ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

SMAT T20: ಬಲಿಷ್ಠ ಕರ್ನಾಟಕ ತಂಡ ಪ್ರಕಟ: ಅನುಭವಿ ಆಟಗಾರನಿಲ್ಲ ಸ್ಥಾನ; ಮನೀಶ್ ಪಾಂಡೆ ಕೈತಪ್ಪಿದ ನಾಯಕತ್ವ

Syed Mushtaq Ali trophy: Mayank Agarwal led 15 members Karnataka team announced

ದೇಶೀಯ ಕ್ರಿಕೆಟ್‌ನ ಟಿ20 ಮಾದರಿಯಾದ ಸೈಯದ್ ಮುಷ್ತಾಕ್ ಅಲಿ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿಯಿದೆ. ಅಕ್ಟೋಬರ್ 11ರಿಂದ ಮೊಹಾಲಿಯಲ್ಲಿ ಆರಂಭವಾಗಲಿರುವ ಈ ಟೂರ್ನಿಗೆ ಈಗ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಈ ಬಾರಿಯ ಟೂರ್ನಿಯಲ್ಲಿ ಭಾಗವಹಿಸುವ ಕರ್ನಾಟಕ ತಂಡದಲ್ಲಿ ಕೆಲ ಮಹತ್ವದ ಬದಲಾವಣೆಗಳು ಆಗಿದ್ದು ಕುತೂಹಲ ಕೆರಳಿಸಿದೆ.

ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಈ ಬಾರಿ ಕರ್ನಾಟಕ ತಂಡದ ನಾಯಕತ್ವದಲ್ಲಿ ಬದಲಾವಣೆಯಾಗಿದೆ. ಚುಟುಕು ಮಾದರಿಯಲ್ಲಿ ಮನೀಶ್ ಪಾಂಡೆ ಬದಲಿಗೆ ಮಯಾಂಕ್ ಅಗರ್ವಾಲ್ ಕರ್ನಾಟಕ ತಂಡವನ್ನು ಮುನ್ನಟಡೆಸುತ್ತಿರುವುದು ಗಮನಾರ್ಹ ಸಂಗತಿ. ಮನೀಶ್ ಪಾಂಡೆ ಅನುಭವಿ ಬ್ಯಾಟರ್ ಆಗಿ ತಂಡದಲ್ಲಿ ಮುಂದುವರಿಯಲಿದ್ದಾರೆ.

T20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರT20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರ

ತಂಡದಿಂದ ಹೊರಬಿದ್ದ ಅನುಭವಿ ಕರುಣ್

ತಂಡದಿಂದ ಹೊರಬಿದ್ದ ಅನುಭವಿ ಕರುಣ್

ಕರ್ನಾಟಕ ತಂಡದ ಅನುಭವಿ ಆಟಗಾರ ಹಾಗೂ ಮಾಜಿ ನಾಯಕ ಕರುಣ್ ನಾಯರ್ ಈ ಬಾರಿಯ ಸೈಯದ್ ಮುಷ್ತಾಕ್ ಅಲಿ ಟೂರ್ನಿಗೆ ಆಯ್ಕೆಯಾಗುವಲ್ಲಿ ವಿಫಲವಾಗಿದ್ದಾರೆ. ಈ ಬಾರಿಯ ಸಂಭಾವ್ಯ ತಂಡದಿಂದಲೇ ಅವರು ಹೊರಬಿದ್ದಿದ್ದರು. ಫಾರ್ಮ್ ಕೊರತೆ ಹಾಗೂ ರನ್‌ಗಳಿಸಲು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. ಹೀಗಾಗಿ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯಿಂದ ಕರುಣ್ ನಾಯರ್ ಹೊರಬಿದ್ದಿದ್ದಾರೆ.

15 ಆಟಗಾರ ತಂಡ ಪ್ರಕಟ

15 ಆಟಗಾರ ತಂಡ ಪ್ರಕಟ

15 ಆಟಗಾರರ ತಂಡವನ್ನು ಗುರುವಾರ ಪ್ರಕಟಿಸಲಾಗಿದ್ದು ಮಯಾಂಕ್ ಅಗರ್ವಾಲ್‌ಗೆ ತಂಡದ ನಾಯಕತ್ವದ ಹೊಣೆಗಾರಿಕೆ ದೊರೆತಿದೆ. ದೇವದತ್ ಪಡಿಕ್ಕಲ್ ಆರಂಭಿಕನಾಗಿ ನಾಯಕ ಮಯಾಂಕ್‌ಗೆ ಸಾಥ್ ನೀಡಲಿದ್ದಾರೆ. ಉಳಿದಂತೆ ಮಾಜಿ ನಾಯಕ ಮನೀಶ್ ಪಾಂಡೆ ಚೇತನ್ ಎಲ್‌ಆರ್, ಅಭಿನವ್ ಮನೋಹರ್ ಸ್ಥಾನವನ್ನು ಪಡೆದುಕೊಳ್ಳುವಲ್ಲಿ ಸಫಲವಾಗಿದ್ದಾರೆ.

ಮಧ್ಯಮ ಕ್ರಮಾಂಕದಲ್ಲಿ ಅನುಭವಿಗಳ ಬಲ

ಮಧ್ಯಮ ಕ್ರಮಾಂಕದಲ್ಲಿ ಅನುಭವಿಗಳ ಬಲ

ಇನ್ನು ಪ್ರಮುಖ ಆಟಗಾರರಾದ ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ಸುಚಿತ್ ಜೆ ಕೂಡ ತಂಡದ ಭಾಗವಾಗಿದ್ದು ವಿಕೆಟ್ ಕೀಪರ್ ಬ್ಯಾಟರ್‌ಗಳಾಗಿ ಲಿನಿತ್ ಸಿಸೋಡಿಯಾ ಹಾಗೂ ಶರತ್ ಬಿಆರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಕೌಶಿಕ್ ವಿ, ವೈಶಾಕ್ ವಿ, ವಿದ್ವತ್ ಕಾವೇರಪ್ಪ, ವೆಂಕಟೇಶ್ ಎಂ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಕರ್ನಾಟಕ ಸಂಪೂರ್ಣ ಸ್ಕ್ವಾಡ್ ಹೀಗಿದೆ

ಕರ್ನಾಟಕ ಸಂಪೂರ್ಣ ಸ್ಕ್ವಾಡ್ ಹೀಗಿದೆ

ಕರ್ನಾಟಕ ತಂಡ: ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್, ಮನೀಶ್ ಪಾಂಡೆ, ಚೇತನ್ ಎಲ್‌ಆರ್, ಅಭಿನವ್ ಮನೋಹರ್, ಮನೋಜ್ ಬಂಡಾಗೆ, ಕೃಷ್ಣಪ್ಪ ಗೌತಮ್, ಶ್ರೇಯಸ್ ಗೋಪಾಲ್, ಸುಚಿತ್ ಜೆ, ಲಿನಿತ್ ಸಿಸೋಡಿಯಾ(ವಿಕೆಟ್ ಕೀಪರ್), ಶರತ್ ಬಿಆರ್(ವಿಕೆಟ್ ಕೀಪರ್), ಕೌಶಿಕ್ ವಿ, ವೈಶಾಕ್ ವಿ, ವಿದ್ವತ್ ಕಾವೇರಪ್ಪ, ವೆಂಕಟೇಶ್ ಎಂ

Story first published: Thursday, October 6, 2022, 20:06 [IST]
Other articles published on Oct 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X