
ಮೆಲ್ಬರ್ನ್‌ನ ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ವಿಶ್ವಕಪ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಫೀಲ್ಡಿಂಗ್ ಆಯ್ದುಕೊಂಡಿದ್ದು ಪಾಕಿಸ್ತಾನ ಮೊದಲು ಬ್ಯಾಟಿಂಗ್ ಮಾಡಲಿದೆ.
ಕಳೆದ ವಿಶ್ವಕಪ್‌ನಲ್ಲಿ ಅನುಭವಿಸಿದ ಕೆಟ್ಟ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ರೆಡಿಯಾಗಿದ್ದು, ಏಷ್ಯಾಕಪ್‌ನಲ್ಲಿ ಭಾರತದ ವಿರುದ್ಧ ನೀಡಿದ ಉತ್ತಮ ಪ್ರದರ್ಶನವನ್ನೇ ಮುಂದುವರಿಸಲು ಬಾಬರ್ ಅಜಮ್ ನಾಯಕತ್ವದ ತಂಡವು ಯೋಜನೆ ರೂಪಿಸಿದೆ.
ಭಾರತ ಮತ್ತು ಪಾಕಿಸ್ತಾನ ಕಳೆದ 6 ಟಿ20 ಪಂದ್ಯಗಳ ಮುಖಾಮುಖಿಯಲ್ಲಿ ಟಾಸ್ ಗೆದ್ದಂತಹ ನಾಯಕನು ಫೀಲ್ಡಿಂಗ್ ಆಯ್ದುಕೊಂಡಿದ್ದು, ಇದರಲ್ಲಿ ಭಾರತ 4 ಪಂದ್ಯ ಗೆದ್ದಿದ್ದು, ಪಾಕಿಸ್ತಾನ 2 ಪಂದ್ಯವನ್ನು ಗೆದ್ದು ಕೊಂಡಿದೆ.
ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಏಳು ಬ್ಯಾಟರ್, ಓರ್ವ ಆಲ್‌ರೌಂಡರ್, ಇಬ್ಬರು ಸ್ಪಿನ್ನರ್ ಹಾಗೂ ಮೂವರ್ ಪೇಸರ್‌ಗಳನ್ನು ಆಯ್ದುಕೊಂಡಿದೆ. ಪಾಕಿಸ್ತಾನ ತಂಡದಲ್ಲಿ ಇಬ್ಬರು ಸ್ಪಿನ್ನರ್ ಹಾಗೂ ಮೂವರು ಪೇಸರ್‌ಗಳನ್ನು ಆಯ್ದುಕೊಂಡಿದ್ದು, ಉಭಯ ತಂಡಗಳಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ ಎಂಬುದನ್ನು ಈ ಕೆಳಗೆ ಕಾಣಬಹುದು.
ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್
ಟೀಂ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್
ಬೆಂಚ್: ಯುಜವೇಂದ್ರ ಚಹಾಲ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ರಿಷಭ್ ಪಂತ್
ಪಾಕಿಸ್ತಾನ: ಬಾಬರ್ ಅಜಮ್(ನಾಯಕ), ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಶಾನ್ ಮಸೂದ್, ಹೈದರ್ ಅಲಿ, ಮೊಹಮ್ಮದ್ ನವಾಜ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಆಸಿಫ್ ಅಲಿ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ
ಬೆಂಚ್: ಖುಷ್ದಿಲ್ ಷಾ, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ವಾಸಿಂ ಜ್ಯೂನಿಯರ್, ಫಖಾರ್ ಜಮಾನ್