ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಅಫ್ಘಾನಿಸ್ತಾನ ಪಂದ್ಯಗಳಲ್ಲಿ ಬಲಿಷ್ಠರಾರು?; ಭಾರತ ಸೆಮಿಫೈನಲ್ ಪ್ರವೇಶಿಸಲು ಹೀಗೆ ಮಾಡಬೇಕು!

T20 World Cup 2021, Match 33: India vs Afghanistan head to head details and team Indias semi final qualification chances

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಅಕ್ಷರಶಃ ಮಂಕಾಗಿದ್ದು ಟೂರ್ನಿಯಲ್ಲಿ ಸತತವಾಗಿ ಸೋಲನ್ನು ಕಂಡಿದೆ. ಹೌದು, ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯಗಳಲ್ಲಿ ಅಬ್ಬರಿಸಿದ ಟೀಂ ಇಂಡಿಯಾ ಸೂಪರ್ 12 ಸುತ್ತಿನ ಪಂದ್ಯಗಳು ಆರಂಭವಾದ ನಂತರ ಮಂಕಾಗಿಬಿಟ್ಟಿದೆ. ಟೂರ್ನಿಯಲ್ಲಿ ಇದುವರೆಗೂ 2 ಪಂದ್ಯಗಳನ್ನಾಡಿರುವ ಭಾರತ ತಂಡ ಯಾವುದೇ ಪಂದ್ಯದಲ್ಲಿಯೂ ಕೂಡಾ ಗೆಲುವನ್ನು ಸಾಧಿಸಿಲ್ಲ. ಬದಲಾಗಿ ಆಡಿರುವ ಎಲ್ಲ ಎರಡೂ ಪಂದ್ಯಗಳಲ್ಲಿಯೂ ಸೋಲುಂಡಿರುವ ಟೀಂ ಇಂಡಿಯಾ ಇದೀಗ ಸೆಮಿಫೈನಲ್ ಹಂತವನ್ನು ಪ್ರವೇಶಿಸಲು ಇತರೆ ತಂಡಗಳ ನಡುವಿನ ಪಂದ್ಯದ ಫಲಿತಾಂಶದ ಮೇಲೆ ಅವಲಂಬಿತವಾಗಿದೆ.

ಅಫ್ಘಾನಿಸ್ತಾನದ ಈ ಇಬ್ಬರು ಭಾರತಕ್ಕೆ ಸೋಲು ತರಬಹುದು ಹುಷಾರ್; ಕೊಹ್ಲಿ ಪಡೆಗೆ ಎಚ್ಚರಿಸಿದ ಮಾಜಿ ಕ್ರಿಕೆಟಿಗ!ಅಫ್ಘಾನಿಸ್ತಾನದ ಈ ಇಬ್ಬರು ಭಾರತಕ್ಕೆ ಸೋಲು ತರಬಹುದು ಹುಷಾರ್; ಕೊಹ್ಲಿ ಪಡೆಗೆ ಎಚ್ಚರಿಸಿದ ಮಾಜಿ ಕ್ರಿಕೆಟಿಗ!

ಹೌದು, ಬಲಿಷ್ಠ ತಂಡವನ್ನು ಹೊಂದಿದ್ದರೂ, ಸಾಕಷ್ಟು ಸರಣಿಗಳನ್ನು ಗೆದ್ದಿದ್ದರೂ ಮತ್ತು ಟೂರ್ನಿ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದ್ದರೂ ಸಹ ಟೀಮ್ ಇಂಡಿಯಾ ಮಾತ್ರ ಟೂರ್ನಿಯಲ್ಲಿ ಇದುವರೆಗೂ ಗೆಲುವಿನ ಖಾತೆ ತೆರೆಯುವಲ್ಲಿ ಯಶಸ್ವಿ ಆಗಿಯೇ ಇಲ್ಲ. ಮೊದಲಿಗೆ ಪಾಕಿಸ್ತಾನ ವಿರುದ್ಧ ಸೆಣಸಾಟ ನಡೆಸಿದ ಟೀಮ್ ಇಂಡಿಯಾ ಹೀನಾಯವಾದ ಸೋಲನ್ನು ಅನುಭವಿಸಿತ್ತು. ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಪಾಕಿಸ್ತಾನ ವಿಶ್ವಕಪ್ ಹಣಾಹಣಿಯೊಂದರಲ್ಲಿ ಸೋಲಿಸಿದ ಮೈಲಿಗಲ್ಲನ್ನು ಈ ಪಂದ್ಯದ ಮೂಲಕ ನೆಟ್ಟಿತ್ತು. ಹೀಗೆ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಆರಂಭದ ಪಂದ್ಯದಲ್ಲಿಯೇ ದೊಡ್ಡ ಮಟ್ಟದ ಸೋಲನ್ನು ಕಂಡ ಟೀಮ್ ಇಂಡಿಯಾ ನಂತರ ನ್ಯೂಜಿಲೆಂಡ್ ವಿರುದ್ಧ ನಡೆದ ಮತ್ತೊಂದು ಪಂದ್ಯದಲ್ಲಿಯೂ ಸೋಲನ್ನು ಅನುಭವಿಸಿತು.

'ಟೀಮ್ ಇಂಡಿಯಾ ಒಳಗೆ 2 ಗುಂಪುಗಳಿವೆ'; ತಂಡದ ಸೋಲಿನ ನಂತರ ಸಂಶಯ ಹೊರಹಾಕಿದ ಮಾಜಿ ಕ್ರಿಕೆಟಿಗ'ಟೀಮ್ ಇಂಡಿಯಾ ಒಳಗೆ 2 ಗುಂಪುಗಳಿವೆ'; ತಂಡದ ಸೋಲಿನ ನಂತರ ಸಂಶಯ ಹೊರಹಾಕಿದ ಮಾಜಿ ಕ್ರಿಕೆಟಿಗ

ಹೀಗೆ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಸೋತಿರುವ ಟೀಮ್ ಇಂಡಿಯಾ ಇದೀಗ ಮುಂದಿನ ತನ್ನ ಎಲ್ಲ 3 ಪಂದ್ಯಗಳನ್ನು ಕೂಡ ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕಾಗಿದೆ. ತನ್ನ ಮುಂದಿನ 3 ಪಂದ್ಯಗಳ ಪೈಕಿ ಮೊದಲನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಅಫ್ಘಾನಿಸ್ತಾನದ ವಿರುದ್ಧ ಸೆಣಸಾಟ ನಡೆಸಲಿದೆ. ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ಈ ಪಂದ್ಯವು ಇಂದು ( ನವೆಂಬರ್‌ 3 ) ನಡೆಯಲಿದ್ದು, ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಯಾವ ತಂಡ ಎಷ್ಟು ಪಂದ್ಯಗಳಲ್ಲಿ ಗೆದ್ದು ಬಲಿಷ್ಠವಾಗಿದೆ ಮತ್ತು ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಯಾವ ರೀತಿಯ ಅವಕಾಶಗಳಿವೆ ಎಂಬುದರ ಮಾಹಿತಿ ಮುಂದೆ ಇದೆ ಓದಿ.

ಭಾರತ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲಬೇಕಿದೆ!

ಭಾರತ ತನ್ನ ಮುಂದಿನ 3 ಪಂದ್ಯಗಳನ್ನು ಗೆಲ್ಲಬೇಕಿದೆ!

ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ, ಸ್ಕಾಟ್ಲೆಂಡ್ ಮತ್ತು ನಮೀಬಿಯಾ ತಂಡಗಳ ವಿರುದ್ಧ ಸೆಣಸಾಟ ನಡೆಸಲಿದೆ. ಈ ಎಲ್ಲಾ 3 ಪಂದ್ಯಗಳಲ್ಲಿಯೂ ವಿರಾಟ್ ಕೊಹ್ಲಿ ಪಡೆ ದೊಡ್ಡ ಅಂತರದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗೆ ಮುಂದಿನ ಎಲ್ಲ ಪಂದ್ಯಗಳನ್ನು ಟೀಮ್ ಇಂಡಿಯಾ ಗೆದ್ದರೆ 6 ಅಂಕಗಳನ್ನು ಪಡೆದುಕೊಳ್ಳಲಿದ್ದು ಇತರ ತಂಡಗಳು ಕೂಡ 6 ಅಂಕಗಳನ್ನು ಪಡೆದುಕೊಂಡು ಉತ್ತಮ ನೆಟ್ ರನ್ ರೇಟ್ ಪಡೆದರೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವ ಸಾಧ್ಯತೆಗಳಿವೆ. ಒಂದುವೇಳೆ ಟೀಮ್ ಇಂಡಿಯಾ ತನ್ನ ಮುಂದಿನ ಈ 3 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯದಲ್ಲಿ ಸೋತರೂ ಅಧಿಕೃತವಾಗಿ ಸೆಮಿಫೈನಲ್ ರೇಸ್‌ನಿಂದ ಹೊರಬೀಳಲಿದೆ.

ನ್ಯೂಜಿಲೆಂಡ್ ಒಂದು ಪಂದ್ಯವನ್ನು ಸೋಲಬೇಕು

ನ್ಯೂಜಿಲೆಂಡ್ ಒಂದು ಪಂದ್ಯವನ್ನು ಸೋಲಬೇಕು

ಟೀಮ್ ಇಂಡಿಯಾ ತನ್ನ ಮುಂದಿನ ಎಲ್ಲ ಪಂದ್ಯಗಳನ್ನು ಗೆಲ್ಲುವುದು ಮಾತ್ರವಲ್ಲದೇ, ನ್ಯೂಜಿಲೆಂಡ್ ತನ್ನ ಮುಂದಿನ 3 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯದಲ್ಲಿ ಸೋಲಲೇಬೇಕಿದೆ. ಹೀಗೆ ನ್ಯೂಜಿಲೆಂಡ್ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ಸೋತರೆ ಟೂರ್ನಿಯ ಸೂಪರ್ 12 ಸುತ್ತಿನ ಅಂತ್ಯದ ವೇಳೆಗೆ ಭಾರತ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನಗಳು ಸಮನಾಗಿ 6 ಅಂಕಗಳನ್ನು ಪಡೆದುಕೊಳ್ಳಲಿದ್ದು ಯಾವ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದುತ್ತದೆಯೋ ಆ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ. ಹೀಗಾಗಿ ಟೀಮ್ ಇಂಡಿಯಾ ತನ್ನ ಮುಂದಿನ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಒಂದುವೇಳೆ ನ್ಯೂಜಿಲೆಂಡ್ ತಂಡ ತನ್ನ ಮುಂದಿನ ಎಲ್ಲಾ ಪಂದ್ಯಗಳಲ್ಲಿಯೂ ಗೆಲುವನ್ನು ಸಾಧಿಸಿದರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಯಾವುದೇ ಹಾದಿಗಳು ಉಳಿದಿರುವುದಿಲ್ಲ.

ಭಾರತ vs ಅಫ್ಘಾನಿಸ್ತಾನ ಮುಖಾಮುಖಿಯ ಫಲಿತಾಂಶ

ಭಾರತ vs ಅಫ್ಘಾನಿಸ್ತಾನ ಮುಖಾಮುಖಿಯ ಫಲಿತಾಂಶ

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಇದುವರೆಗೂ ಒಟ್ಟು 2 ಟಿ ಟ್ವೆಂಟಿ ವಿಶ್ವಕಪ್ ಪಂದ್ಯಗಳಲ್ಲಿ ಸೆಣಸಾಡಿದ್ದು ಈ ಎರಡೂ ಪಂದ್ಯಗಳಲ್ಲಿಯೂ ಸಹ ಅಫ್ಘಾನಿಸ್ತಾನದ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಹೀಗೆ ಇತ್ತಂಡಗಳ ನಡುವಿನ ಟಿ ಟ್ವೆಂಟಿ ಹಣಾಹಣಿಯಲ್ಲಿ ಮುನ್ನಡೆಯನ್ನು ಸಾಧಿಸಿರುವ ಟೀಮ್ ಇಂಡಿಯಾ ಇಂದು ನಡೆಯಲಿರುವ ಪಂದ್ಯದಲ್ಲಿಯೂ ಕೂಡ ಗೆಲ್ಲಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ. ಒಂದುವೇಳೆ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಸೋತರೆ ಸೆಮಿಫೈನಲ್ ರೇಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ.

Story first published: Wednesday, November 3, 2021, 17:32 [IST]
Other articles published on Nov 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X