Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಲೈಂಗಿಕ ದೌರ್ಜನ್ಯದ ಆರೋಪ: ಸಿಡ್ನಿಯಲ್ಲಿ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣತಿಲಕ ಬಂಧನ

Sydney Police Arrested Sri Lankan Cricketer Danushka Gunathilaka

ಶ್ರೀಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ನವೆಂಬರ್ 5 ರಂದು ಸಿಡ್ನಿಯಲ್ಲಿ ಬಂಧಿಸಲಾಗಿದೆ. ಶ್ರೀಲಂಕಾ ಕ್ರಿಕೆಟ್ (ಎಸ್‌ಎಲ್‌ಸಿ) ಮಾಹಿತಿಯ ಪ್ರಕಾರ, ಮಹಿಳೆಯೊಬ್ಬರು ಮಾಡಿದ ಲೈಂಗಿಕ ದೌರ್ಜನ್ಯದ ಆರೋಪದ ನಂತರ ದನುಷ್ಕ ಗುಣತಿಲಕ ಅವರನ್ನು ಬಂಧಿಸಲಾಗಿದೆ.

ಸಿಡ್ನಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದನುಷ್ಕ ಗುಣತಿಲಕ ಶ್ರೀಲಂಕಾ ತಂಡದ ಜೊತೆಗಿದ್ದರು. ಪಂದ್ಯ ಮುಗಿದ ಬಳಿಕ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಆಸ್ಟ್ರೇಲಿಯಾದ ಮಾಧ್ಯಮ ವರದಿಗಳ ಪ್ರಕಾರ, ಡೇಟಿಂಗ್ ಅಪ್ಲಿಕೇಶನ್ ಮೂಲಕ ದನುಷ್ಕಾ ಗುಣತಿಲಕ 29 ವರ್ಷದ ಮಹಿಳೆಯನ್ನು ಭೇಟಿಯಾಗಿದ್ದರು. ಅದೇ ಮಹಿಳೆ ಈಗ ದನುಷ್ಕ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.

ಈ ವಾರದ ಆರಂಭದಲ್ಲಿ ಸಿಡ್ನಿಯ ನಿವಾಸದಲ್ಲಿ ಈ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಶ್ರೀಲಂಕಾದ ಕ್ರಿಕೆಟಿಗನನ್ನು ಶನಿವಾರ ರಾತ್ರಿ ಟೀಮ್ ಹೋಟೆಲ್‌ನಲ್ಲಿ ಬಂಧಿಸಲಾಯಿತು. ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಹೇಳಲಾಗಿದೆ.

ವರದಿಗಳ ಪ್ರಕಾರ, ಸಿಡ್ನಿಯ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್‌ನಲ್ಲಿರುವ ಟೀಮ್ ಹೋಟೆಲ್‌ನಿಂದ ಬಂಧಿಸಲಾಗಿದೆ. ವಾರದ ಆರಂಭದಲ್ಲಿ ರೋಸ್ ಬೇಯಲ್ಲಿರುವ ಮನೆಯಲ್ಲಿ ಲೈಂಗಿಕ ದೌರ್ಜನ್ಯ ಮಾಡಿರುವುದಾಗಿ ಆರೋಪಿಸಲಾಗಿದೆ.

ಆನ್‌ಲೈನ್ ಡೇಟಿಂಗ್ ಅಪ್ಲಿಕೇಷನ್ ಮೂಲಕ ಪರಿಚಯ

"ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್ ಮೂಲಕ ಹಲವಾರು ದಿನಗಳವರೆಗೆ ಸಂವಹನ ನಡೆಸಿದ ನಂತರ ಮಹಿಳೆ ದನುಷ್ಕರನ್ನು ಭೇಟಿಯಾಗಿದ್ದಾಳೆ. ನವೆಂಬರ್ 2, 2022 ರ ಸಂಜೆ ಅವನು ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ" ಎಂದು ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆ ಆರೋಪಿಸಿದ್ದಾರೆ.

Sydney Police Arrested Sri Lankan Cricketer Danushka Gunathilaka

ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು, ಲೈಂಗಿಕ ದೌರ್ಜ್ಯನ್ಯ ನಡೆದಿದೆ ಎನ್ನಲಾದ ರೋಸ್‌ ಬೇಯಲ್ಲಿರುವ ಸ್ಥಳದಲ್ಲಿ ವಿಶೇಷ ಪೊಲೀಸರು ಸ್ಥಳ ಪರಿಶೀಲನೆಯನ್ನು ನಡೆಸಿದ್ದು, ಸರಿಯಾದ ಸಾಕ್ಷಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಹೆಚ್ಚಿನ ವಿಚಾರಣೆಯ ನಂತರ, ಸಿಡ್ನಿಯ ಸಸೆಕ್ಸ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ದನುಷ್ಕ ಅವರನ್ನು ಬಂಧಿಸಲಾಯಿತು, ಎಂದು ನ್ಯೂ ಸೌತ್ ವೇಲ್ಸ್ ಪೊಲೀಸ್ ಹೇಳಿಕೆಯನ್ನು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ಉಲ್ಲೇಖಿಸಿದೆ.

"ದನುಷ್ಕರನ್ನು ಸಿಡ್ನಿ ನಗರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಮತ್ತು ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗದ ಆರೋಪ ಹೊರಿಸಲಾಯಿತು. ಶ್ರೀಲಂಕಾ ಕ್ರಿಕೆಟಿಗನಿಗೆ ಎವಿಎಲ್ ಮೂಲಕ ಪರಮಟ್ಟಾ ಬೈಲ್ ಕೋರ್ಟ್‌ಗೆ ಹಾಜರಾಗಲು ಜಾಮೀನು ನಿರಾಕರಿಸಲಾಗಿದೆ," ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮಂಡಿರಜ್ಜು ಗಾಯದಿಂದಾಗಿ ಗುಣತಿಲಕ ಅವರು ಪ್ರಾಥಮಿಕ ಸುತ್ತಿನಲ್ಲಿ ಟಿ20 ವಿಶ್ವಕಪ್‌ನಿಂದ ಹಿಂದೆ ಸರಿಯಬೇಕಾಯಿತು. ಅವರನ್ನು ತಂಡದಲ್ಲಿ ಬದಲಾಯಿಸಲಾಯಿತು, ಆದರೆ ಅವರು ತಂಡದೊಂದಿಗೆ ಆಸ್ಟ್ರೇಲಿಯಾದಲ್ಲಿ ಉಳಿದರು.

ನವೆಂಬರ್ 2015 ರಲ್ಲಿ ಪಾದಾರ್ಪಣೆ ಮಾಡಿದ ನಂತರ ಅವರು ಶ್ರೀಲಂಕಾ ಪರ 8 ಟೆಸ್ಟ್, 47 ಏಕದಿನ ಮತ್ತು 46 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ.

ಸೂಪರ್ 12 ಹಂತದ ತಮ್ಮ ಅಂತಿಮ ಪಂದ್ಯದಲ್ಲಿ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ನಂತರ, ಶ್ರೀಲಂಕಾ ಭಾನುವಾರ ಪಂದ್ಯಾವಳಿಯಿಂದ ಹೊರಬಿದ್ದಿದೆ. ದನುಷ್ಕ ಗುಣತಿಲಕ ಆಸ್ಟ್ರೇಲಿಯಾದಲ್ಲೆ ಉಳಿಯಲಿದ್ದು, ಶ್ರೀಲಂಕಾ ತಂಡ ಕೊಲಂಬೋಗೆ ಪ್ರಯಾಣಿಸಲಿದೆ.

Story first published: Sunday, November 6, 2022, 11:11 [IST]
Other articles published on Nov 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+