For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್, ಶ್ರೀಲಂಕಾ vs ಬಾಂಗ್ಲಾದೇಶ, ಟಾಸ್ ರಿಪೋರ್ಟ್, Live ಸ್ಕೋರ್

T20 world cup: 15th Match, Sri Lanka vs Bangladesh, Live score and Playing XI

ಟಿ20 ವಿಶ್ವಕಪ್‌ನ ಸೂಪರ್ 12 ಹಂತದ ಪಂದ್ಯಗಳು ಆರಂಭವಾಗಿದೆ. ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಶ್ರೀಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ನಾಯಕ ದಸುನ್ ಶನಕ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಶ್ರೀಲಂಕಾ ಹಾಗೂ ಬಾಂಗ್ಲಾದೇಶ ಎರಡು ತಂಡಗಳು ಕೂಡ ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಅರ್ಹತಾ ಸುತ್ತಿನಲ್ಲಿ ಆಡಿ ಪ್ರಧಾನ ಸುತ್ತಿಗೆ ಪ್ರವೇಶ ಪಡೆದುಕೊಂಡಿದೆ. ಶ್ರೀಲಂಕಾ ಅರ್ಹತಾ ಸುತ್ತಿನಲ್ಲಿ ಅಮೋಘ ಪ್ರದರ್ಶನ ನೀಡಿದ್ದು ಮೂರು ಪಂದ್ಯಗಳಲ್ಲಿ ಮೂರನ್ನು ಕೂಡ ಭರ್ಜರಿಯಾಗಿ ಗೆದ್ದುಕೊಂಡಿದೆ. ಎ ಗುಂಪಿನಲ್ಲಿದ್ದ ಶ್ರೀಲಂಕಾ ನಮೀಬಿಯಾ, ನೆದರ್ಲ್ಯಾಂಡ್ಸ್ ಹಾಗೂ ಐರ್ಲೆಂಡ್ ತಂಡದ ವಿರುದ್ಧ ಗೆದ್ದು ಗುಂಪಿನ ಮೊದಲ ತಂಡವಾಗಿ ಸೂಪರ್ 12ಗೆ ಸ್ಥಾನ ಪಡೆದುಕೊಂಡಿತು.

ಆದರೆ ಬಾಂಗ್ಲಾದೇಶ ಈ ಬಾರಿಯ ವಿಶ್ವಕಪ್‌ನ ಅರ್ಹತಾ ಸುತ್ತಿನ ಮೊದಲ ಪಂದ್ಯದಲ್ಲಿಯೇ ಸೋಲಿನೊಂದಿಗೆ ಆರಂಭ ಮಾಡಿ ಆಘಾತ ಅನುಭವಿಸಿತು. ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ 6 ರನ್‌ಗಳ ಅಂತರದಿಂದ ಬಾಂಗ್ಲಾ ಸೋಲು ಕಂಡಿತ್ತು. ಆದರೆ ನಂತರ ಒಮಾನ್ ಹಾಗೂ ಪಪುವಾ ನ್ಯೂಗಿನಿ ವಿರುದ್ಧ ಗೆದ್ದು ಪ್ರಧಾನ ಸುತ್ತಿಗೆ ಪ್ರವೇಶ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದೀಗ ಶ್ರೀಲಂಕಾ ತಂಡದ ವಿರುದ್ಧ ಅಗ್ನಿ ಪರೀಕ್ಷೆಗೆ ಇಳಿದಿದೆ.

Live ಸ್ಕೋರ್‌ಪಟ್ಟಿ ಹೀಗಿದೆ:

1
51678

ಶ್ರೀಲಂಕಾದ ಆಡುವ ಬಳಗ: ಕುಸಲ್ ಪೆರೇರಾ (ವಿಕೆಟ್ ಕೀಪರ್), ಪಾತುಮ್ ನಿಸ್ಸಂಕ, ಚರಿತ್ ಅಸಲಂಕ, ಅವಿಷ್ಕಾ ಫೆರ್ನಾಂಡೊ, ಭಾನುಕಾ ರಾಜಪಕ್ಸೆ, ದಾಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣರತ್ನೆ, ದುಷ್ಮಂತ ಚಮೀರಾ, ಬಿನೂರ ಫೆರ್ನಾಂಡೊ, ಲಹಿರು ಕುಮಾರ

ಪಾಕ್ ಗೆದ್ದ ತಕ್ಷಣ ವಿರಾಟ್ ಮಾಡಿದ ಕೆಲಸಕ್ಕೆ ಭೇಷ್ ಅನ್ಲೇಬೇಕು | Oneindia Kannada

ಬಾಂಗ್ಲಾದೇಶ ಆಡುವ ಬಳಗ: ಮೊಹಮ್ಮದ್ ನೈಮ್, ಲಿಟನ್ ದಾಸ್, ಶಾಕಿಬ್ ಅಲ್ ಹಸನ್, ಮುಶ್ಫಿಕರ್ ರಹೀಮ್, ಮಹ್ಮದುಲ್ಲಾ (ನಾಯಕ), ಅಫೀಫ್ ಹೊಸೈನ್, ನೂರುಲ್ ಹಸನ್ (ವಿಕೆಟ್ ಕೀಪರ್), ಮಹದಿ ಹಸನ್, ಮೊಹಮ್ಮದ್ ಸೈಫುದ್ದೀನ್, ನಸುಮ್ ಅಹಮದ್, ಮುಸ್ತಫಿಜುರ್ ರಹಮಾನ್

Story first published: Sunday, October 24, 2021, 15:31 [IST]
Other articles published on Oct 24, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+