ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ವಿಂಡೀಸ್ ವಿರುದ್ಧ ಆಸ್ಟ್ರೇಲಿಯಾಗೆ ಭರ್ಜರಿ ಗೆಲುವು; ಸೌತ್ಆಫ್ರಿಕಾಗೆ ಎದುರಾಯಿತು ಸಂಕಷ್ಟ!

T20 World Cup 2021: Australias victory against West Indies is affecting South Africaa Semifinal entry

ಹಾಲಿ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ಸ್ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಇಂದು ( ನವೆಂಬರ್‌ 6 ) ಅಬುಧಾಬಿಯ ಶೈಖ್ ಝಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಫಲಿತಾಂಶ ಇದೀಗ ದಕ್ಷಿಣ ಆಫ್ರಿಕಾ ತಂಡಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಹೌದು, ಈ ಟೂರ್ನಿಯಲ್ಲಿ ಮೊದಲನೇ ಪಂದ್ಯವನ್ನು ಸೋತು ನಂತರದ ಪಂದ್ಯಗಳಲ್ಲಿ ಸತತವಾಗಿ ಗೆಲ್ಲುವುದರ ಮೂಲಕ ಹ್ಯಾಟ್ರಿಕ್ ಜಯ ಸಾಧಿಸಿದ್ದ ದಕ್ಷಿಣ ಆಫ್ರಿಕಾ ಸೆಮಿಫೈನಲ್ ಕನಸನ್ನು ಕಾಣುತ್ತಿತ್ತು. ಆದರೆ ಇದೀಗ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯ ತಂಡಗಳ ನಡುವಿನ ಪಂದ್ಯದ ಫಲಿತಾಂಶ ದಕ್ಷಿಣ ಆಫ್ರಿಕಾ ತಂಡವನ್ನು ಒತ್ತಡಕ್ಕೆ ತಳ್ಳಿದೆ ಎಂದರೆ ತಪ್ಪಾಗಲಾರದು.

ಟಿ20 ವಿಶ್ವಕಪ್: ಈ ರೀತಿ ನಡೆದರೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವುದು ಪಕ್ಕಾ!ಟಿ20 ವಿಶ್ವಕಪ್: ಈ ರೀತಿ ನಡೆದರೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವುದು ಪಕ್ಕಾ!

ಇನ್ನು ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿನ ತನ್ನ ಕೊನೆಯ ಪಂದ್ಯವನ್ನು ಆಡಿದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದರ ಮೂಲಕ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಎದುರಾಳಿ ವೆಸ್ಟ್ ಇಂಡೀಸ್ ತಂಡಕ್ಕೆ ನೀಡಿದರು. ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ವೆಸ್ಟ್ ಇಂಡೀಸ್ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಕ್ರಿಸ್ ಗೇಲ್ 15 ಮತ್ತು ಇವಿನ್ ಲೂಯಿಸ್ 29 ರನ್ ಗಳಿಸಿದರು. ಇನ್ನುಳಿದಂತೆ ನಿಕೋಲಸ್ ಪೂರನ್ 4, ರೋಸ್ಟನ್ ಚೇಸ್ ಶೂನ್ಯ, ಶಿಮ್ರಾನ್ ಹೆಟ್ಮಾಯೆರ್ 27, ನಾಯಕ ಕೀರನ್ ಪೊಲಾರ್ಡ್ 44, ಡ್ವೇನ್ ಬ್ರಾವೊ 10, ಆ್ಯಂಡ್ರೆ ರಸೆಲ್ ಅಜೇಯ 18 ಮತ್ತು ಜೇಸನ್ ಹೋಲ್ಡರ್ ಅಜೇಯ 1 ರನ್ ಗಳಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಿ ಆಸ್ಟ್ರೇಲಿಯಾ ತಂಡಕ್ಕೆ 158 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು. ಆಸ್ಟ್ರೇಲಿಯಾ ಪರ ಜೋಶ್ ಹೇಜಲ್ ವುಡ್ 4 ವಿಕೆಟ್, ಪ್ಯಾಟ್ ಕಮ್ಮಿನ್ಸ್, ಆಡಂ ಜಂಪಾ ಮತ್ತು ಮಿಚೆಲ್ ಸ್ಟಾರ್ಕ್ ತಲಾ 1 ವಿಕೆಟ್ ಪಡೆದರು.

'ಬ್ಯಾಗ್ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗೋದು ಅಷ್ಟೇ'; ಸೆಮಿಫೈನಲ್ ಪ್ರವೇಶದ ಕುರಿತು ತುಟಿಬಿಚ್ಚಿದ ಜಡೇಜಾ'ಬ್ಯಾಗ್ ಪ್ಯಾಕ್ ಮಾಡಿಕೊಂಡು ಮನೆಗೆ ಹೋಗೋದು ಅಷ್ಟೇ'; ಸೆಮಿಫೈನಲ್ ಪ್ರವೇಶದ ಕುರಿತು ತುಟಿಬಿಚ್ಚಿದ ಜಡೇಜಾ

ಇನ್ನು ವೆಸ್ಟ್ ಇಂಡೀಸ್ ತಂಡ ನೀಡಿದ 158 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಡೇವಿಡ್ ವಾರ್ನರ್ ಅತ್ಯದ್ಭುತ ಪ್ರದರ್ಶನವನ್ನು ನೀಡಿದರು. ಆಸ್ಟ್ರೇಲಿಯಾ ತಂಡದ ನಾಯಕ ಆ್ಯರನ್ ಫಿಂಚ್ 9 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರೆ ಡೇವಿಡ್ ವಾರ್ನರ್ 56 ಎಸೆತಗಳಲ್ಲಿ ಅಜೇಯ 89 ರನ್ ಸಿಡಿಸುವ ಮೂಲಕ ಮಿಂಚಿದರು ಮತ್ತು ಮಿಚೆಲ್ ಮಾರ್ಷ್ 32 ಎಸೆತಗಳಲ್ಲಿ 53 ರನ್ ಚಚ್ಚಿದರು. ಇನ್ನುಳಿದಂತೆ ಅಂತಿಮ ಕ್ಷಣದಲ್ಲಿ ಮೈದಾನಕ್ಕಿಳಿದ ಗ್ಲೆನ್ ಮ್ಯಾಕ್ಸ್‌ವೆಲ್ 0 ರನ್ ಕಲೆಹಾಕಿ ಅಜೇಯರಾಗಿ ಉಳಿದರು. ಈ ಮೂಲಕ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ತಂಡದ ವಿರುದ್ಧ 16.2 ಓವರ್‌ಗಳಲ್ಲಿ 161 ರನ್ ಗಳಿಸಿ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸುವುದರ ಮೂಲಕ ಉತ್ತಮ ನೆಟ್ ರನ್ ರೇಟ್‌ನ್ನು ಕೂಡ ಪಡೆದುಕೊಂಡಿದೆ.

ಭಾರತ ತಂಡದ ಡ್ರೆಸಿಂಗ್ ರೂಮ್‌ಗೆ ಭೇಟಿ ನೀಡಿದ ಸ್ಕಾಟ್ಲೆಂಡ್ ಆಟಗಾರರಿಗೆ ರಾಹುಲ್, ರೋಹಿತ್ ಟಿಪ್ಸ್ಭಾರತ ತಂಡದ ಡ್ರೆಸಿಂಗ್ ರೂಮ್‌ಗೆ ಭೇಟಿ ನೀಡಿದ ಸ್ಕಾಟ್ಲೆಂಡ್ ಆಟಗಾರರಿಗೆ ರಾಹುಲ್, ರೋಹಿತ್ ಟಿಪ್ಸ್

ಇನ್ನು ಈ ಪಂದ್ಯದ ಫಲಿತಾಂಶ ಇದೀಗ ದಕ್ಷಿಣ ಆಫ್ರಿಕಾ ತಂಡದ ಸೆಮಿ ಫೈನಲ್ ಪ್ರವೇಶದ ಮೇಲೆ ದೊಡ್ಡ ಪ್ರಭಾವವನ್ನು ಬೀರಿದ್ದು, ದಕ್ಷಿಣ ಆಫ್ರಿಕಾ ಯಶಸ್ವಿಯಾಗಿ ಸೆಮಿಫೈನಲ್ ಪ್ರವೇಶಿಸಬೇಕೆಂದರೆ ಈ ಕೆಳಕಂಡ ರೀತಿ ಪ್ರದರ್ಶನವನ್ನು ನೀಡಲೇಬೇಕಾಗಿದೆ.

ಆಸ್ಟ್ರೇಲಿಯಾ ಗೆಲುವು ದಕ್ಷಿಣ ಆಫ್ರಿಕಾಕ್ಕೆ ಸಂಕಷ್ಟ ತಂದೊಡ್ಡಿದೆ

ಆಸ್ಟ್ರೇಲಿಯಾ ಗೆಲುವು ದಕ್ಷಿಣ ಆಫ್ರಿಕಾಕ್ಕೆ ಸಂಕಷ್ಟ ತಂದೊಡ್ಡಿದೆ

ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ ಪಂದ್ಯ ಆರಂಭಕ್ಕೂ ಮುನ್ನ ಟೂರ್ನಿಯಲ್ಲಿ ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸಮಬಲ ಸಾಧಿಸಿದ್ದವು. ಈ ಎರಡೂ ತಂಡಗಳು ಸಹ ಟೂರ್ನಿಯಲ್ಲಿ 3 ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ 6 ಅಂಕಗಳನ್ನು ಪಡೆದುಕೊಂಡಿದ್ದವು. ಆದರೆ ಇದೀಗ ಆಸ್ಟ್ರೇಲಿಯಾ ಮತ್ತೊಂದು ಜಯವನ್ನು ಸಾಧಿಸಿ 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ್ದು ದಕ್ಷಿಣ ಆಫ್ರಿಕಾ ತಂಡದ ಸೆಮಿಫೈನಲ್ ಹಾದಿ ಮತ್ತಷ್ಟು ಕಠಿಣಗೊಂಡಂತಾಗಿದೆ.

ಮುಂದಿನ ಪಂದ್ಯದಲ್ಲಿ ದೊಡ್ಡ ಗೆಲುವು ಸಾಧಿಸಬೇಕು ದಕ್ಷಿಣ ಆಫ್ರಿಕಾ

ಮುಂದಿನ ಪಂದ್ಯದಲ್ಲಿ ದೊಡ್ಡ ಗೆಲುವು ಸಾಧಿಸಬೇಕು ದಕ್ಷಿಣ ಆಫ್ರಿಕಾ

ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ ಗೆಲುವು ಸಾಧಿಸುವುದರ ಮೂಲಕ ಒಳ್ಳೆಯ ನೆಟ್ ರನ್ ರೇಟ್ ಪಡೆದುಕೊಂಡಿದೆ. ಹೌದು ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನ ನಂತರ ಆಸ್ಟ್ರೇಲಿಯಾ 4 ಪಂದ್ಯಗಳ ಜಯದೊಂದಿಗೆ 8 ಅಂಕ ಪಡೆದುಕೊಂಡು ಇದೀಗ +1.1216 ನೆಟ್ ರನ್ ರೇಟ್ ಪಡೆದುಕೊಂಡಿದೆ. ಇನ್ನು ದಕ್ಷಿಣ ಆಫ್ರಿಕಾ ಸದ್ಯಕ್ಕೆ 3 ಪಂದ್ಯಗಳ ಗೆಲುವಿನೊಂದಿಗೆ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ +0.742 ನೆಟ್ ರನ್ ರೇಟ್ ಹೊಂದಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಜಯ ಗಳಿಸುವುದು ಮಾತ್ರವಲ್ಲದೇ ಉತ್ತಮ ನೆಟ್ ರನ್ ರೇಟ್ ಬರುವ ರೀತಿ ದೊಡ್ಡ ಅಂತರದಲ್ಲಿ ಗೆದ್ದರೆ ಮಾತ್ರ ಆಸ್ಟ್ರೇಲಿಯಾವನ್ನು ಅಂಕಪಟ್ಟಿಯಲ್ಲಿ ಕೆಳತಳ್ಳಿ ಸೆಮಿಫೈನಲ್ ಪ್ರವೇಶಿಸಲಿದೆ.

ಸೌತ್ ಆಫ್ರಿಕಾಗೆ ಇಂಗ್ಲೆಂಡ್ ಎದುರಾಳಿ; ಈ ಅಂತರದಲ್ಲಿ ಗೆಲ್ಲಲೇಬೇಕು ದಕ್ಷಿಣ ಆಫ್ರಿಕಾ!

ಸೌತ್ ಆಫ್ರಿಕಾಗೆ ಇಂಗ್ಲೆಂಡ್ ಎದುರಾಳಿ; ಈ ಅಂತರದಲ್ಲಿ ಗೆಲ್ಲಲೇಬೇಕು ದಕ್ಷಿಣ ಆಫ್ರಿಕಾ!

ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯ ಮುಗಿದ ಬೆನ್ನಲ್ಲೇ ಇದೀಗ ದಕ್ಷಿಣ ಆಫ್ರಿಕಾ ಮತ್ತು ಸೋಲಿಲ್ಲದ ಸರದಾರನಂತಿರುವ ಇಂಗ್ಲೆಂಡ್ ನಡುವಿನ ಪಂದ್ಯ ಆರಂಭವಾಗಿದ್ದು ಟಾಸ್ ಗೆದ್ದಿರುವ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಆಸ್ಟ್ರೇಲಿಯಾಗಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದುಕೊಳ್ಳಬೇಕೆಂದರೆ 160+ ರನ್ ಕಲೆಹಾಕಿ, ಇಂಗ್ಲೆಂಡ್ ತಂಡವನ್ನು ಕಡ್ಡಾಯವಾಗಿ 100 ರನ್‌ಗಳ ಒಳಗೆ ಆಲ್ ಔಟ್ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಪಂದ್ಯದಲ್ಲಿ ಈ ರೀತಿ ನಡೆಯದೇ ಇದ್ದರೆ ದಕ್ಷಿಣ ಆಫ್ರಿಕಾ ಟೂರ್ನಿಯಿಂದ ಹೊರ ಬೀಳಲಿದ್ದು ಆಸ್ಟ್ರೇಲಿಯ ತಂಡ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಡಲಿದೆ.

Story first published: Saturday, November 6, 2021, 19:30 [IST]
Other articles published on Nov 6, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X