Champion Team India: ಚಾಂಪಿಯನ್ ಭಾರತ ತವರಿಗೆ ಮರಳುವ ದಿನಾಂಕ ಫಿಕ್ಸ್
ಜುಲೈ 2 ಮಂಗಳವಾರ, ಟಿ20 ವಿಶ್ವಕಪ್ ಗೆದ್ದ ನಂತರ ಭಾರತ ತಂಡ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡಿದೆ. ಇದರಿಂದಾಗಿ ತಂಡಕ್ಕೆ ಇನ್ನೂ ತಾಯ್ನಾಡಿಗೆ ಮರಳಲು ಸಾಧ್ಯವಾಗಿಲ್ಲ.
ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡ ಮಂಗಳವಾರ ಸಂಜೆ (ಸ್ಥಳೀಯ ಕಾಲಮಾನ) ಬಾರ್ಬಡೋಸ್‌ನಿಂದ ತವರಿಗೆ ಹಾರಲಿದ್ದು, ಬುಧವಾರ ಸಂಜೆ ದೆಹಲಿ ತಲುಪಲಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.

ಭಾರತ ತಂಡವು ಬಾರ್ಬಡೋಸ್‌ನಿಂದ ಸ್ಥಳೀಯ ಕಾಲಮಾನ ಸೋಮವಾರ ಬೆಳಿಗ್ಗೆ 11 ಗಂಟೆಗೆ (ರಾತ್ರಿ 8:30 IST) ಹೊರಡಬೇಕಾಗಿದ್ದ ಬೆರಿಲ್ ಚಂಡಮಾರುತದಿಂದಾಗಿ ಕಳೆದ ಎರಡು ದಿನಗಳಿಂದ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡಿದ್ದು, ಇದರಿಂದಾಗಿ ವಿಮಾನ ನಿಲ್ದಾಣದ ಮುಚ್ಚಲಾಗಿದೆ.
ಕಳೆದ ಕೆಲವು ಗಂಟೆಗಳಲ್ಲಿ ಅತ್ಯಂತ ಅಪಾಯಕಾರಿ ಮಟ್ಟದಲ್ಲಿ ಹವಾಮಾನ ವೈಪರೀತ್ಯಯು ತೀವ್ರಗೊಂಡಿದೆ. ಇಲ್ಲಿ ಸೃಷ್ಟಿಯಾಗಿರುವ ಚಂಡಮಾರುತದಿಂದ ಬಿರುಗಾಳಿ ಬೀಸುತ್ತಿದ್ದು, ಅತ್ಯಧಿಕ ಮಳೆ ನೀಡಿಕೆ ಮುನ್ಸೂಚನೆ ಇದ್ದು ಎಚ್ಚರಿಕೆ ನೀಡಲಾಗಿದೆ.
ಪ್ರಧಾನಿ ಮೋದಿ ಭೇಟಿ ಸಾಧ್ಯತೆ
ಟಿ20 ವಿಶ್ವಕಪ್ ಗೆದ್ದ ಭಾರತ ತಂಡ ಬಾರ್ಬಡೋಸ್‌ನಿಂದ ಮರಳಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಮೂಲವೊಂದು ತಿಳಿಸಿದೆ. 'ಬಾರ್ಬಡೋಸ್‌ನಿಂದ ಹಿಂದಿರುಗಿದ ನಂತರ ಟೀಮ್ ಇಂಡಿಯಾ ಬುಧವಾರ ಸಂಜೆ ಅಥವಾ ಗುರುವಾರ ಬೆಳಗ್ಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಇದಕ್ಕೂ ಮುನ್ನ ಪ್ರಧಾನಿ ಮೋದಿ ಟೀಮ್ ಇಂಡಿಯಾ ಗೆಲುವು ಸಾಧಿಸುತ್ತಿದ್ದಂತೆ ತಂಡದೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದ್ದರು. ರೋಹಿತ್ ಶರ್ಮಾ ಅವರ ಅತ್ಯುತ್ತಮ ನಾಯಕತ್ವಕ್ಕಾಗಿ ಅವರು ಅಭಿನಂದಿಸಿ ಅವರ ಟಿ20 ವೃತ್ತಿಜೀವನವನ್ನು ಶ್ಲಾಘಿಸಿದ್ದರು.
ಫೈನಲ್‌ನಲ್ಲಿ 76 ರನ್‌ಗಳ ಇನ್ನಿಂಗ್ಸ್ ಆಡಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ಕೋಚ್ ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್‌ಗೆ ನೀಡಿದ ಅಮೂಲ್ಯ ಕೊಡುಗೆಗಾಗಿ ಮೋದಿ ಹೊಗಳಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications