ಸೌತ್ಆಫ್ರಿಕಾ vs ಇಂಗ್ಲೆಂಡ್: ಸೆಮಿಫೈನಲ್ ಪ್ರವೇಶಿಸಲು ಸೌತ್ಆಫ್ರಿಕಾ ಈ ಅಂತರದಲ್ಲಿ ಗೆಲ್ಲಲೇಬೇಕು!

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 39ನೇ ಪಂದ್ಯದಲ್ಲಿ ಇಂದು ( ನವೆಂಬರ್ 6 ) ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ಸ್ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸೆಣಸಾಟ ನಡೆಸುತ್ತಿವೆ. ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಈ ಹೈವೋಲ್ಟೇಜ್ ಪಂದ್ಯ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮಾರ್ಗನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಎದುರಾಳಿ ಸೌತ್ ಆಫ್ರಿಕಾ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ನೀಡಿದ್ದಾರೆ.
ಇನ್ನು ಟೂರ್ನಿಯಲ್ಲಿ ಇಂಗ್ಲೆಂಡ್ ಇದುವರೆಗೂ ಒಟ್ಟು 4 ಪಂದ್ಯಗಳನ್ನಾಡಿದ್ದು ಎಲ್ಲಾ ಪಂದ್ಯಗಳಲ್ಲಿಯೂ ಜಯ ಗಳಿಸುವುದರ ಮೂಲಕ ಈಗಾಗಲೇ ಸೆಮಿಫೈನಲ್ ಸುತ್ತಿಗೆ ಅಧಿಕೃತವಾಗಿ ಪ್ರವೇಶವನ್ನು ಪಡೆದುಕೊಂಡಿದೆ. ಹೀಗಾಗಿ ಇಂದು ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಪಂದ್ಯದ ಫಲಿತಾಂಶ ಇಂಗ್ಲೆಂಡ್ ತಂಡದ ಮೇಲೆ ಯಾವುದೇ ರೀತಿಯ ಪರಿಣಾಮವನ್ನು ಬೀರುವುದಿಲ್ಲ ಎಂದೇ ಹೇಳಬಹುದು. ಆದರೆ ಎದುರಾಳಿ ಸೌತ್ ಆಫ್ರಿಕಾ ತಂಡಕ್ಕೆ ಮಾತ್ರ ಈ ಪಂದ್ಯ ಮಹತ್ವದ್ದಾಗಿದೆ. ಹೌದು, ಟೂರ್ನಿಯಲ್ಲಿ ಇದುವರೆಗೂ ಒಟ್ಟು 4 ಪಂದ್ಯಗಳನ್ನಾಡಿರುವ ದಕ್ಷಿಣ ಆಫ್ರಿಕಾ 3 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದು, ಮತ್ತೊಂದು ಪಂದ್ಯದಲ್ಲಿ ಸೋತಿದೆ. ಹೀಗೆ 6 ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲಿ ಉತ್ತಮ ನೆಟ್ ರನ್ ರೇಟ್ ಪಡೆದುಕೊಳ್ಳುವ ಹಾಗೆ ಗೆಲ್ಲಲೇಬೇಕಾಗಿದೆ.
ಹೌದು ಈ ಪಂದ್ಯ ಆರಂಭವಾಗುವ ಮುನ್ನ ಮುಗಿದ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ದೊಡ್ಡ ಅಂತರದಲ್ಲಿ ಗೆಲ್ಲುವ ಮೂಲಕ ಒಳ್ಳೆಯ ನೆಟ್ ರನ್ ರೇಟ್ ಪಡೆದುಕೊಂಡು ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ. ಹೀಗಾಗಿ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಆಸ್ಟ್ರೇಲಿಯಾ ತಂಡದ ನೆಟ್ ರನ್ ರೇಟ್ ಮೀರಿಸುವ ರೀತಿ ಗೆಲುವನ್ನು ಸಾಧಿಸಲೇಬೇಕಾಗಿದೆ. ಹೀಗೆ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ತಂಡಕ್ಕಿಂತ ಹೆಚ್ಚಿನ ನೆಟ್ ರನ್ ರೇಟ್ ಪಡೆದುಕೊಳ್ಳುವ ರೀತಿಯಲ್ಲಿ ಗೆಲ್ಲಬೇಕೆಂದರೆ ಈ ಕೆಳಕಂಡಂತೆ ಪ್ರದರ್ಶನ ನೀಡಲೇಬೇಕಾಗಿದೆ..

ಇಂಗ್ಲೆಂಡ್ ವಿರುದ್ಧ 57 ರನ್‌ಗಳ ಅಂತರದಲ್ಲಿ ಗೆಲ್ಲಲೇಬೇಕು ದಕ್ಷಿಣ ಆಫ್ರಿಕಾ
ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆಯುತ್ತಿರುವ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆರಂಭಿಸಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ತಂಡ ದೊಡ್ಡ ಮೊತ್ತದ ರನ್ ಕಲೆ ಹಾಕಬೇಕಾದ ಅನಿವಾರ್ಯತೆ ಎದುರಾಗಿದೆ. ಹೌದು, ದಕ್ಷಿಣ ಆಫ್ರಿಕಾ ತಂಡಕ್ಕೆ ಬಲಿಷ್ಠ ಇಂಗ್ಲೆಂಡ್ ಎದುರಾಳಿಯಾಗಿರುವುದರಿಂದ ಕೈಲಾದಷ್ಟು ದೊಡ್ಡ ಮೊತ್ತವನ್ನು ಗುರಿಯಾಗಿ ನೀಡಬೇಕಿದೆ. ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಕನಿಷ್ಠ 57 ರನ್‌ಗಳ ಅಂತರದಲ್ಲಿ ಗೆಲ್ಲಲೇಬೇಕಿದೆ. ಹೀಗಾದಾಗ ಮಾತ್ರ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾವನ್ನು ಅಂಕಪಟ್ಟಿಯಲ್ಲಿ ಹಿಂದಿಕ್ಕಿ ಸೆಮಿಫೈನಲ್ ಪ್ರವೇಶಿಸಲಿದೆ. ಇಲ್ಲವಾದರೆ ಸೆಮಿಫೈನಲ್ ಪ್ರವೇಶಿಸುವಲ್ಲಿ ವಿಫಲವಾಗಲಿದೆ.

ದಕ್ಷಿಣ ಆಫ್ರಿಕಾ ಆಡುವ ಬಳಗ
ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯದಲ್ಲಿ ಕಣಕ್ಕಿಳಿದಿರುವ ದಕ್ಷಿಣ ಆಫ್ರಿಕಾದ ಆಡುವ ಬಳಗ ಈ ಕೆಳಕಂಡಂತಿದೆ.
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ (ನಾಯಕ), ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಚ್ ನಾರ್ಕಿಯಾ, ತಬ್ರೈಜ್ ಶಮ್ಸಿ

ಇಂಗ್ಲೆಂಡ್ ಆಡುವ ಬಳಗ
ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯದಲ್ಲಿ ಕಣಕ್ಕಿಳಿದಿರುವ ಇಂಗ್ಲೆಂಡ್ ತಂಡದ ಆಡುವ ಬಳಗ ಈ ಕೆಳಕಂಡಂತಿದೆ.
ಜೇಸನ್ ರಾಯ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಡೇವಿಡ್ ಮಲನ್, ಜಾನಿ ಬೈರ್‌ಸ್ಟೋವ್, ಇಯಾನ್ ಮಾರ್ಗನ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications