ ಸ್ಟಾರ್ ಬೌಲರ್‍ವೊಬ್ಬರು ಕೂಡ ಪರ್ಪಲ್ ಕ್ಯಾಪ್ ಗೆಲ್ಲಲು ಪಣ ತೊಟ್ಟಿದ್ದಾರೆ.

ಟೀಮ್ ಇಂಡಿಯಾದ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಐಪಿಎಲ್ 2025ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡಲಿದ್ದಾರೆ. ಅವರು ದೀರ್ಘಕಾಲ ಸನ್‌ರೈಸರ್ಸ್ ಹೈದರಾಬಾದ್ ತಂಡದ ಭಾಗವಾಗಿದ್ದರು. ಆದರೆ ಎಸ್‌ಆರ್‍ಹೆಚ್ ಈ ಬಾರಿ ಅವರನ್ನು ಉಳಿಸಿಕೊಳ್ಳಲಿಲ್ಲ. ಈಗ ಆರ್‍ಸಿಬಿ ಪರ ಕಮಾಲ್ ಮಾಡಲು ಸಜ್ಜಾಗಿದ್ದಾರೆ.
ಭುವಿ ಕಡೆ ಚಿತ್ತ
ಐಪಿಎಲ್‌ನಲ್ಲಿ ಎರಡು ಬಾರಿ ಪರ್ಪಲ್ ಕ್ಯಾಪ್ ಗೆದ್ದಿರುವ ಭುವನೇಶ್ವರ್ ಕುಮಾರ್ ಬಳಿ ಎಲ್ಲಾ ಬೌಲಿಂಗ್ ಅಸ್ತ್ರಗಳಿವೆ. ಈ ಬಾರಿ ಅವರು ಪರ್ಪಲ್ ಕ್ಯಾಪ್ ಗೆದ್ದು ಇತಿಹಾಸ ಸೃಷ್ಟಿಸಲು ಸಜ್ಜಾಗಿದ್ದಾರೆ. ಐಪಿಎಲ್‌ನಲ್ಲಿ ಮೂರ ಬಾರಿ ಪರ್ಪಲ್ ಕ್ಯಾಪ್ ಗೆದ್ದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಮೆಗಾ ಹರಾಜಿನಲ್ಲಿ ಆರ್‌ಸಿಬಿ ಖರೀದಿಸಿರುವ ಭುವನೇಶ್ವರ್, ಅನನುಭವಿ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಅವರಿಗೆ ಆಸ್ಟ್ರೇಲಿಯಾದ ಅಪಾಯಕಾರಿ ಬೌಲರ್ ಜೋಶ್ ಹೇಜಲ್‌ವುಡ್ ಬೆಂಬಲ ನೀಡಲಿದ್ದಾರೆ. ಇವರಿಬ್ಬರನ್ನು ಬಿಟ್ಟರೆ ತಂಡದಲ್ಲಿ ಅನುಭವಿ ಬೌಲರ್ ಯಾರೂ ಇಲ್ಲ.
ಸ್ವಿಂಗ್ ಮಾಸ್ಟರ್
ಭುವನೇಶ್ವರ್ ಎದುರಾಳಿ ತಂಡವನ್ನು ಕಟ್ಟಿ ಹಾಕಬಲ್ಲ ಕೌಶಲ್ಯ ಮತ್ತು ವಿಕೆಟ್ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಅನುಭವ ಮತ್ತು ಸ್ವಿಂಗ್ ಬೌಲಿಂಗ್ ಅವರನ್ನು ಆರ್‌ಸಿಬಿಗೆ ಪ್ರಮುಖ ಅಸ್ತ್ರವನ್ನಾಗಿ ಮಾಡಿದೆ. ಪವರ್‌ಪ್ಲೇ ಮತ್ತು ಡೆತ್ ಓವರ್‌ಗಳಲ್ಲಿ ಅವರಿಗೆ ವಿಕೆಟ್ ಪಡೆಯುವ ಸಾಮರ್ಥ್ಯವಿದೆ. ಆರ್‌ಸಿಬಿ ಬೌಲಿಂಗ್ ದಾಳಿಯಲ್ಲಿ ಅನುಭವದ ಕೊರತೆಯನ್ನು ಗಮನಿಸಿದರೆ, ಭುವನೇಶ್ವರ್ ಅವರ ಪ್ರದರ್ಶನ ತಂಡಕ್ಕೆ ಬಹಳ ಮುಖ್ಯವಾಗಲಿದೆ.
ಆರ್‍ಸಿಬಿ ಅಸ್ತ್ರ
ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು, ಪರ್ಪಲ್ ಕ್ಯಾಪ್ ಗೆದ್ದ ಅನುಭವ ಹೊಂದಿದ್ದಾರೆ. ಅವರು ತಮ್ಮ ಫಾರ್ಮ್ ಅನ್ನು ಕಾಯ್ದುಕೊಂಡು ಆರ್‌ಸಿಬಿ ಬೌಲಿಂಗ್ ದಾಳಿಯನ್ನು ಮುನ್ನಡೆಸಿದರೆ, ಐಪಿಎಲ್ 2025ರಲ್ಲಿ ಅವರು ಮತ್ತೊಮ್ಮೆ ಪರ್ಪಲ್ ಕ್ಯಾಪ್ ಗೆಲ್ಲಬಹುದು. ಅವರು ಸ್ಥಿರ ಪ್ರದರ್ಶನ ನೀಡುವ ಮೂಲಕ ಆರ್‌ಸಿಬಿಯನ್ನು ಪ್ಲೇಆಫ್‌ಗೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಬೇಕು.
ವೃತ್ತಿಜೀವನ
ಭುವನೇಶ್ವರ್ ಇದುವರೆಗೆ ಐಪಿಎಲ್‌ನಲ್ಲಿ ಆರ್‌ಸಿಬಿ, ಪುಣೆ ವಾರಿಯರ್ಸ್ ಇಂಡಿಯಾ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಪರ ಆಡಿದ್ದಾರೆ. ಅವರು ಐಪಿಎಲ್ 2025ರಲ್ಲಿ ಆರ್‌ಸಿಬಿಗೆ ಮರಳಿದ್ದಾರೆ. ಭುವನೇಶ್ವರ್ 2011 ರಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಆಡಿದರು. ಇಲ್ಲಿಯವರೆಗೆ ಐಪಿಎಲ್‌ನಲ್ಲಿ ಅವರು 176 ಪಂದ್ಯಗಳನ್ನು ಆಡಿದ್ದು, 181 ವಿಕೆಟ್‌ಗಳನ್ನು ಪಡೆದಿದ್ದಾರೆ. ಭುವನೇಶ್ವರ್ ಒಂದೇ ಇನ್ನಿಂಗ್ಸ್‌ನಲ್ಲಿ ಎರಡು ಬಾರಿ 5 ಅಥವಾ ಅದಕ್ಕಿಂತ ಹೆಚ್ಚು ವಿಕೆಟ್‌ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications