For Quick Alerts
ALLOW NOTIFICATIONS  
For Daily Alerts
 

Syed Mushtaq Ali Trophy 2023 Final: ಬರೋಡಾ ಸೋಲಿಸಿ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿಹಿಡಿದ ಪಂಜಾಬ್

ಸೋಮವಾರ, ನವೆಂಬರ್ 6ರಂದು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಬರೋಡಾ ತಂಡವನ್ನು ಸೋಲಿಸಿದ ಪಂಜಾಬ್ ತಂಡ ಚೊಚ್ಚಲ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ.

ಪ್ರಶಸ್ತಿ ಹಣಾಹಣಿ ಪಂದ್ಯದಲ್ಲಿ ಬರೋಡಾ ತಂಡವನ್ನು 20 ರನ್‌ಗಳಿಂದ ರೋಚಕವಾಗಿ ಸೋಲಿಸುವ ಮೂಲಕ ಪಂಜಾಬ್ ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಯಿತು.

ಬ್ಯಾಟಿಂಗ್‌ನಲ್ಲಿ ಅನ್ಮೋಲ್‌ಪ್ರೀತ್ ಸಿಂಗ್ ಮತ್ತು ನಂತರ ಬೌಲಿಂಗ್‌ನಲ್ಲಿ ಅರ್ಶ್‌ದೀಪ್ ಸಿಂಗ್ ಅದ್ಭುತ ಪ್ರದರ್ಶನ ನೀಡುವ ಮೂಲಕ ಪಂಜಾಬ್ ತಂಡಕ್ಕೆ ಹೀರೋಗಳಾಗಿ ಹೊರಹೊಮ್ಮಿದರು.

syed-mushtaq-ali-trophy-2023-final

ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ತಂಡ ಅನ್ಮೋಲ್‌ಪ್ರೀತ್ ಸಿಂಗ್ ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 223 ರನ್‌ಗಳನ್ನು ಕಲೆಹಾಕಿತು.

224 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಬರೋಡ ತಂಡ ಅಗ್ರ ಕ್ರಮಾಂಕದ ಅದ್ಭುತ ಬ್ಯಾಟಿಂಗ್ ಹೊರತಾಗಿಯೂ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 203 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು ಮತ್ತು 20 ರನ್‌ಗಳಿಂದ ವೀರೋಚಿತ ಸೋಲು ಅನುಭವಿಸಿತು.

ಪಂಜಾಬ್ ತಂಡದ ಪರ 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಅನ್ಮೋಲ್‌ಪ್ರೀತ್ ಸಿಂಗ್ ಕೇವಲ 61 ಎಸೆತಗಳಲ್ಲಿ 10 ಬೌಂಡರಿ ಮತ್ತು 6 ಸಿಕ್ಸರ್‌ಗಳ ನೆರವಿನಿಂದ 113 ರನ್ ಬಾರಿಸಿ ಹೀರೋ ಆದರು.

Syed Mushtaq Ali Trophy 2023 Final: Punjab Clinched the Trophy For the First Time After Defeating Baroda

ಇನ್ನಿಂಗ್ಸ್‌ನ ಕೊನೆಯಲ್ಲಿ ನೆಹಾಲ್ ವಧೇರಾ ಅವರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಪ್ರಮುಖವಾಗಿತ್ತು. ನೆಹಾಲ್ ಕೇವಲ 27 ಎಸೆತಗಳಲ್ಲಿ 6 ಬೌಂಡರಿ ಮತ್ತು 4 ಸಿಕ್ಸರ್ ಸಮೇತ 61 ರನ್ ಗಳಿಸಿದರು ಮತ್ತು ಪಂಜಾಬ್ ತಂಡದ ಮೊತ್ತವನ್ನು 200 ರನ್ ಗಡಿ ದಾಟಿಸಿದರು.

224 ರನ್‌ಗಳ ಗುರಿ ಬೆನ್ನಟ್ಟಿದ ಬರೋಡಾ ತಂಡದ ಪರ ಅಭಿಮನ್ಯುಸಿಂಗ್ ರಜಪೂತ್ 42 ಎಸೆತಗಳಲ್ಲಿ 61 ರನ್, ನಿನಾದ್ ರಥ್ವಾ 22 ಎಸೆತಗಳಲ್ಲಿ 47 ರನ್, ಕೃನಾಲ್ ಪಾಂಡ್ಯ 32 ಎಸೆತಗಳಲ್ಲಿ 45 ರನ್ ಮತ್ತು ವಿಷ್ಣು ಸೋಲಂಕಿ 11 ಎಸೆತಗಳಲ್ಲಿ 28 ರನ್‌ಗಳ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನದ ಹೊರತಾಗಿಯೂ, ವಿಫಲ ಪ್ರಯತ್ನ ನಡೆಸಿದರು.

ಬೌಲಿಂಗ್‌ನಲ್ಲಿ ಪಂಜಾಬ್ ಪರ ಅರ್ಶ್‌ದೀಪ್ ಸಿಂಗ್ 4 ಓವರ್‌ಗಳಲ್ಲಿ ಕೇವಲ 23 ರನ್ ನೀಡಿ ಪ್ರಮುಖ 4 ವಿಕೆಟ್ ಕಬಳಿಸಿ ಅತ್ಯುತ್ತಮ ಬೌಲರ್ ಎನಿಸಿಕೊಂಡರು.

ಇನ್ನು ಫೈನಲ್ ಪಂದ್ಯದಲ್ಲಿ ಪಂದ್ಯ ವಿಜೇತ ಶತಕ ಬಾರಿಸಿದ ಅನ್ಮೋಲ್‌ಪ್ರೀತ್ ಸಿಂಗ್‌ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಇಡೀ 2023ರ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಪಂಜಾಬ್ ಪರ 485 ರನ್ ಹಾಗೂ 2 ವಿಕೆಟ್ ಪಡೆದ ಅಭಿಷೇಕ್ ಶರ್ಮಾ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Story first published: Monday, November 6, 2023, 21:39 [IST]
Other articles published on Nov 6, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+