For Quick Alerts
ALLOW NOTIFICATIONS  
For Daily Alerts
 

IND vs NED: ಭಾರತ vs ನೆದರ್ಲ್ಯಾಂಡ್ಸ್ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ & ಲೈವ್ ಸ್ಕೋರ್

T20 Wolrd cup 2022 IND vs NED: India vs Netherlands Toss Report, Playing 11 And Live Score

ಭಾರತ ತಂಡವು ತನ್ನ ಟಿ20 ವಿಶ್ವಕಪ್ 2022 ಅಭಿಯಾನವನ್ನು ಅಕ್ಟೋಬರ್ 23ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಗೆಲುವಿನೊಂದಿಗೆ ಪ್ರಾರಂಭಿಸಿತು.

ವಿರಾಟ್ ಕೊಹ್ಲಿಯ ಅತ್ಯುತ್ತಮ ಪ್ರದರ್ಶನದ ಸಹಾಯದಿಂದ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ರೋಚಕ ಗೆಲುವಿನ ನಂತರ, ಭಾರತ ಇದೀಗ ಅಕ್ಟೋಬರ್ 27ರಂದು ಗುರುವಾರ ಸಿಡ್ನಿಯಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸುತ್ತಿದೆ. ಈ ಎರಡು ತಂಡಗಳು ಟಿ20 ಕ್ರಿಕೆಟ್‌ನಲ್ಲಿ ಮುಖಾಮುಖಿಯಾಗುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರು. ಹೋಗಾಗಿ ಸ್ಕಾಟ್ ಎಡ್ವರ್ಡ್ಸ್ ನಾಯಕತ್ವದ ನೆದರ್ಲ್ಯಾಂಡ್ಸ್ ತಂಡ ಮೊದಲು ಬೌಲಿಂಗ್ ಮಾಡಲಿದೆ.

ಭಾರತ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ ಮೈದಾನಕ್ಕಿಳಿಯುತ್ತಿದ್ದಂತೆ ಗೆಲುವಿನ ಆವೇಗವನ್ನು ಮುಂದುವರಿಸಲು ನೋಡುತ್ತಿದೆ. ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ನಡುವಿನ ಸೂಪರ್ 12 ಗುಂಪು 2ರ ಪಂದ್ಯ ತಡವಾಗಿ ಮುಕ್ತಾಯಗೊಂಡ ಕಾರಣ ಭಾರತ ಮತ್ತು ನೆದರ್ಲೆಂಡ್ಸ್ ಪಂದ್ಯಕ್ಕೆ ಟಾಸ್ ವಿಳಂಬವಾಯಿತು.

ಭಾರತ ಮತ್ತು ನೆದರ್ಲಂಡ್ಸ್ ತಂಡಗಳ ಆಡುವ 11ರ ಬಳಗ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್‌ದೀಪ್ ಸಿಂಗ್

ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್

Story first published: Thursday, October 27, 2022, 12:32 [IST]
Other articles published on Oct 27, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+