ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಭಾರತ ವಿರುದ್ಧದ ಶಾಹಿನ್ ಅಫ್ರಿದಿ ಪ್ರದರ್ಶನ ಟೂರ್ನಿಯಲ್ಲೇ ಅತ್ಯುತ್ತಮ ಎಂದು ಆಯ್ಕೆ

T20 World Cup 2021: Shaheen Afridi’s spell against India selected as the Play of the Tournament by the ICC

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಿದವು. ಈ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ 8 ವಿಕೆಟ್‍ಗಳ ಭರ್ಜರಿ ಜಯ ಸಾಧಿಸುವುದರ ಮೂಲಕ ಮೊಟ್ಟಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿಯಿತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ತಂಡ ಉತ್ತಮ ಪ್ರದರ್ಶನ ನೀಡಲಿದೆ ಎಂದು ಯಾರೂ ಸಹ ಊಹಿಸಿಯೇ ಇರಲಿಲ್ಲ. ಸೆಮಿಫೈನಲ್ ಹಂತ ಪ್ರವೇಶಿಸಬಹುದಾದ ತಂಡಗಳನ್ನು ಊಹಿಸಿದ್ದ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಕ್ರೀಡಾ ಪಂಡಿತರು ಆಸ್ಟ್ರೇಲಿಯಾ ತಂಡವನ್ನು ಕಡೆಗಣಿಸಿದ್ದರು. ಆದರೆ ಆಸ್ಟ್ರೇಲಿಯಾ ಈ ಕಡೆಗಣನೆಗಳಿಗೆಲ್ಲಾ ತನ್ನ ಉತ್ತಮ ಪ್ರದರ್ಶನದ ಮೂಲಕ ಉತ್ತರವನ್ನು ನೀಡಿದೆ.

ಐಸಿಸಿ ಟಿ20 ಶ್ರೇಯಾಂಕ ಪಟ್ಟಿ: ರಾಹುಲ್ ಸ್ಥಾನ ಕಸಿದ ರಿಜ್ವಾನ್, 8ನೇ ಸ್ಥಾನದಲ್ಲಿ ಮುಂದುವರಿದ ಕೊಹ್ಲಿಐಸಿಸಿ ಟಿ20 ಶ್ರೇಯಾಂಕ ಪಟ್ಟಿ: ರಾಹುಲ್ ಸ್ಥಾನ ಕಸಿದ ರಿಜ್ವಾನ್, 8ನೇ ಸ್ಥಾನದಲ್ಲಿ ಮುಂದುವರಿದ ಕೊಹ್ಲಿ

ಇನ್ನು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಆಸ್ಟ್ರೇಲಿಯಾ ರೀತಿಯೇ ಪಾಕಿಸ್ತಾನ ತಂಡವನ್ನು ಕೂಡ ಹೆಚ್ಚು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಆದರೆ ಟೂರ್ನಿ ಆರಂಭವಾದ ನಂತರ ಪಾಕಿಸ್ತಾನ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಮತ್ತು ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತಂಡಗಳಿಗೆ ಸೋಲುಣಿಸುವುದರ ಮೂಲಕ ಉತ್ತರವನ್ನು ನೀಡಿತು.

ತಂಡದ ಆಟಗಾರರಾದ ನಾಯಕ ಬಾಬರ್ ಅಜಮ್, ವಿಕೆಟ್ ಕೀಪರ್ ಮೊಹಮ್ಮದ್ ರಿಜ್ವಾನ್, ಮಧ್ಯಮ ಕ್ರಮಾಂಕದ ಆಟಗಾರರಾದ ಶೋಯೆಬ್ ಮಲಿಕ್ ಹಾಗೂ ಆಸಿಫ್ ಅಲಿ ಮತ್ತು ಬೌಲರ್‌ ಶಾಹಿನ್ ಅಫ್ರಿದಿ ಟೂರ್ನಿಯಲ್ಲಿ ನೀಡಿದ ಉತ್ತಮ ಪ್ರದರ್ಶನದ ಸಹಾಯದಿಂದ ಪಾಕಿಸ್ತಾನ ತಂಡ ಸೆಮಿಫೈನಲ್ ಹಂತದವರೆಗೂ ತಲುಪಿತ್ತು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ಸೂಪರ್ 12 ಹಂತದಲ್ಲಿ ಪಾಕಿಸ್ತಾನ ತಂಡ ಎಲ್ಲಾ ಪಂದ್ಯಗಳನ್ನು ಗೆಲ್ಲುವುದರ ಮೂಲಕ ಸೆಮಿಫೈನಲ್ ಸುತ್ತಿಗೆ ಲಗ್ಗೆ ಇಟ್ಟಿತ್ತು. ಹಾಗೂ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಗೆದ್ದ ಏಕೈಕ ತಂಡ ಪಾಕಿಸ್ತಾನ ಎಂಬ ಹೆಗ್ಗಳಿಕೆಗೂ ಪಾತ್ರವಾಗಿತ್ತು.

ಪಾಕ್ ಆಟಗಾರರ ಈ ಕೆಲಸ ಕಂಡು ನಿಮ್ಮ ದೇಶಕ್ಕೆ ವಾಪಸ್ಸಾಗಿ ಎಂದು ಕಿಡಿಕಾರಿದ ಬಾಂಗ್ಲಾ ಜನತೆ!ಪಾಕ್ ಆಟಗಾರರ ಈ ಕೆಲಸ ಕಂಡು ನಿಮ್ಮ ದೇಶಕ್ಕೆ ವಾಪಸ್ಸಾಗಿ ಎಂದು ಕಿಡಿಕಾರಿದ ಬಾಂಗ್ಲಾ ಜನತೆ!

ಲೀಗ್ ಹಂತದಲ್ಲಿ ಭಾರತ, ನ್ಯೂಜಿಲೆಂಡ್, ಅಫ್ಘಾನಿಸ್ತಾನ, ನಮೀಬಿಯ ಮತ್ತು ಸ್ಕಾಟ್ಲೆಂಡ್ ತಂಡಗಳ ವಿರುದ್ಧ ಗೆದ್ದು ಬೀಗಿದ್ದ ಪಾಕಿಸ್ತಾನ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾದ ಸೋಲನ್ನು ಕಂಡಿತು. ಆಸ್ಟ್ರೇಲಿಯದ ಮ್ಯಾಥ್ಯೂ ವೇಡ್ ಅಬ್ಬರದ ಮುಂದೆ ತಲೆ ಬಾಗಿಸಿದ ಶಾಹಿನ್ ಅಫ್ರಿದಿ ಅಂತಿಮವಾಗಿ 3 ಸಿಕ್ಸರ್ ಬಾರಿಸಿಕೊಳ್ಳುವುದರ ಮೂಲಕ ಸೆಮಿಫೈನಲ್ ಪಂದ್ಯವನ್ನು ಕೈಚೆಲ್ಲಿ ಟೂರ್ನಿಯಿಂದ ಪಾಕಿಸ್ತಾನ ತಂಡ ಹೊರಬಿತ್ತು. ಹೀಗೆ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಹ್ಯಾಟ್ರಿಕ್ ಸಿಕ್ಸ್ ಚಚ್ಚಿಸಿಕೊಂಡ ಶಾಹೀನ್ ಅಫ್ರಿದಿ ಸೂಪರ್ 12 ಹಂತದಲ್ಲಿ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಅಮೋಘ ಪ್ರದರ್ಶನವನ್ನು ನೀಡಿದ್ದರು.

ಹೌದು, ಅಕ್ಟೋಬರ್ 24ರ ಭಾನುವಾರದಂದು ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ತನ್ನ ಬದ್ಧ ವೈರಿಯಾದ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೀನಾಯವಾದ ಸೋಲನ್ನು ಅನುಭವಿಸಿತ್ತು. ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಪಾಕಿಸ್ತಾನ ವಿಶ್ವಕಪ್ ಹಣಾಹಣಿಯೊಂದರಲ್ಲಿ ಸೋಲಿಸಿದ ಮೈಲಿಗಲ್ಲನ್ನು ಈ ಪಂದ್ಯದ ಮೂಲಕ ನೆಟ್ಟಿತ್ತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಪಾಕಿಸ್ತಾನ ಗೆಲ್ಲಲು ಪ್ರಮುಖ ಕಾರಣವೆಂದರೆ ಅದು ಬೌಲರ್ ಶಾಹಿನ್ ಅಫ್ರಿದಿ. ಭಾರತದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ, ಕೆ ಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯವರ ವಿಕೆಟ್ ಪಡೆದ ಶಾಹೀನ್ ಅಫ್ರಿದಿ ಟೀಮ್ ಇಂಡಿಯಾಗೆ ಆರಂಭದಲ್ಲಿಯೇ ಒತ್ತಡವನ್ನು ಹೇರಿದ್ದರು.

ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ಶಾಹೀನ್ ಅಫ್ರಿದಿ 31 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದ್ದರು. ಭಾರತ ತಂಡದ ಮೂವರು ಪ್ರಮುಖ ಆಟಗಾರರ ವಿಕೆಟ್ ಪಡೆದು ಉತ್ತಮ ಪ್ರದರ್ಶನ ನೀಡಿದ ಶಾಹೀನ್ ಅಫ್ರಿದಿಗೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಹೀಗೆ ಭಾರತ ವಿರುದ್ಧದ ಪಂದ್ಯದಲ್ಲಿ ಉತ್ತಮ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದ ಶಾಹೀನ್ ಅಫ್ರಿದಿಗೆ ಇದೀಗ "ನಿಸ್ಸಾನ್ ಪ್ಲೇ ಆಫ್ ದಿ ಟೂರ್ನಮೆಂಟ್" ಪ್ರಶಸ್ತಿ ಲಭಿಸಿದೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರನಿಗೆ ನಿಸ್ಸಾನ್ ಪ್ಲೇ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ನೀಡಲಾಗುವುದು ಎಂದು ಘೋಷಿಸಲಾಗಿತ್ತು. ಇದೀಗ ಈ ಪ್ರಶಸ್ತಿಗೆ ಭಾರತದ ವಿರುದ್ಧ ಶಾಹಿನ್ ಅಫ್ರಿದಿ 3 ಪ್ರಮುಖ ವಿಕೆಟ್ ಪಡೆದು ನೀಡಿದ ಪ್ರದರ್ಶನ ಆಯ್ಕೆಯಾಗಿದೆ. ಈ ವಿಷಯವನ್ನು ಐಸಿಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡುವ ಮೂಲಕ ಘೋಷಣೆ ಮಾಡಿದೆ.

ಸುಮ್ನೆ ಕೂತು ಪಂದ್ಯ ನೋಡ್ತಿದ್ದ ಸಿರಾಜ್ ತಲೆಗೆ ರೋಹಿತ್‌ ಹೊಡೆದ ವಿಡಿಯೋ ವೈರಲ್ | Oneindia Kannada

Story first published: Thursday, November 18, 2021, 12:38 [IST]
Other articles published on Nov 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X