ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೂ ಮುನ್ನ ಪ್ರಮುಖ ಆಟಗಾರನನ್ನು ಹೊರಗಿಡುವ ಸೂಚನೆ ನೀಡಿದ ಕೊಹ್ಲಿ!

T20 World Cup 2021: Virat Kohli hints at Shardul Thakurs selection for Indias match against New Zealand

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಈ ಬಾರಿಯ ಆವೃತ್ತಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡಕ್ಕೆ ಹೇಳಿಕೊಳ್ಳುವಂತಹ ದೊಡ್ಡ ಆರಂಭವೇನೂ ಸಿಕ್ಕಿಲ್ಲ. ಪ್ರತಿಷ್ಠಿತ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿಯೇ ಬದ್ಧವೈರಿಯಾದ ಪಾಕಿಸ್ತಾನದ ವಿರುದ್ಧ ಹೀನಾಯ ಸೋಲನ್ನು ಕಂಡ ಭಾರತ ನೀರಸ ಆರಂಭವನ್ನು ಪಡೆದುಕೊಂಡಿತು.

ಆಟಗಾರರನ್ನು ಟೀಕಿಸುವವರು ಧೈರ್ಯವಿಲ್ಲದವರು: ಕಿಡಿಕಾರಿದ ವಿರಾಟ್ ಕೊಹ್ಲಿಆಟಗಾರರನ್ನು ಟೀಕಿಸುವವರು ಧೈರ್ಯವಿಲ್ಲದವರು: ಕಿಡಿಕಾರಿದ ವಿರಾಟ್ ಕೊಹ್ಲಿ

ಹೌದು, ಅಕ್ಟೋಬರ್ 24ರ ಭಾನುವಾರದಂದು ನಡೆದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ಪಾಕಿಸ್ತಾನ ಭಾರತದ ವಿರುದ್ಧ 10 ವಿಕೆಟ್‍ಗಳ ಅಮೋಘ ಜಯ ಸಾಧಿಸುವುದರ ಮೂಲಕ ಇದೇ ಮೊದಲ ಬಾರಿಗೆ ವಿಶ್ವಕಪ್ ಹಣಾಹಣಿಯ ಪಂದ್ಯವೊಂದರಲ್ಲಿ ಭಾರತದ ವಿರುದ್ಧ ಗೆಲುವು ಸಾಧಿಸಿದ ಮೈಲಿಗಲ್ಲನ್ನು ನೆಟ್ಟಿತು. ಹೀಗೆ ಪಾಕಿಸ್ತಾನದ ವಿರುದ್ಧ ಹೀನಾಯವಾಗಿ ಸೋತ ಭಾರತ ತಂಡದ ವಿರುದ್ಧ ಮತ್ತು ಆಟಗಾರರ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದವು. ಅದರಲ್ಲಿಯೂ ಪಾಕಿಸ್ತಾನದ ಆರಂಭಿಕ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಮತ್ತು ಬಾಬರ್ ಅಜಮ್ ಅವರ ವಿಕೆಟ್ ಪಡೆಯುವಲ್ಲಿ ಸಂಪೂರ್ಣ ವಿಫಲವಾದ ಟೀಮ್ ಇಂಡಿಯಾ ಬೌಲಿಂಗ್ ವಿಭಾಗದ ಕುರಿತು ಸಾಕಷ್ಟು ದೊಡ್ಡ ಮಟ್ಟದಲ್ಲಿ ಟೀಕೆಗಳು ವ್ಯಕ್ತವಾದವು.

ನ್ಯೂಜಿಲೆಂಡ್‌ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಾಗಬೇಕಾದ ಬದಲಾವಣೆಗಳನ್ನು ತಿಳಿಸಿದ ಪಠಾಣ್ನ್ಯೂಜಿಲೆಂಡ್‌ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಾಗಬೇಕಾದ ಬದಲಾವಣೆಗಳನ್ನು ತಿಳಿಸಿದ ಪಠಾಣ್

ಹೀಗೆ ಪಾಕಿಸ್ತಾನದ ವಿರುದ್ಧ ತನ್ನ ಮೊದಲನೇ ಪಂದ್ಯ ಸೋತ ಟೀಂ ಇಂಡಿಯಾ ಇಂದು ( ಅಕ್ಟೋಬರ್ 31 ) ನಡೆಯಲಿರುವ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೆಣಸಾಡಲಿದೆ. ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಈ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದೆ. ಈ ಎರಡೂ ತಂಡಗಳು ಕೂಡ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ತಮ್ಮ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿವೆ. ಹಾಗೂ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್ ರೇಸ್ ಮುಂದುವರೆಸಲಿದ್ದು ಸೋತ ತಂಡ ಸೆಮಿಫೈನಲ್ ಪ್ರವೇಶಿಸುವ ಅರ್ಹತೆ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯವನ್ನು ಟೀಮ್ ಇಂಡಿಯಾ ಗೆಲ್ಲಬೇಕೆಂದರೆ ಪಾಕಿಸ್ತಾನ ವಿರುದ್ಧ ಕಣಕ್ಕಿಳಿದಿದ್ದ ತಂಡವನ್ನೇ ಕಣಕ್ಕಿಳಿಸಬಾರದು, ತಂಡದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಳ್ಳಲೇಬೇಕು ಎಂದು ಹಲವಾರು ಮಾಜಿ ಕ್ರಿಕೆಟಿಗರು ಸಲಹೆಯನ್ನು ನೀಡಿದ್ದಾರೆ. ಆದರೆ ಈ ಕುರಿತಾಗಿ ಟೀಮ್ ಇಂಡಿಯಾ ಕಡೆಯಿಂದ ಯಾವುದೇ ರೀತಿಯ ಮಾಹಿತಿಗಳು ಹೊರ ಬಿದ್ದಿರಲಿಲ್ಲ. ಇದೀಗ ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಮಾತನಾಡಿದ್ದು, ವಿಶೇಷವಾಗಿ ಶಾರ್ದೂಲ್ ಠಾಕೂರ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಮೂಲಕ ವಿರಾಟ್ ಕೊಹ್ಲಿ ನ್ಯೂಜಿಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆಗಳು ಆಗಬಹುದು ಎಂಬ ಸುಳಿವನ್ನು ಈ ಕೆಳಕಂಡಂತೆ ಹೇಳಿಕೆ ನೀಡಿ ಬಿಟ್ಟುಕೊಟ್ಟಿದ್ದಾರೆ.

{photo-feature}

Story first published: Sunday, October 31, 2021, 14:38 [IST]
Other articles published on Oct 31, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X