ಏಷ್ಯಾ ಕಪ್ ಟಿ20ಯಲ್ಲಿ ದಾಖಲಾಗಿವೆ 2 ಶತಕ: ವಿರಾಟ್ ಹೆಸರಿನಲ್ಲಿದೆ ದಾಖಲೆ
ಏಷ್ಯಾ ಕಪ್‌ಗೆ ಎಲ್ಲ ತಂಡಗಳು ಭರದ ಸಿದ್ಧತೆ ನಡೆಸಿವೆ. ಏಷ್ಯಾ ಕಪ್ ಅನ್ನು ಈ ಬಾರಿ ಟಿ20 ಮಾದರಿಯಲ್ಲಿ ಆಡಿಸಲಾಗುತ್ತಿದೆ. ಟಿ20 ಮಾದರಿಯಲ್ಲಿ ನಡೆಯುತ್ತಿರುವ ಮೂರನೇ ಆವೃತ್ತಿಯ ಏಷ್ಯಾ ಕಪ್ ಇದಾಗಿದೆ. ಈ ಟೂರ್ನಿಯಲ್ಲಿ ಈಗಾಗಲೇ ಹಲವು ಆಟಗಾರರು ತಮ್ಮ ಧಮಾಕೆದಾರ್ ಬ್ಯಾಟಿಂಗ್ ಪ್ರದರ್ಶನದಿಂದ ಎಲ್ಲರ ಚಿತ್ತ ಕದ್ದಿದ್ದಾರೆ. ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟಾರೆಯಾಗಿ ಕೇವಲ 2 ಶತಕ ದಾಖಲಾಗಿವೆ. ಇದರಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ ಅವರ ಬ್ಯಾಟ್‌ನಿಂದಲೂ ಒಂದು ಶತಕ ಬಂದಿದೆ.
ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ 2016ರಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಆಡಿದ ಎರಡನೇ ಪಂದ್ಯದಲ್ಲಿ ಒಂದು ಶತಕ ದಾಖಲಾಗಿತ್ತು. ಓಮನ್ ಹಾಗೂ ಹಾಂಗ್ ಕಾಂಗ್ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಓಮನ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಸೇರಿಸಿತು.

ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಹಾಂಗ್ ಕಾಂಗ್ ತಂಡದ ಪರ ಮಧ್ಯಮ ಕ್ರಮಾಂಕದ ಆಟಗಾರ ಬಾಬರ್ ಹಯಾತ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು ಕೇವಲ 60 ಎಸೆತಗಳಲ್ಲಿ 9 ಬೌಂಡರಿ, 7 ಸಿಕ್ಸರ್ ಸಹಾಯದಿಂದ 122 ರನ್ ಸಿಡಿಸಿದರು. ಇದು ಏಷ್ಯಾಕಪ್ ಟಿ20 ಟೂರ್ನಿಯಲ್ಲಿ ದಾಖಲಾದ ಮೊದಲ ಶತಕವಾಗಿದೆ. ಇದಾದ ಬಳಿಕ ಈ ಸಾಧನೆಯನ್ನು ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, 2022ರಲ್ಲಿ ಅಫ್ಘಾನಿಸ್ತಾನ ವಿರುದ್ಧ ಮಾಡಿದರು.
ವಿರಾಟ್ ವೀರಾವೇಶ
ಅಂದು ವಿರಾಟ್ ಕೊಹ್ಲಿ ಅವರ ಮೇಲೆ ಟೀಕೆಗಳಿದ್ದವು. ಅವರು ವರ್ಷಗಳಿಂದ ರನ್ ಬರವನ್ನು ಅನುಭವಿಸುತ್ತಿದ್ದರು. ಏಷ್ಯಾಕಪ್ ಟಿ20 ಟೂರ್ನಿ ವಿರಾಟ್ ಪಾಲಿಗೆ ಮಹತ್ವದಾಗಿತ್ತು. ಈ ವೇದಿಕೆಯನ್ನು ಬಳಸಿಕೊಂಡು ಅಬ್ಬರಿಸಿದ ವಿರಾಟ್, ಅಫ್ಘಾನಿಸ್ತಾ ವಿರುದ್ಧ ಶತಕ ಸಾಧನೆ ಮಾಡಿದ್ದರು. ಅಫ್ಘಾನಿಸ್ತಾನ ವಿರುದ್ಧ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಸಿಡಿಸಿತು. ಈ ವೇಳೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಶತಕ ಬಾರಿಸಿ ಮಿಂಚಿದರು. ಇವರು 61 ಎಸೆತಗಳಲ್ಲಿ 12 ಬೌಂಡರಿ, 2 ಸಿಕ್ಸರ್ ಸಹಾಯದಿಂದ ಅಜೇಯ 122 ರನ್ ಸಿಡಿಸಿದರು.
ಈ ಬಾರಿಯ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಎಷ್ಟು ಶತಕಗಳು ದಾಖಲಾಗುತ್ತವೆ ಎಂಬ ಬಗ್ಗೆ ಕುತೂಹಲ ಹೆಚ್ಚಿದೆ. ಏಷ್ಯಾ ಕಪ್ ಟಿ20 2025ರ ಟೂರ್ನಿಯಲ್ಲಿ ಮೊದಲ ಶತಕ ಬಾರಿಸುವುದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಾರಿ ಪ್ರಶಸ್ತಿಗಾಗಿ ಒಟ್ಟು 8 ತಂಡಗಳು ಭಾಗವಹಿಸಲಿದ್ದು, 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಟೂರ್ನಿಯ ಫೈನಲ್ ಪಂದ್ಯ ಸೆ.29 ರಂದು ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications