ಟಿ20 ವಿಶ್ವಕಪ್, ದಕ್ಷಿಣ ಆಫ್ರಿಕಾ vs ವೆಸ್ಟ್ ಇಂಡೀಸ್, ಟಾಸ್ ರಿಪೋರ್ಟ್, Live ಸ್ಕೋರ್

ಟಿ20 ವಿಶ್ವಕಪ್‌ನಲ್ಲಿ ಇಂದು ಎರಡು ಬಲಿಷ್ಠ ತಂಡಗಳು ಸೆಣೆಸಾಟಕ್ಕೆ ಇಳಿದಿದೆ. ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಮಡಗಳು ಈ ಬಾರಿಯ ವಿಶ್ವಕಪ್‌ನ 18ನೇ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇನ್ನು ಇಂದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದೆ. ಕ್ವಿಂಟನ್ ಡಿಕಾಕ್ ಬದಲಿಗೆ ರೀಜಾ ಹೆಂಡ್ರಿಕ್ಸ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಕ್ವಿಂಟನ್ ಡಿಕಾಕ್ ವೈಯಕ್ತಿಕ ಕಾರಣದಿಂದಾಗಿ ತಾವಾಗಿಯೇ ಈ ಪಂದ್ಯದಿಂದ ಹಿಂದಕ್ಕೆ ಸರಿದಿದ್ದಾರೆ ಎಂದು ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮಾಹಿತಿ ನೀಡಿದ್ದಾರೆ. ಇನ್ನು ವೆಸ್ಟ್ ಇಂಡೀಸ್ ಈ ಹಿಂದಿನ ಪಂದ್ಯದಲ್ಲಿ ಆಡಿದ ಬಳಗದೊಂದಿಗೆ ಕಣಕ್ಕಿಳಿದಿದೆ.
ಈ ಎರಡು ತಂಡಗಳಿಗೂ ಈ ಬಾರಿಯ ವಿಶ್ವಕಪ್‌ನ ಎರಡನೇ ಪಂದ್ಯ ಇದಾಗಿದೆ. ಆದರೆ ಎರಡು ತಂಡಗಳು ಕೂಡ ತಮ್ಮ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಸೋಲು ಕಂಡಿದೆ. ಇಂದಿನ ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಮುನ್ನುಗ್ಗಲು ಎರಡು ತಂಡಗಳು ಕೂಡ ಹಾತೊರೆಯುತ್ತಿದೆ. ಹಾಲಿ ಚಾಂಪಿಯನ್ ವೆಸ್ಟ್ ಇಂಡೀಸ್ ತಂಡ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲು ಕಂಡಿದ್ದರೆ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧ ಐದು ವಿಕೆಟ್‌ಗಳ ಅಂತರದಿಂದ ಸೋತಿತ್ತು.
Live ಸ್ಕೋರ್‌ಪಟ್ಟಿ ಹೀಗಿದೆ:
ವೆಸ್ಟ್ ಇಂಡೀಸ್ ಆಡುವ ಬಳಗ: ಲೆಂಡ್ಲ್ ಸಿಮನ್ಸ್, ಎವಿನ್ ಲೂಯಿಸ್, ಕ್ರಿಸ್ ಗೇಲ್, ಶಿಮ್ರಾನ್ ಹೆಟ್ಮೆಯರ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಕೀರಾನ್ ಪೊಲಾರ್ಡ್ (ನಾಯಕ), ಆಂಡ್ರೆ ರಸೆಲ್, ಡ್ವೇನ್ ಬ್ರಾವೋ, ಅಕೀಲ್ ಹೊಸೈನ್, ಹೇಡನ್ ವಾಲ್ಷ್, ರವಿ ರಾಂಪಾಲ್
ಬೆಂಚ್: ಒಬೆಡ್ ಮೆಕಾಯ್, ರೋಸ್ಟನ್ ಚೇಸ್, ಆಂಡ್ರೆ ಫ್ಲೆಚರ್, ಓಶೇನ್ ಥಾಮಸ್
ದಕ್ಷಿಣ ಆಫ್ರಿಕಾ ಆಡುವ ಬಳಗ: ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡರ್ ಡಸೆನ್, ಏಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್ (ವಿಕೆಟ್ ಕೀಪರ್), ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ, ತಬ್ರೈಜ್ ಶಮ್ಸಿ
ಬೆಂಚ್: ಕ್ವಿಂಟನ್ ಡಿ ಕಾಕ್, ಲುಂಗಿ ಎನ್‌ಗಿಡಿ, ಜಾರ್ನ್ ಫಾರ್ಟುಯಿನ್, ವಿಯಾನ್ ಮುಲ್ಡರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications