ಟಿ20 ವಿಶ್ವಕಪ್: ಭಾರತ vs ಪಾಕ್ ಪಂದ್ಯದ ಟಿಕೆಟ್ ಕೇಳಿದ ಅಭಿಮಾನಿಗೆ ಶಾಹೀನ್ ಅಫ್ರಿದಿ ಪ್ರತಿಕ್ರಿಯೆ

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯು ಕಳೆದ ಭಾನುವಾರದಿಂದ ಆರಂಭವಾಗಿದ್ದು ಸದ್ಯ ಅರ್ಹತಾ ಸುತ್ತಿನ ಪಂದ್ಯಗಳು ಮತ್ತು ಕೆಲ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಇನ್ನು ಎಂದಿನಂತೆ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯ ಪಂದ್ಯಗಳ ಪೈಕಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ.

ಇನ್ನು ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸೂಪರ್ 12 ಹಂತದ ಪಂದ್ಯವು ಅಕ್ಟೋಬರ್ 24ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಸಾಮಾನ್ಯ ಸರಣಿ ನಡೆಯುತ್ತಿದೆ ಎಂದರೆ ಸಾಕು ದೊಡ್ಡ ಮಟ್ಟದ ಸದ್ದು ನಿರ್ಮಾಣವಾಗಿ ಬಿಡುತ್ತದೆ. ಹೀಗಿರುವಾಗ ಈ ಎರಡೂ ತಂಡಗಳ ನಡುವೆ ವಿಶ್ವಕಪ್ ಪಂದ್ಯ ನಡೆಯುತ್ತಿದೆ ಎಂದರೆ ಅದರ ಪ್ರಭಾವ ಕ್ರಿಕೆಟ್ ಜಗತ್ತಿನಲ್ಲಿ ಸಾಮಾನ್ಯವಾಗಿರುವುದಿಲ್ಲ. ಈ ಎರಡೂ ತಂಡಗಳ ನಡುವೆ ನಡೆಯಲಿರುವ ಪಂದ್ಯವನ್ನು ವೀಕ್ಷಿಸುವುದಕ್ಕಾಗಿ ಕೆಲಸಗಳನ್ನು ಬದಿಗಿಟ್ಟು ಟಿವಿ ಮುಂದೆ ಕೂರುವ ಕೋಟ್ಯಂತರ ವೀಕ್ಷಕರಿದ್ದಾರೆ. ಕೇವಲ ಭಾರತ ಮತ್ತು ಪಾಕಿಸ್ತಾನ ದೇಶಗಳ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ ವಿಶ್ವದಾದ್ಯಂತ ಇರುವ ಕ್ರಿಕೆಟ್ ವೀಕ್ಷಕರು ಈ ಪಂದ್ಯವನ್ನು ತಪ್ಪದೇ ವೀಕ್ಷಿಸುತ್ತಾರೆ. ಹೀಗೆ ಸದಾ ದೊಡ್ಡ ಮಟ್ಟದ ಕ್ರೇಜ್ ಹುಟ್ಟು ಹಾಕುವ ಭಾರತ ಮತ್ತು ಪಾಕಿಸ್ತಾನ ನಡುವಿನ ವಿಶ್ವಕಪ್ ಹಣಾಹಣಿಯ ಬಿಸಿ ಇದೀಗ ಪಾಕಿಸ್ತಾನದ ಎಡಗೈ ವೇಗಿ ಶಾಹೀನ್ ಅಫ್ರಿದಿಗೂ ತಟ್ಟಿದೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ; ನಾಯಕ ಯಾರು, ಯಾರಿಗೆಲ್ಲಾ ಸ್ಥಾನ?ಸೈಯದ್ ಮುಷ್ತಾಕ್ ಅಲಿ ಟ್ರೋಫಿಗೆ ಕರ್ನಾಟಕ ತಂಡ ಪ್ರಕಟ; ನಾಯಕ ಯಾರು, ಯಾರಿಗೆಲ್ಲಾ ಸ್ಥಾನ?

ಸದ್ಯ ಅಭ್ಯಾಸ ಪಂದ್ಯಗಳಲ್ಲಿ ನಿರತರಾಗಿರುವ ಪಾಕಿಸ್ತಾನದ ಶಾಹಿನ್ ಅಫ್ರಿದಿ ತಾವು ಉಳಿದುಕೊಂಡಿರುವ ಹೋಟೆಲ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಾ ಇರಬೇಕಾದರೆ ಅಭಿಮಾನಿಯೋರ್ವ ಮುಂಬರಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ವೀಕ್ಷಿಸಲು ಟಿಕೆಟ್ ಬೇಕೆಂದು ಕೇಳಿದ್ದಾನೆ. ಹೀಗೆ ಅಭಿಮಾನಿ ಕೇಳಿದ್ದಕ್ಕೆ ಪ್ರತಿಕ್ರಿಯಿಸಿದ ಶಾಹೀನ್ ಅಫ್ರಿದಿ ಅಲ್ಲೇ ಒಂದೆರಡು ಕ್ಷಣ ನಿಂತು ತಮ್ಮ ಪಾಕೆಟ್ ಹುಡುಕಾಡಿದ್ದಾರೆ. ಹೀಗೆ ಪಾಕೆಟ್ ಹುಡುಕುವ ರೀತಿ ನಟಿಸಿದ ಶಾಹಿನ್ ಅಫ್ರಿದಿ ನನ್ನ ಬಳಿ ಟಿಕೆಟ್ ಇಲ್ಲ ಎಂದು ಸನ್ನೆಯ ಮೂಲಕ ತೋರಿಸಿದ್ದಾರೆ. ಸದ್ಯ ಶಾಹೀನ್ ಅಫ್ರಿದಿ ಅವರ ಈ ಪ್ರತಿಕ್ರಿಯೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ರಿಷಬ್ ಪಂತ್ ಗೆ ಧೋನಿಯಿಂದ ಸಖತ್ ಕ್ಲಾಸ್:ವಿಡಿಯೋ ವೈರಲ್ | Oneindia Kannada

ಈ ರೀತಿಯ ಘಟನೆ ಸಂಭವಿಸುತ್ತಿರುವುದು ಇದೇ ಮೊದಲೇನಲ್ಲ, ಇತ್ತೀಚಿಗಷ್ಟೆ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಮುಂಬೈ ಇಂಡಿಯನ್ಸ್ ಪಂದ್ಯವೊಂದರಲ್ಲಿ ರೋಹಿತ್ ಶರ್ಮಾಗೂ ಕೂಡ ಅಭಿಮಾನಿಯೋರ್ವ ಇದೇ ರೀತಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ನಡೆಯಲಿರುವ ಪಂದ್ಯದ ಟಿಕೆಟ್ ಇದೆಯಾ ಎಂದು ಪ್ರಶ್ನೆಯನ್ನು ಕೇಳಿದ್ದ.

For Quick Alerts
ALLOW NOTIFICATIONS
For Daily Alerts
Story first published: Thursday, October 21, 2021, 20:51 [IST]
Other articles published on Oct 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X