ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಆಸ್ಟ್ರೇಲಿಯಾ: ಬಿಳಿ ಜರ್ಸಿಯಲ್ಲಿ ಮಿಂಚಲು ಸಜ್ಜಾದ ಟಿ ನಟರಾಜನ್

T Natarjan ready to shine in Test cricket after white ball exploits

ಎಡಗೈ ವೇಗಿ ಟಿ ನಟರಾಜನ್ ಸೀಮಿತ ಓವರ್‌ಗಳ ಸರಣಿಯಲ್ಲಿ ಮಿಂಚಿದ ಬಳಿಕ ಸುದೀರ್ಘ ಮಾದರಿಯ ಕ್ರಿಕೆಟ್‌ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಬಗ್ಗೆ ನಟರಾಜನ್ ಸಂತರವನ್ನು ವ್ಯಕ್ತಪಡಿಸಿದ್ದು ಟೀಮ್ ಇಂಡಿಯಾದ ಟೆಸ್ಟ್ ಜರ್ಸಿಯನ್ನು ತೊಟ್ಟ ಫೋಟೋ ಹಂಚಿಕೊಂಡಿದ್ದಾರೆ.

ನಟರಾಜನ್ ಟ್ವಿಟ್ಟರ್‌ನಲ್ಲಿ ಟೆಸ್ಟ್ ತಂಡವನ್ನು ಪ್ರತಿನಿಧಿಸುತ್ತಿರುವುದಕ್ಕೆ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ಬಿಳಿಯ ಜರ್ಸಿ ತೊಡುವ ಹೆಮ್ಮೆಯ ಕ್ಷಣ. ಮುಂದಿನ ಸವಾಲುಗಳಿಗೆ ಸಿದ್ಧ" ಎಂದ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಫೋಟೋ ಜೊತೆಗೆ ಕ್ಯಾಪ್ಶನ್ ಕೂಡ ನೀಡಿದ್ದಾರೆ.

ಟೀಮ್ಇಂಡಿಯಾಗೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಹೊರಬಿದ್ದ ಕೆಎಲ್ ರಾಹುಲ್ಟೀಮ್ಇಂಡಿಯಾಗೆ ಮತ್ತೊಂದು ಆಘಾತ: ಟೆಸ್ಟ್ ಸರಣಿಯಿಂದ ಹೊರಬಿದ್ದ ಕೆಎಲ್ ರಾಹುಲ್

ಟಿ ನಟರಾಜನ್ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೆಸ್ಟ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಉಮೇಶ್ ಯಾದವ್ ಗಾಯಗೊಂಡು ತಂಡದಿಂದ ಹೊರಗುಳಿದರು. ಇದೀಗ ಅವರು ಬಾರ್ಡರ್ ಗವಾಸ್ಕರ್ ಸರಣಿಯಿಂದಲೇ ಹೊರಗುಳಿದಿದ್ದು ಅವರ ಸ್ಥಾನಕ್ಕೆ ಟಿ ನಟರಾಜನ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.

ಮೊದಲ ಟೆಸ್ಟ್ ಪಂದ್ಯದ ಬ್ಯಾಟಿಂಗ್ ಸಂದರ್ಭದಲ್ಲಿ ಟೀಮ್ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಗಾಯಗೊಂಡಿದ್ದು ಅವರು ಕೂಡ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಅವರ ಸ್ಥಾನಕ್ಕೂ ಬದಲಿ ಆಟಗಾರನನ್ನು ಹೆಸರಿಸಲಾಗಿದ್ದು ಶಾರ್ದೂಲ್ ಠಾಕೂರ್ ಟೆಸ್ಟ್ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಜಸ್ಪ್ರೀತ್ ಬೂಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಜೊತೆಗೆ ಸಿಡ್ನಿಯಲ್ಲಿ ಮೂರನೇ ವೇಗೊಯಾಗಿ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ vs ಆಸ್ಟ್ರೇಲಿಯಾ: 3ನೇ ಟೆಸ್ಟ್‌ನಲ್ಲಿ ಮುರಿಯಬಲ್ಲ ಪ್ರಮುಖ 5 ದಾಖಲೆಗಳುಭಾರತ vs ಆಸ್ಟ್ರೇಲಿಯಾ: 3ನೇ ಟೆಸ್ಟ್‌ನಲ್ಲಿ ಮುರಿಯಬಲ್ಲ ಪ್ರಮುಖ 5 ದಾಖಲೆಗಳು

ಇನ್ನು ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ನಡೆಸಿದ ಅಭ್ಯಾಸದ ವೇಳೆ ಕೆಎಲ್ ರಾಹುಲ್ ಮಣಿಕಟ್ಟು ಉಳುಕಿದ್ದು ಅಂತಿಮ ಎರಡು ಟೆಸ್ಟ್ ಪಂದ್ಯಗಳಿಂದ ಅವರು ಹೊರಗುಳಿಯಲಿದ್ದಾರೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ಮೊದಲ ಎರಡು ಪಂದ್ಯಗಳಲ್ಲಿ ತಲಾ ಒಂದೊಂದು ಜಯವನ್ನು ದಾಖಲಿಸಿದೆ.

Story first published: Tuesday, January 5, 2021, 17:17 [IST]
Other articles published on Jan 5, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X