ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ಶ್ರೇಯಾಂಕ: 4ನೇ ಸ್ಥಾನಕ್ಕೇರಿದ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ

T20 Ranking: Indian skipper Virat Kohli moved to No 4 in the ICC mens T20I rankings

ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗಿದೆ. ಅಕ್ಟೋಬರ್ 17ರಿಂದ ಚುಟುಕು ಕ್ರಿಕೆಟ್‌ನ ಮಹಾ ಸಮರ ಆರಂಭವಾಗಲಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್‌ನ ಶ್ರೇಯಾಂಕಪಟ್ಟಿಯಲ್ಲಿ ಸಕಾರಾತ್ಮಕ ಸಾಧನೆ ಮಾಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ನಾಲ್ಕನೇ ಸ್ಥಾನದಲ್ಲಿದ್ದ ನ್ಯೂಜಿಲೆಂಡ್ ತಂಡದ ಆಟಗಾರ ಡೇವಿಡ್ ಕಾನ್ವೆಯನ್ನು ಕೊಹ್ಲಿ ಹಿಂದಿಕ್ಕುವ ಮೂಲಕ ಈ ಸಾಧನೆ ಮಾಡಿದ್ದಾರೆ.

ನ್ಯೂಜಿಲೆಂಡ್‌ನ ದಾಂಡಿಗ ಕಾನ್ವೆ ನಾಲ್ಕರಿಂದ ಐದನೇ ಸ್ಥಾನಕ್ಕೆ ಕುಸಿದಿದ್ದಾರೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಟಾಪ್ ಹತ್ತರಲ್ಲಿರುವ ಮತ್ತೋರ್ವ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಈ ಪಟ್ಟಿಯಲ್ಲಿ 6ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್ ಡೇವಿಡ್ ಮಲನ್ ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿಯೇ ಮುಂದಿವರಿದಿದ್ದಾರೆ. ಎರಡನೇ ಸ್ಥಾನದಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಅಜಂ ಇದ್ದರೆ ಆಸ್ಟ್ರೇಲಿಯಾದ ಸೀಮಿತ ಓವರ್‌ಗಳ ತಂಡದ ನಾಯಕ ಆರೋನ್ ಫಿಂಚ್ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ನಂತರ ಟೀಮ್ ಇಂಡಿಯಾದಲ್ಲಿ ಈ ಮೂರು ಪ್ರಮುಖ ಬದಲಾವಣೆಗಳು ಖಚಿತಟಿ ಟ್ವೆಂಟಿ ವಿಶ್ವಕಪ್ ನಂತರ ಟೀಮ್ ಇಂಡಿಯಾದಲ್ಲಿ ಈ ಮೂರು ಪ್ರಮುಖ ಬದಲಾವಣೆಗಳು ಖಚಿತ

ಇನ್ನು ಈ ಪರಿಷ್ಕೃತ ಶ್ರೇಯಾಂಕಪಟ್ಟಿಯಲ್ಲಿ ಅತ್ಯಂತ ಹೆಚ್ಚು ಗಳಿಕೆ ಕಂಡ ಆಟಗಾರ ಎಂದರೆ ದಕ್ಷಿಣ ಆಫ್ರಿಕಾ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿಕಾಕ್. ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 3-0 ಅಂತರದಿಂದ ದಲ್ಷಿಣ ಆಫ್ರಿಕಾ ಗೆದ್ದು ವೈಟ್‌ವಾಶ್ ಮಾಡುವಲ್ಲಿ ಡಿಕಾಕ್ ಬ್ಯಾಟಿಂಗ್ ಮಹತ್ವದ ಪಾತ್ರವಹಿಸಿತ್ತು. ಈ ಪ್ರದರ್ಶನದಿಂದಾಗಿ ನಾಲ್ಕು ಸ್ಥಾನಗಳ ಏರಿಕೆ ಕಂಡಿರುವ ಡಿಕಾಕ್ 8ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಇನ್ನೋರ್ವ ಬ್ಯಾಟ್ಸ್‌ಮನ್ ರೀಜಾ ಹೆಂಡ್ರಿಕ್ಸ್ ಕೂಡ ಶ್ರೇಯಾಂಕಪಟ್ಟಿಯಲ್ಲಿ ಉತ್ತಮ ಗಳಿಕೆ ಕಂಡಿದ್ದು ಟಾಪ್ 20ಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಮೂರು ಪಂದ್ಯಗಳ ಸರಣಿಯಲ್ಲಿ ಹೆಂಡ್ರಿಕ್ಸ್ 112 ರನ್‌ಗಳಿಸಿದ್ದಾರೆ. ಐಡಿನ್ ಮಾರ್ಕ್ರಂ ಈ ಶ್ರೇಯಾಂಕಪಟ್ಟಿಯಲ್ಲಿ ಭಾರೀ ಏರಿಕೆ ಕಂಡ ಮತ್ತೋರ್ವ ದಕ್ಷಿಣ ಆಫ್ರಿಕಾದ ಬ್ಯಾಟ್ಸ್‌ಮನ್ ಆಗಿದ್ದು 12 ಸ್ಥಾನಗಳ ಏರಿಕೆ ಕಂಡಿದ್ದು 11ನೇ ಸ್ಥಾನದಲ್ಲಿದ್ದಾರೆ.

ಇನ್ನು ಬೌಲರ್‌ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಮುಸ್ತಫಿಜುರ್ ರಹ್ಮಾನ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ;್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಬಳಿಕ 8ನೇ ಸ್ಥಾನಕ್ಕೇರಿದ್ದಾರೆ. ಇನ್ನು ಇದೇ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶ ನೀಡಿದ ಮತ್ತೋರ್ವ ಬೌಲರ್ ನಸುಮ್ ಅಹ್ಮದ್ 25 ಸ್ಥಾನಗಳ ಏರಿಕೆ ಕಂಡಿದ್ದು 15ನೇ ಶ್ರೇಯಾಂಕದ ಬೌಲರ್ ಆಗಿ ಗುರುತಿಸಿಕೊಂಡಿದ್ದಾರೆ.

AB DE Villiers ಅಭ್ಯಾಸ ಪಂದ್ಯದಲ್ಲಿ Harshal Patel ವಿರುದ್ಧ ಮಾಡಿದ್ದೇನು | Oneindia Kannada

ಇನ್ನು ಬಾಂಗ್ಲಾದೇಶ ನಾಯಕ ಮಹ್ಮದುಲ್ಲಾ ನ್ಯೂಜಿಲೆಂಡ್ ವಿರುದ್ಧದ ಎರಡು ಟಿ20 ಪಂದ್ಯಗಳಲ್ಲಿ ನೀಡಿದ ಉತ್ತಮ ಬ್ಯಾಟಿಂಗ್ ಪ್ರದರ್ಶನದ ಕಾರಣದಿಂದಾಗಿ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಟಾಸ್ 10ರಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಕೀವಿಸ್ ವಿರುದ್ಧದ ಸರಣಿಯ ಅಂತಿಮ ಪಂದ್ಯದಿಂದ ಹೊರಗುಳಿದಿದ್ದ ಶಕೀಬ್ ಅಲ್ ಹಸನ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಕುಸಿದಿದ್ದು ಅಫ್ಘಾನಿಸ್ತಾನದ ಆಲ್‌ರೌಂಡರ್ ಮೊಹಮ್ಮದ್ ನಬಿ ಅಗ್ರ ಸ್ಥಾನಕ್ಕೇರಿದ್ದಾರೆ.

Story first published: Wednesday, September 15, 2021, 15:56 [IST]
Other articles published on Sep 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X