T20 world cup: ಇತ್ತೀಚಿನ ಅಂಕಿ ಅಂಶಗಳನ್ನು ನೋಡಿದರೆ ರೋಹಿತ್ ಶರ್ಮಾಗೆ ತಂಡದ ನಾಯಕತ್ವ ಅಲ್ಲ, ಸ್ಥಾನ ಪಡೆಯುವುದು ಕಷ್ಟ
ವೆಸ್ಟ್‌ಇಂಡೀಸ್ ಅಮೆರಿಕದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡುವ ಆಸೆಯನ್ನು ಹೊಂದಿದ್ದ ಟೀಮ್ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಆಸೆ ದೂರ ಸರಿಯುತ್ತಿರುವಂತೆ ಕಾಣುತ್ತಿದೆ. ಬಹಳ ಕಷ್ಟ ಪಟ್ಟು ಅಫ್ಘಾನಿಸ್ತಾನ ವಿರುದ್ಧದ ತವರಿನಲ್ಲಿ ಸರಣಿಯಲ್ಲಿ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದ ರೋಹಿತ್, ಮುಂಬರುವ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸುವುದನ್ನು ದೂರ ಇಡಿ, ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಸಹ ಕ್ಷೀಣಿಸುತ್ತಿರುವಂತೆ ಕಾಣುತ್ತಿವೆ.
ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಭಾರತ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಅನುಭವಿಸಿತ್ತು. ಇದಾದ ಬಳಿಕ ರೋಹಿತ್ ಶರ್ಮಾ ಅಂಗಳಕ್ಕೆ ಪ್ರವೇಶ ಮಾಡಿರಲಿಲ್ಲ. ಸುಮಾರು 14 ತಿಂಗಳ ತರುವಾಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದರು. ಆದರೆ ಅವರು ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡದೇ ಟೀಕೆಗೆ ಗುರಿಯಾಗುತ್ತಿದ್ದಾರೆ.

ರೋಹಿತ್ ಶರ್ಮಾಗೆ ಟಿ20 ವಿಶ್ವಕಪ್‌ನಲ್ಲಿ ನಾಯಕತ್ವದ ಜವಾಬ್ದಾರಿಯನ್ನು ಬಿಸಿಸಿಐ ನೀಡಬಹುದು ಎಂದು ನಂಬಲಾಗಿತ್ತು. ಆದರೆ ಸದ್ಯದ ಪರಿಸ್ಥಿತಿ ನೋಡಿದರೆ ನಾಯಕತ್ವ ಬಹಳ ದೂರದ ಸಂಗತಿ, ರೋಹಿತ್ ಶರ್ಮಾ ತಂಡದಲ್ಲಿ ಸ್ಥಾನ ಪಡೆಯುತ್ತಾರೋ ಇಲ್ಲವೋ ಎಂಬ ಚರ್ಚೆ ಶುರುವಾಗಿದೆ.
ಹೇಗಿದೆ ರೋಹಿತ್ ಇತ್ತೀಚಿನ ಪ್ರದರ್ಶನ
ಏಕದಿನ ವಿಶ್ವಕಪ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನವನ್ನು ನೋಡಿದ ನಂತರ ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಿದ್ದಾರೆ. ಆದರೆ ಏಕದಿನ ಕ್ರಿಕೆಟ್‌ನಲ್ಲಿ ಆಡಿದ ರೀತಿ ಅಟ್ಯಾಕಿಂಗ್ ಗೇಮ್ ಆಡಲು ಸಾಧ್ಯವಾಗುತ್ತಿಲ್ಲ. ಚೇಸ್ ಮಾಡುವಾಗ ರೋಹಿತ್ ಶರ್ಮಾ ಅವರ ಅಂಕಿ ಅಂಶಗಳನ್ನು ಒಮ್ಮೆ ನೋಡಿದರೆ, ಬೇರೆ ಪ್ಲೇಯರ್ ಈ ಸಾಧನೆ ಮಾಡಿದ್ದರೇ ಯಾವಗಲೋ ತಂಡದಿಂದ ಕೈ ಬಿಡಬೇಕಿತ್ತು. ಕಳೆದ ಐದು ಪಂದ್ಯಗಳಲ್ಲಿ ರೋಹಿತ್ ಪ್ರತಿ ಪಂದ್ಯಕ್ಕೂ ಒಂದು ರನ್ ಸಹ ಬಾರಿಸಿಲ್ಲ. ಇವರು ಒಟ್ಟಾರೆ ಐದು ಪಂದ್ಯಗಳಿಂದ ಕೇವಲ ನಾಲ್ಕು ರನ್ ಬಾರಿಸಿದ್ದಾರೆ.
ರೋಹಿತ್ ಶರ್ಮಾ ಅವರ T20 ವೃತ್ತಿಜೀವನವವನ್ನು ನೋಡಿದರೆ, ಅವರು 150 ಪಂದ್ಯಗಳನ್ನು ಆಡಿದ ವಿಶ್ವದ ಮೊದಲ ಆಟಗಾರರಾಗಿದ್ದಾರೆ. ರೋಹಿತ್ ಶರ್ಮಾ 150 ಪಂದ್ಯಗಳ 142 ಇನ್ನಿಂಗ್ಸ್‌ಗಳಲ್ಲಿ 30.34 ಸರಾಸರಿ ಮತ್ತು 139.1 ಸ್ಟ್ರೈಕ್ ರೇಟ್‌ನಲ್ಲಿ 3853 ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಟಿ20ಯಲ್ಲಿ 29 ಅರ್ಧಶತಕಗಳನ್ನು ಬಾರಿಸಿದ್ದಾರೆ ಮತ್ತು ಅವರು ನಾಲ್ಕು ಶತಕಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಿಂದ ರೋಹಿತ್ ಶರ್ಮಾ ಚುಟುಕು ಕ್ರಿಕೆಟ್‌ನಲ್ಲಿ ಸತತ ಕುಸಿತ ಕಾಣುತ್ತಿದೆ.

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಯಲ್ಲಿ ರೋಹಿತ್ ಶರ್ಮಾಗೆ ಅವಕಾಶ ನೀಡಲಾಗಿದೆ. ಹಾರ್ದಿಕ್ ಪಾಂಡ್ಯ ಟಿ20 ವಿಶ್ವಕಪ್ ಆಡದಿದ್ದಲ್ಲಿ ನಾಯಕತ್ವದ ಜವಾಬ್ದಾರಿಯನ್ನು ಅವರಿಗೆ ನೀಡಲಾಗುವುದು ಎಂದು ಅಂದಾಜಿಸಲಾಗಿತ್ತು. ಆದಾಗ್ಯೂ, ರೋಹಿತ್ ಶರ್ಮಾಗೆ ಇನ್ನೂ ತನ್ನನ್ನು ತಾನು ಸಾಬೀತುಪಡಿಸಲು ಅವಕಾಶವಿದೆ. ರೋಹಿತ್ ಶರ್ಮಾ ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದರೆ ತಂಡದ ನಾಯಕತ್ವ ಪಡೆಯುವುದು ಖಚಿತ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications