
ಗುರುವಾರ (ಅಕ್ಟೋಬರ್ 27) ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಐಸಿಸಿ ಪುರುಷರ ಟಿ20 ವಿಶ್ವಕಪ್ 2022ರ ತಮ್ಮ ಎರಡನೇ ಸೂಪರ್ 12 ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸುತ್ತಿದೆ.
ವಿರಾಟ್ ಕೊಹ್ಲಿ, ನಾಯಕ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಅರ್ಧಶತಕಗಳ ನೆರವಿನಿಂದ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿದ್ದು, ಎದುರಾಳಿ ತಂಡಕ್ಕೆ 180 ರನ್‌ಗಳ ಬೃಹತ್ ಗುರಿ ನೀಡಿದೆ.
ವಿರಾಟ್ ಕೊಹ್ಲಿ 44 ಎಸೆತಗಳಲ್ಲಿ 62 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ 25 ಎಸೆತಗಳಲ್ಲಿ ಅರ್ಧಶರತಕ ಗಳಿಸುವ ಮೂಲಕ ಮುರಿಯದ ಮೂರನೇ ವಿಕೆಟ್ ಜೊತೆಯಾಟದಲ್ಲಿ 48 ಎಸೆತಗಳಲ್ಲಿ 95 ರನ್ ಚಚ್ಚಿದರು. ಇದರಿಂದಾಗಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ 180 ರನ್‌ಗಳ ದೊಡ್ಡ ಮೊತ್ತದ ಗುರಿ ನೀಡಲು ಸಹಾಯವಾಯಿತು.
ಇದಕ್ಕೂ ಮೊದಲು, ರೋಹಿತ್ ಶರ್ಮಾ 39 ಎಸೆತಗಳಲ್ಲಿ 53 ರನ್ ಗಳಿಸಿ ಔಟಾದ ನಂತರ ಜೊತೆಗೂಡಿದ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಭಾರತವನ್ನು ದೊಡ್ಡ ಮೊತ್ತದ ಮುನ್ನಡೆಸಿದರು.
ಇದಕ್ಕೂ ಮುನ್ನ, ಗುರುವಾರ ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ನಂತರ ಇನಿಂಗ್ಸ್‌ನ ಮೂರನೇ ಓವರ್‌ನಲ್ಲಿ ಕೆಎಲ್ ರಾಹುಲ್ ಅವರ ವಿಕೆಟ್ ಕಳೆದುಕೊಂಡ ನಂತರ ವಿರಾಟ್ ಕೊಹ್ಲಿ ಜೊತೆಗೆ ಸೇರಿ ರೋಹಿತ್ ಶರ್ಮಾ ಭಾರತದ ಇನ್ನಿಂಗ್ಸ್ ಅನ್ನು ವೇಗಗೊಳಿಸಿದರು.
ಭಾರತ ಮತ್ತು ನೆದರ್ಲಂಡ್ಸ್ ತಂಡಗಳ ಆಡುವ 11ರ ಬಳಗ
ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಶ್‌ದೀಪ್ ಸಿಂಗ್
ನೆದರ್ಲ್ಯಾಂಡ್ಸ್: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಬಾಸ್ ಡಿ ಲೀಡ್, ಕಾಲಿನ್ ಅಕರ್ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್ (ನಾಯಕ/ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೋಗನ್ ವ್ಯಾನ್ ಬೀಕ್, ಶರೀಜ್ ಅಹ್ಮದ್, ಫ್ರೆಡ್ ಕ್ಲಾಸೆನ್, ಪಾಲ್ ವ್ಯಾನ್ ಮೀಕೆರೆನ್