T20 Women's World Cup 2023: ಭಾರತ vs ವೆಸ್ಟ್ ಇಂಡೀಸ್ ಪಂದ್ಯದ ವಿವರ, ಟಿವಿ & ಲೈವ್ ಸ್ಟ್ರೀಮಿಂಗ್

2023ರ ಐಸಿಸಿ ಮಹಿಳಾ ಟಿ20 ವಿಶ್ವಕಪ್ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಮಹಿಳಾ ತಂಡವನ್ನು ಮಣಿಸಿದ ಭಾರತ ಮಹಿಳಾ ತಂಡವು ಬುಧವಾರ, ಫೆಬ್ರವರಿ 15ರಂದು ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ವೆಸ್ಟ್ ಇಂಡೀಸ್ ತಂಡದೊಂದಿಗೆ ಸೆಣಸಾಡಲಿದೆ.
ಮೊದಲ ಪಂದ್ಯದ ಗೆಲುವಿನ ಹುಮ್ಮಸ್ಸಿನಲ್ಲಿರುವ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಬಿ ಗುಂಪಿನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಎರಡು ಪಂದ್ಯಗಳಿಂದ ನಾಲ್ಕು ಅಂಕಗಳೊಂದಿಗೆ ಇಂಗ್ಲೆಂಡ್ ಅಗ್ರಸ್ಥಾನದಲ್ಲಿದೆ.
ಹಿಂದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ವೆಸ್ಟ್ ಇಂಡೀಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು. ಭಾರತ ವಿರುದ್ಧ ಮತ್ತೊಂದು ಸೋಲು ಕಂಡರೆ ಕೆರಿಬಿಯನ್ ತಂಡ ನಾಕೌಟ್‌ಗೆ ಅರ್ಹತೆ ಪಡೆಯಲು ಅಸಾಧ್ಯವಾಗುತ್ತದೆ.
Mohammed Shami: ಕ್ರಿಕೆಟ್ ತ್ಯಜಿಸಲು ಮುಂದಾಗಿದ್ದ ಮೊಹಮ್ಮದ್ ಶಮಿ; ಬಹಿರಂಗಪಡಿಸಿದ ಮಾಜಿ ಬೌಲಿಂಗ್ ಕೋಚ್
ಇತ್ತ ಭಾರತ ಮಹಿಳಾ ತಂಡ ಉಪನಾಯಕಿ ಸ್ಮೃತಿ ಮಂಧಾನ ಅನುಪಸ್ಥಿತಿಯಲ್ಲಿ ಮೊದಲ ಪಂದ್ಯವನ್ನಾಡಿ ಪಾಕಿಸ್ತಾನ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದಲ್ಲಿ ಗೆದ್ದಿತು. ಅಭ್ಯಾಸ ಪಂದ್ಯದ ವೇಳೆ ಬೆರಳಿನ ಗಾಯದಿಂದಾಗಿ ಸ್ಟಾರ್ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ದೊಡ್ಡ ಪಂದ್ಯವನ್ನು ತಪ್ಪಿಸಿಕೊಂಡರು. ಇನ್ನು ಬುಧವಾರದ ಪಂದ್ಯದಂದು ಸ್ಮೃತಿ ಮಂಧಾನ ವೆಸ್ಟ್ ಇಂಡೀಸ್ ವಿರುದ್ಧ ಆಡುವ ಬಳಗಕ್ಕೆ ಮರಳುವ ನಿರೀಕ್ಷೆಯಿದೆ.

ಪಾಕಿಸ್ತಾನ ನೀಡಿದ್ದ 150 ರನ್ ಗುರಿಗೆ ಪ್ರತ್ಯುತ್ತರವಾಗಿ, ಭಾರತ ತಂಡದ ಜೆಮಿಮಾ ರೋಡ್ರಿಗಸ್ ಅಜೇಯ 53 ಮತ್ತು ರಿಚಾ ಘೋಷ್ ಅಜೇಯ 31 ರನ್‌ಗಳ ನೆರವಿನಿಂದ ಭಾರತವು 7 ವಿಕೆಟ್‌ಗಳಿಂದ ಗೆಲುವು ಸಾಧಿಸಿತು.
ಪಾಕಿಸ್ತಾನ ತಂಡದ ಬ್ಯಾಟಿಂಗ್ ವೇಳೆ ಕೊನೆಯ ಹತ್ತು ಓವರ್‌ಗಳಲ್ಲಿ ಭಾರತೀಯ ಬೌಲರ್‌ಗಳು 91 ರನ್‌ಗಳನ್ನು ಬಿಟ್ಟುಕೊಟ್ಟರು. ಈ ಕಾರಣದಿಂದ ಬೌಲಿಂಗ್ ವಿಭಾಗದಲ್ಲಿ ಕೆಲವು ಬದಲಾವಣೆಗಳನ್ನು ನೋಡಬಹುದಾಗಿದೆ.
ಭಾರತ vs ವೆಸ್ಟ್ ಇಂಡೀಸ್ ಪಂದ್ಯದ ವಿವರಗಳು
ಸ್ಥಳ ಮತ್ತು ದಿನಾಂಕ: ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವು ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್ ಕ್ರಿಕೆಟ್ ಮೈದಾನದಲ್ಲಿ ಬುಧವಾರ, ಫೆಬ್ರವರಿ 15ರಂದು ನಡೆಯಲಿದೆ.
ಪಂದ್ಯದ ಸಮಯ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವು ಭಾರತೀಯ ಕಾಲಮಾನ ಸಂಜೆ 6:30ಕ್ಕೆ ಪ್ರಾರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವೀಕ್ಷಣೆ: ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಇನ್ನು ಡಿಸ್ನಿ+ ಹಾಟ್‌ಸ್ಟಾರ್ ಮೊಬೈಲ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಭಾರತ ಮತ್ತು ವೆಸ್ಟ್ ಇಂಡೀಸ್ ಪೂರ್ಣ ತಂಡಗಳು
ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕ), ಸ್ಮೃತಿ ಮಂಧಾನ (ಉಪನಾಯಕ), ಯಾಸ್ತಿಕಾ ಭಾಟಿಯಾ, ಹರ್ಲೀನ್ ಡಿಯೋಲ್, ರಾಜೇಶ್ವರಿ ಗಾಯಕ್ವಾಡ್, ರಿಚಾ ಘೋಷ್, ಶಿಖಾ ಪಾಂಡೆ, ಜೆಮಿಮಾ ರೋಡ್ರಿಗಸ್, ಅಂಜಲಿ ಸರ್ವಾಣಿ, ದೀಪ್ತಿ ಶರ್ಮಾ, ರೇಣುಕಾ ಸಿಂಗ್, ದೇವಿಕಾ ವೈದ್ಯ, ಪೂಜಾ ವಸ್ತ್ರಾಕರ್, ಶಫಾಲಿ ವರ್ಮಾಕರ್, ರಾಧಾ ಯಾದವ್.
ವೆಸ್ಟ್ ಇಂಡೀಸ್ ತಂಡ: ಹೇಲಿ ಮ್ಯಾಥ್ಯೂಸ್ (ನಾಯಕ), ಶೆಮೈನ್ ಕ್ಯಾಂಪ್‌ಬೆಲ್ಲೆ (ಉಪನಾಯಕ), ಆಲಿಯಾ ಅಲೀನ್, ಶಾಮಿಲಿಯಾ ಕಾನ್ನೆಲ್, ಅಫಿ ಫ್ಲೆಚರ್, ಶಬಿಕಾ ಗಜ್ನಾಬಿ, ಚಿನೆಲ್ಲೆ ಹೆನ್ರಿ, ತ್ರಿಶನ್ ಹೋಲ್ಡರ್, ಜೈದಾ ಜೇಮ್ಸ್, ಜೆನಾಬಾ ಜೋಸೆಫ್, ಚೆಡಿಯನ್ ನೇಷನ್, ಕರಿಷ್ಮಾ ರಾಮ್‌ಹರಾಕ್, ಸ್ಟಾಕೆರಾನಿ ರಾಮ್‌ಹರಾಕ್ ಟೇಲರ್, ರಶಾದಾ ವಿಲಿಯಮ್ಸ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications