Sydney Test: ರೋಹಿತ್ ಶರ್ಮಾ ಔಟ್: ಪ್ರಸಿದ್ಧ ಕೃಷ್ಣ ಇನ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಬಾರ್ಡರ್ ಗವಾಸ್ಕರ್ ಸರಣಿಯ ಐದನೇ ಟೆಸ್ಟ್ ಪಂದ್ಯ ಸಿಡ್ನಿಯಲ್ಲಿ ನಡೆಯುತ್ತಿದೆ. ಆಸ್ಟ್ರೇಲಿಯಾ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ನಿರೀಕ್ಷೆಯಂತೆ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಯಾರ್ಕರ್ ಸ್ಪೆಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರಿಗೆ ನಾಯಕತ್ವದ ಹೊಣೆಯನ್ನು ನೀಡಲಾಗಿದೆ. ತಂಡದಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ಪ್ರಸಿದ್ಧ ಕೃಷ್ಣಾ ಅವರಿಗೆ ಅವಕಾಶ ನೀಡಲಾಗಿದೆ.
ಸಿಡ್ನಿಯಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಮ್ ಇಂಡಿಯಾದ ಪರ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ಇನಿಂಗ್ಸ್ ಆರಂಭಿಸುವ ಹೊಣೆಯನ್ನು ಹೊತ್ತಕೊಂಡಿದ್ದಾರೆ. ಭಾರತದ ಪರ ನಾಯಕ ರೋಹಿತ್ ಶರ್ಮಾ ಪ್ರಸಕ್ತ ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರಿಂದ ಇವರನ್ನು ತಂಡದಿಂದ ಕೈ ಬಿಡಲಾಗಿದೆ. ಇವರ ಬದಲಿಗೆ ತಂಡವನ್ನು ಜಸ್ಪ್ರಿತ್ ಬುಮ್ರಾ ಮುನ್ನಡೆಸುತ್ತಿದ್ದಾರೆ.

ಶುಭಮನ್ ಗಿಲ್‌ಗೆ ಅವಕಾಶ
ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಶುಭಮನ್ ಗಿಲ್ ಅವರಿಗೆ ನಾಲ್ಕನೇ ಟೆಸ್ಟ್ ನಿಂದ ಹೊರಗಿಡಲಾಗಿತ್ತು. ಐದನೇ ಟೆಸ್ಟ್ ಪಂದ್ಯದಲ್ಲಿ ಮತ್ತೆ ತಂಡ ಸೇರಿದ್ದಾರೆ. ರೋಹಿತ್ ಶರ್ಮಾ ತಂಡದಿಂದ ಹೊರಗುಳಿದಿದ್ದು, ಗಿಲ್‌ಗೆ ಅವಕಾಶ ಸಿಕ್ಕಿದೆ. ಈ ಪಂದ್ಯದಲ್ಲಿ ಗಿಲ್ ದೊಡ್ಡ ಇನಿಂಗ್ಸ್ ಕಟ್ಟುವ ನಿರೀಕ್ಷೆಯನ್ನು ಹೊಂದಿದ್ದಾರೆ.
ಪ್ರಸಿದ್ಧಗೆ ಸ್ಥಾನ
ಕರ್ನಾಟಕದ ಸ್ಟಾರ್ ಆಟಗಾರ ಪ್ರಸಿದ್ಧ ಕೃಷ್ಣಾ ಅವರಿಗೆ ಐದನೇ ಟೆಸ್ಟ್ ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿದೆ. ಇವರು ಭಾರತ "ಎ" ಪರ ಅಮೋಘ ಪ್ರದರ್ಶನ ನೀಡಿದ್ದರಿಂದ ಇವರಿಗೆ ಆಡುವ ತಂಡದಲ್ಲಿ ಅವಕಾಶ ನೀಡಲಾಗಿದೆ. ಭಾರತ ಮೂವರು ಪೇಸ್ ಬೌಲರ್‌ಗಳೊಂದಿಗೆ ಅಂಗಳಕ್ಕೆ ಇಳಿಯಲಿದೆ. ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್ ಜೊತೆ ಪ್ರಸಿದ್ಧ ಕೃಷ್ಣ ಬೌಲಿಂಗ್ ನಡೆಸಲಿದ್ದಾರೆ.
ಕಳಪೆ ಆರಂಭ
ಟೀಮ್ ಇಂಡಿಯಾದ ಸ್ಟಾರ್ ಆರಂಭಿಕ ಆಟಗಾರರು ಮಹತ್ವದ ಟೆಸ್ಟ್‌ನಲ್ಲಿ ತಂಡಕ್ಕೆ ನೆರವಾಗುವಲ್ಲಿ ವಿಫಲರಾಗಿದ್ದಾರೆ. ಮತ್ತೆ ಆರಂಭಿಕರಾಗಿ ಕಾಣಿಸಿಕೊಂಡ ಕೆಎಲ್ ರಾಹುಲ್ ಹಾಗೂ ಯಶಸ್ವಿ ಜೈಸ್ವಾಲ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ರಾಹುಲ್ 4 ರನ್ ಬಾರಿಸಿ ಪೆವಿಲಿಯನ್ ಹಾದಿ ಹಿಡಿದರು. ಇನ್ನು ಯಶಸ್ವಿ ಜೈಸ್ವಾಲ್ 10 ರನ್ ಸಿಡಿಸಿ ಔಟ್ ಆದರು. ಟೀಮ್ ಇಂಡಿಯಾದ 17 ರನ್ ಆಗಿದ್ದಾಗ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.
ಭಾರತ ತಂಡ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್, ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ,
ಆಸ್ಟ್ರೇಲಿಯಾ ತಂಡ: ಉಸ್ಮಾನ್ ಖವಾಜಾ, ಸ್ಯಾಮ್ ಕಾನ್ಸ್ಟಾಸ್, ಮಾರ್ನಸ್ ಲಂಬುಶೇನ್, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications