For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್, ಸೆಮಿಫೈನಲ್ 1 : ಇಂಗ್ಲೆಂಡ್ vs ನ್ಯೂಜಿಲೆಂಡ್‌ ಪಿಚ್ ವರದಿ, ಸಂಭಾವ್ಯ ಆಡುವ ಬಳಗದ ಮಾಹಿತಿ

T20 World Cup 2021, semifinal 1: England vs New Zealand Pitch report, probable playing XI and live streaming details

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹಂತ ಇಂದಿನಿಂದ ( ನವೆಂಬರ್‌ 10 ) ಪ್ರಾರಂಭವಾಗುತ್ತಿದ್ದು ಸೆಮಿಫೈನಲ್ ಸುತ್ತಿಗೆ ಪಾಕಿಸ್ತಾನ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಲಗ್ಗೆ ಇಟ್ಟಿವೆ.

ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಹಂತಕ್ಕೆ ಪಾಕಿಸ್ತಾನ, ಇಂಗ್ಲೆಂಡ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರವೇಶವನ್ನು ಪಡೆದುಕೊಂಡಿವೆ. ಈ ಪೈಕಿ ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಪರಸ್ಪರ ಸೆಣಸಾಟ ನಡೆಸಲಿದ್ದು ಈ ಪಂದ್ಯ ಅಬುದಾಬಿಯ ಶೇಖ್ ಝಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ನವೆಂಬರ್‌ 10 ) ಸಂಜೆ 7.30ಕ್ಕೆ ಆರಂಭವಾಗಲಿದೆ.

ಟೂರ್ನಿಯ ಸೂಪರ್ 12 ಹಂತದಲ್ಲಿ ಇತ್ತಂಡಗಳು ಬೇರೆಬೇರೆ ಗುಂಪಿನಲ್ಲಿದ್ದರೂ ಸಹ ಎರಡೂ ತಂಡಗಳು ತಲಾ 4 ಪಂದ್ಯಗಳನ್ನು ಗೆಲ್ಲುವುದರ ಮೂಲಕ ಸಮಬಲವನ್ನು ಸಾಧಿಸಿವೆ. ಆದರೆ, ನ್ಯೂಜಿಲೆಂಡ್ ತಂಡಕ್ಕಿಂತ ಇಂಗ್ಲೆಂಡ್ ತಂಡದ ನೆಟ್ ರನ್ ರೇಟ್ ಉತ್ತಮವಾಗಿದ್ದು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಉತ್ತಮ ಪ್ರದರ್ಶನವನ್ನು ನೀಡಿದೆ ಎಂದೇ ಹೇಳಬಹುದು.

ಹೀಗೆ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮೊದಲನೇ ಸೆಮಿಫೈನಲ್ ಪಂದ್ಯದಲ್ಲಿ ಇಂದು ಸೆಣೆಸಾಟ ನಡೆಸಲಿದ್ದು ಈ ಪಂದ್ಯದ ಕುರಿತಾದ ಮಾಹಿತಿ, ಸಂಭಾವ್ಯ ಆಡುವ ಬಳಗ ಮತ್ತು ನೇರ ಪ್ರಸಾರದ ಕುರಿತಾದ ವಿವರಗಳು ಈ ಕೆಳಕಂಡಂತಿವೆ..

ಪಂದ್ಯದ ವಿವರ

ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಮೊದಲನೇ ಪಂದ್ಯದಲ್ಲಿ ಅಬುಧಾಬಿಯ ಶೇಖ್ ಜಾಯೆದ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಸೆಣಸಾಟ ನಡೆಸಲಿವೆ. ಈ ಪಂದ್ಯವು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭವಾಗಲಿದೆ. ಹಾಗೂ ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್ ಹಂತಕ್ಕೆ ಲಗ್ಗೆ ಇಡಲಿದ್ದು ಈ ಪಂದ್ಯದಲ್ಲಿ ಸೋಲುವ ತಂಡ ಸೆಮಿಫೈನಲ್ ಸುತ್ತಿನಲ್ಲಿಯೇ ಟೂರ್ನಿಯಿಂದ ಹೊರ ಬೀಳಲಿದೆ.

ಸಂಭಾವ್ಯ ತಂಡಗಳು

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮೊದಲನೇ ಸೆಮಿ ಫೈನಲ್ ಪಂದ್ಯದಲ್ಲಿ ಕಣಕ್ಕಿಳಿಯಬಹುದಾದ ಇತ್ತಂಡಗಳ ಸಂಭಾವ್ಯ ಆಡುವ ಬಳಗ ಈ ಕೆಳಕಂಡಂತಿದೆ.

ಇಂಗ್ಲೆಂಡ್ ಸಂಭಾವ್ಯ ತಂಡ: ಜೇಮ್ಸ್ ವಿನ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್‌), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಮೊಯಿನ್ ಅಲಿ, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್

ನ್ಯೂಜಿಲೆಂಡ್ ಸಂಭಾವ್ಯ ತಂಡ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜಿಮ್ಮಿ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್

ಪಿಚ್ ವರದಿ: ಅಬುಧಾಬಿಯ ಶೇಖ್ ಜಾಯೆದ್ ಸ್ಟೇಡಿಯಂ ಬುಧವಾರದ ಐಸಿಸಿ ಟಿ20 ವಿಶ್ವಕಪ್ 2021ರ ಮೊದಲ ಸೆಮಿಫೈನಲ್ ಪಂದ್ಯಕ್ಕೆ ಆತಿಥ್ಯ ವಹಿಸಲಿದೆ. ಈ ಪಿಚ್ ಸ್ಪಿನ್ನರ್‌ಗಳಿಗೆ ಸಾಕಷ್ಟು ನೆರವು ನೀಡುತ್ತದೆ. ಈ ಪಿಚ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡ ಸರಾಸರಿ 143 ರನ್ ಗಳಿಸಬಹುದು ಮತ್ತು ದ್ವಿತೀಯ ಇನ್ನಿಂಗ್ಸ್ ಆಡುವ ತಂಡ ಸರಾಸರಿ 122 ರನ್ ಕಲೆಹಾಕಬಹುದು.

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯನ್ನು ಭಾರತದಲ್ಲಿ ನೇರ ಪ್ರಸಾರ ಮಾಡುತ್ತಿದೆ. ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಈ ಪಂದ್ಯಕ್ಕೆ ಲೈವ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಅನ್ನು ಒದಗಿಸುತ್ತಿದೆ.

Story first published: Wednesday, November 10, 2021, 15:50 [IST]
Other articles published on Nov 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+