
ಭಾರತಕ್ಕೆ ಆಧಾರವಾದ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ
ಕುಸಿತ ಟೀಂ ಇಂಡಿಯಾಗೆ ಆಧಾರವಾಗಿದ್ದು ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ. 5ನೇ ವಿಕೆಟ್‌ಗೆ ಶತಕದ ಜೊತೆಯಾಟವಾಡಿದ ಈ ಜೋಡಿ ಟೀಂ ಇಂಡಿಯಾವನ್ನ ಮೇಲೆತ್ತಿದರು. ಒಂದೆಡೆ ಹಾರ್ದಿಕ್ ಪಾಂಡ್ಯ 40ರನ್‌ಗಳಿಸಿ ವಿಕೆಟ್ ಒಪ್ಪಿಸಿದ ಬಳಿಕ ಸಂಪೂರ್ಣ ಗೆಲುವಿನ ಜವಾಬ್ದಾರಿ ವಿರಾಟ್ ಹೆಗಲೇರಿತು.
53 ಎಸೆತಗಳಲ್ಲಿ ಅಜೇಯ 82ರನ್ ಕಲೆಹಾಕಿದ ವಿರಾಟ್ ಕೊಹ್ಲಿ ಇನ್ನಿಂಗ್ಸ್‌ನಲ್ಲಿ 6 ಅಮೋಘ ಬೌಂಡರಿ ಮತ್ತು 4 ಭರ್ಜರಿ ಸಿಕ್ಸರ್‌ಗಳಿದ್ದವು. ಅಂತಿಮ ಓವರ್‌ನಲ್ಲಿ ಮೊಹಮ್ಮದ್ ನವಾಜ್ ಮಾಡಿದ ಎಡವಟ್ಟಿನಿಂದಾಗಿ ಭಾರತಕ್ಕೆ ಕೊಂಚ ವರದಾನವಾಯಿತು. 19 ಓವರ್‌ನಲ್ಲಿ ಸತತ ಎರಡು ಸಿಕ್ಸರ್ ಜೊತೆಗೆ ಅಂತಿಮ ಓವರ್‌ನಲ್ಲಿ ಮತ್ತೊಂದು ಸಿಕ್ಸರ್ ಎತ್ತಿದ ಕೊಹ್ಲಿ ಟೀಂ ಇಂಡಿಯಾಗೆ ಗೆಲುವಿನ ದಡ ತಲುಪಿಸುವಲ್ಲಿ ಯಶಸ್ವಿಯಾದ್ರು. ಅಂತಿಮ ಎಸೆತದಲ್ಲಿ ಆರ್. ಅಶ್ವಿನ್ ರನ್ ಸಿಡಿಸುವ ಮೂಲಕ ಭಾರತಕ್ಕೆ ಅತ್ಯಂತ ರೋಚಕ ಗೆಲುವು ತಂದುಕೊಟ್ಟರು.

ಪಾಕಿಸ್ತಾನಕ್ಕೆ ಕೈಕೊಟ್ಟ ಓಪನರ್ಸ್, 159 ರನ್‌ಗೆ ಇನ್ನಿಂಗ್ಸ್ ಮುಕ್ತಾಯ
ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಉತ್ತಮ ಆರಂಭ ಪಡೆಯುವಲ್ಲಿ ವಿಫಲಗೊಂಡಿತು. ಮೊದಲ 4 ಓವರ್‌ಗಳಲ್ಲಿ ಇಬ್ಬರು ಓಪನರ್‌ಗಳನ್ನ ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿತು. ಪಂದ್ಯದ ಎರಡನೇ ಓವರ್‌ನಲ್ಲಿ ಅದ್ಭುತ ಬೌಲಿಂಗ್ ದಾಳಿ ನಡೆಸಿದ ಅರ್ಷ್‌ದೀಪ್ ಸಿಂಗ್ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಶೂನ್ಯಕ್ಕೆ ಔಟ್ ಮಾಡುವಲ್ಲಿ ಯಶಸ್ವಿಯಾದ್ರು.
ಬಾಬರ್ ಬೆನ್ನಲ್ಲೇ ಮೊಹಮ್ಮದ್ ರಿಜ್ವಾನ್ ಭಾರತದ ಯುವ ವೇಗಿ ಅರ್ಷ್‌ದೀಪ್ ಸಿಂಗ್‌ಗೆ ವಿಕೆಟ್ ಒಪ್ಪಿಸುವ ಮೂಲಕ ತಂಡವು ಆರಂಭಿಕ ಆಘಾತಕ್ಕೊಳಗಾಯಿತು. ಬಾಬರ್ ಅಜಮ್ ಶೂನ್ಯಕ್ಕೆ ಗೋಲ್ಡನ್ ಡಕೌಟ್ ಆದ್ರೆ, ಮೊಹಮ್ಮದ್ ರಿಜ್ವಾನ್ 12 ಎಸೆತಗಳಲ್ಲಿ ಕೇವಲ 4 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ರು.
ಎರಡು ವಿಕೆಟ್ ಕಳೆದುಕೊಂಡ ಪಾಕಿಸ್ತಾನ ತಂಡಕ್ಕೆ ಶಾನ್ ಮಸೂದ್ ಹಾಗೂ ಇಫ್ತಿಕರ್ ಅಹಮದ್ ಆಧಾರವಾದ್ರು. ಭಾರತದ ಬೌಲಿಂಗ್ ದಾಳಿಯನ್ನು ಸ್ವಲ್ಪ ಮಟ್ಟಿಗೆ ಹಿಮ್ಮೆಟ್ಟಿಸಿದ ಈ ಇಬ್ಬರು ಬ್ಯಾಟರ್‌ಗಳು ತಲಾ ಅರ್ಧಶತಕ ದಾಖಲಿಸುವ ಮೂಲಕ ಪಾಕ್‌ಗೆ ಸ್ಪರ್ಧಾತ್ಮಕ ಮೊತ್ತ ಕಲೆಹಾಕುವಲ್ಲಿ ನೆರವಾದರು. ಇಫ್ತಿಕರ್ ಅಹಮದ್ 34 ಎಸೆತಗಳಲ್ಲಿ 51ರನ್ ಹಾಗೂ ಶಾನ್ ಮಸೂದ್ 52ರನ್ ಕಲೆಹಾಕಿದರ ಪರಿಣಾಮ ಪಾಕಿಸ್ತಾನ 8 ವಿಕೆಟ್ ನಷ್ಟಕ್ಕೆ 159ರನ್ ಕಲೆಹಾಕಿತು.
ಭಾರತದ ಪರ ಬೊಂಬಾಟ್ ಬೌಲಿಂಗ್ ಮಾಡಿದ ಅರ್ಷ್‌ದೀಪ್ ಸಿಂಗ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ 3 ವಿಕೆಟ್ ಪಡೆದ್ರೆ, ಮೊಹಮ್ಮದ್ ಶಮಿ ಹಾಗೂ ಭುವನೇಶ್ವರ್ ಕುಮಾರ್ ತಲಾ 1 ವಿಕೆಟ್ ಪಡೆದರು.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬೆಂಚ್: ಯುಜವೇಂದ್ರ ಚಹಾಲ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ರಿಷಭ್ ಪಂತ್
ಪಾಕಿಸ್ತಾನ: ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಶಾನ್ ಮಸೂದ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ
ಬೆಂಚ್: ಖುಷ್ದಿಲ್ ಷಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ವಾಸಿಂ ಜ್ಯೂನಿಯರ್, ಫಖಾರ್ ಜಮಾನ್


Click it and Unblock the Notifications












