ಉಮೇಶ್ ಯಾದವ್ ಬದಲಿಗೆ ಟೆಸ್ಟ್ ಸ್ಕ್ವಾಡ್‌ಗೆ ಸೇರ್ಪಡೆಗೊಂಡ ಟಿ ನಟರಾಜನ್

ಆಸ್ಟ್ರೇಲಿಯಾ ವಿರುದ್ಧದ ಮೂರು ಹಾಗೂ ನಾಲ್ಕನೇ ಟೆಸ್ಟ್‌ನಿಂದ ಉಮೇಶ್ ಯಾದವ್ ಹೊರಬಿದ್ದಿದ್ದಾರೆ. ಎರಡನೇ ಟೆಸ್ಟ್ ಪಂದ್ಯದ ಸಂದರ್ಭದಲ್ಲಿ ಉಮೇಶ್ ಯಾದವ್ ಗಾಯಗೊಂಡಿದ್ದರು. ಹೀಗಾಗಿ ಉಮೇಶ್ ಯಾದವ್ ಸ್ಥಾನಕ್ಕೆ ಟಿ ನಟರಾಜನ್ ಅವರನ್ನು ಸೇರಿಸಿಕೊಳ್ಳಲಾಗಿದೆ. ಈ ಬಗ್ಗೆ ಬಿಸಿಸಿಐ ಶುಕ್ರವಾರ ಅಧಿಕೃತವಾಗಿ ಮಾಹಿತಿ ನೀಡಿದೆ.
ಆಸ್ಟ್ರೇಲಿಯಾ ಹಾಗೂ ಭಾರತ ನಡುವಿನ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಎರಡು ತಂಡಗಳು ಕೂಡ 1-1ರ ಅಂತರದಿಂದ ಸಮಬಲ ಸಾಧಿಸಿದೆ. ಟೆಸ್ಟ್ ಸರಣಿಯ ಮೊದಲ ಪಂದ್ಯ ಅಹರ್ನಿಶಿಯಾಗಿ ಸಾಗಿದ್ದು ಇದರಲ್ಲಿ ಆಸ್ಟ್ರೇಲಿಯಾ 8 ವಿಕೆಟ್‌ಗಳಿಂದ ಗೆಲುವು ಸಾಧಿಸಿದರೆ ಮೆಲ್ಬರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಗೆದ್ದು ಬೀಗಿತ್ತು.

ಉಮೇಶ್ ಯಾದವ್‌ಗೆ ಗಾಯ
"ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನ ಮೂರನೇ ದಿನದಾಟದ ಸಂದರ್ಭದಲ್ಲಿ ವೇಗಿ ಉಮೇಶ್ ಯಾದವ್ ತಮ್ಮ ಸ್ನಾಯುಗಳಲ್ಲಿ ಒತ್ತಡವನ್ನು ಅನುಭವಿಸಿದ್ದಾರೆ. ಅದೇ ದಿನ ಅವರು ಸ್ಕ್ಯಾನಿಂಗ್‌ಗೆ ಒಳಗಾಗಿದ್ದು ಸಂಪೂರ್ಣವಾಗಿ ಗುಣಮುಖರಾಗಲು ಕಾಲಾವಕಾಶ ಬೇಕಾಗಿದೆ. ಹೀಗಾಗಿ ಅಂತಿಮ ಎರಡು ಟೆಸ್ಟ್ ಪಂದ್ಯಗಳಿಂದ ಅವರು ಹೊರಗುಳಿಯಲಿದ್ದಾರೆ" ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

ಮಾಧ್ಯಮ ಪ್ರಕಟಣೆಯಲ್ಲಿ ಬಿಸಿಸಿಐ ಸ್ಪಷ್ಟನೆ
"ಆಲ್ ಇಂಡಿಯಾ ಸೀನಿಯರ್ ಸೆಲೆಕ್ಷನ್ ಕಮಿಟಿ ಉಮೇಶ್ ಯಾದವ್ ಅವರಿಗೆ ಬದಲಿ ಆಟಗಾರನಾಗಿ ಟಿ ನಟರಾಜನ್ ಅವರನ್ನು ಆಯ್ಕೆ ಮಾಡಿದೆ. ವೇಗಿ ಮೊಹಮ್ಮದ್ ಶಮಿ ಮೊದಲ ಟೆಸ್ಟ್ ಪಂದ್ಯದಲ್ಲಿ ಗಾಯಗಿಂಡಿದ್ದ ಕಾರಣ ಅವರ ಸ್ಥಾನಕ್ಕೆ ಬದಲಿಯಾಗಿ ಶಾರ್ದುಲ್ ಠಾಕೂರ್ ಅವರನ್ನು ಟೆಸ್ಟ್ ಸ್ಕ್ವಾಡ್‌ಗೆ ಸೇರ್ಪಡೆಗೊಳಿಸಲಾಗಿತ್ತು. ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ಇಬ್ಬರೂ ಗಾಯದ ಚೇತರಿಕೆಗಾಗಿ ಬೆಂಗಳೂರಿನಲ್ಲಿರುವ ನ್ಯಾಶನಲ್ ಕ್ರಿಕೆಟ್ ಅಕಾಡೆಮಿಗೆ ತೆರಳಲಿದ್ದಾರೆ" ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

ಭರವಸೆ ಮೂಡಿಸಿದ ನಟರಾಜನ್
ಟಿ ನಟರಾಜನ್ ಈ ಮೊದಲು ಸೀಮಿತ ಓವರ್‌ಗಳ ಸರಣಿಯಲ್ಲಿ ಏಕದಿನ ಹಾಗೂ ಟಿ20 ಕ್ರಿಕೆಟ್‌ಗೆ ಪದಾರ್ಪಣೆಯನ್ನು ಮಾಡಿದ್ದರು. ಇದರಲ್ಲಿ ಗಮನಾರ್ಹವಾದ ಪ್ರದರ್ಶನ ತೋರಿದ ನಟರಾಜನ್ ತಂಡದಲ್ಲಿ ಭರವಸೆಯನ್ನು ಮೂಡಿಸಿದರು. ಈ ವೇಲೆ ಟೆಸ್ಟ್ ಸ್ಕ್ವಾಡ್‌ನಲ್ಲಿ ಗಾಯದ ಸಮಸ್ಯೆಗಳು ತಲೆದೂರಲು ಆರಂಭವಾಗುತ್ತಿದ್ದಂತೆಯೇ ನಟರಾಜನ್ ಅವರನ್ನು ಟೆಸ್ಟ್ ತಂಡಕ್ಕೆ ಸೇರ್ಪಡೆಗೊಳಿಸಿಕೊಳ್ಳದಿದ್ದರೂ ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾ ಜೊತೆಗೆ ಉಳಿಸಿಕೊಳ್ಳುವ ನಿರ್ಧಾರ ಮಾಡಲಾಯಿತು. ಇದೀಗ ಟೆಸ್ಟ್ ಸ್ಕ್ವಾಡ್‌ನಲ್ಲಿಯೂ ನಟರಾಜನ್ ಅವಕಾಶವನ್ನು ಪಡೆದಿದ್ದಾರೆ.

ಟೀಮ್ ಇಂಡಿಯಾ ಟೆಸ್ಟ್ ಸ್ಕ್ವಾಡ್
ಟೀಂ ಇಂಡಿಯಾ ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ಕ್ಯಾಪ್ಟನ್), ರೋಹಿತ್ ಶರ್ಮಾ (ಉಪನಾಯಕ), ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ಶುಭ್ಮನ್ ಗಿಲ್, ವೃದ್ಧಿಮಾನ್ ಸಾಹಾ(ವಿಕೆಟ್ ಕೀಪರ್) ರಿಷಭ್ ಪಂತ್(ವಿಕೆಟ್ ಕೀಪರ್) ಜಸ್ಪ್ರೀತ್ ಬುಮ್ರಾ, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್, ಮೊಹಮ್ಮದ್ ಸಿರಾಜ್, ಶಾರ್ದುಲ್ ಠಾಕೂರ್, ಟಿ ನಟರಾಜನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications