ಟಿ20 ವಿಶ್ವಕಪ್: ನ್ಯೂಜಿಲೆಂಡ್ vs ಪಾಕಿಸ್ತಾನ, ಟಾಸ್ ರಿಪೋರ್ಟ್, Live ಸ್ಕೋರ್

ಟಿ20 ವಿಶ್ವಕಪ್‌ನಲ್ಲಿ ಮತ್ತೊಂದು ಪ್ರಮುಖ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದ್ದು ನ್ಯೂಜಿಲೆಂಡ್ ಹಾಗೂ ಪಾಕಿಸ್ತಾನ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಶಾರ್ಜಾದಲ್ಲಿರುವ ಶಾರ್ಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಈ ಪಂದ್ಯಕ್ಕೆ ಆತಿಥ್ಯ ವಹಿಸಿದೆ.
ಇನ್ನು ಈಗಾಗಲೇ ಭಾರತ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಉತ್ಸಾಹದಲ್ಲಿರುವ ಪಾಕಿಸ್ತಾನ ತಂಡ ಇಂದಿನ ಪಂದ್ಯದಲ್ಲಿಯೂ ಗೆದ್ದು ಬೀಗುವ ಉಮೇದಿನಲ್ಲಿದೆ. ಅಲ್ಲದೆ ತವರಿನಲ್ಲಿ ಸರಣಿಯನ್ನಾಡದೆ ವಾಪಾಸ್ ಮರಳಿರುವ ಸೇಡನ್ನು ಈ ಪಂದ್ಯದಲ್ಲಿ ಗೆದ್ದು ತೀರಿಸಿಕೊಳ್ಳಲು ಹವಣಿಸುತ್ತಿದೆ. ಹೀಗಾಗಿ ಈ ಪಂದ್ಯ ಸಾಕಷ್ಟು ಜಿದ್ದಾಜಿದ್ದಿನಿಂದ ಕೂಡಿರುವುದರಲ್ಲಿ ಅನುಮಾನವಿಲ್ಲ.
ಇನ್ನು ಪಾಕಿಸ್ತಾನ ತಂಡ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಕಣಕ್ಕಿಳಿದ ಆಟಗಾರರೊಂದಿಗೆ ಆಡುತ್ತಿದೆ. ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ. ಇನ್ನು ನ್ಯೂಜಿಲೆಂಡ್ ತಂಡಕ್ಕೆ ಇದು ಈ ಬಾರಿಯ ವಿಶ್ವಕಪ್‌ನಲ್ಲಿ ಇದು ಮೊದಲ ಪಂದ್ಯವಾಗಿದೆ.
Live ಸ್ಕೋರ್‌ಪಟ್ಟಿ ಹೀಗಿದೆ:
ಇನ್ನು ಈ ಪಂದ್ಯದ ಆರಂಭಕ್ಕೆ ಮುನ್ನ ನ್ಯೂಜಿಲೆಂಡ್ ತಂಡಕ್ಕೆ ಆಘಾತವೊಂದು ಎದುರಾಗಿದೆ. ತಂಡದ ಪ್ರಮುಖ ಆಟಗಾರ ಲ್ಯೂಕಿ ಫರ್ಗ್ಯೂಸನ್ ಗಾಯದ ಕಾರಣದಿಂದಾಗಿ ಸಂಪೂರ್ಣ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ. ಅವರ ಸ್ಥಾನಕ್ಕೆ ಮೀಸಲು ಆಟಗಾರನಾಗಿದ್ದ ಆಡಂ ಮಿಲ್ನೆ ಅವರನ್ನು 15 ಆಟಗಾರರ ಬಳಗಕ್ಕೆ ಸೇರ್ಪಡೆಗೊಳಿಸಿದೆ ಕಿವೀಸ್ ಪಡೆ.
ಪಾಕಿಸ್ತಾನ ಆಡುವ ಬಳಗ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಅಜಮ್ (ನಾಯಕ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಮ್, ಶಾದಾಬ್ ಖಾನ್, ಹಸನ್ ಅಲಿ, ಹಾರಿಸ್ ರೌಫ್, ಶಾಹೀನ್ ಅಫ್ರಿದಿ
ಬೆಂಚ್: ಹೈದರ್ ಅಲಿ, ಮೊಹಮ್ಮದ್ ವಾಸಿಂ ಜೂನಿಯರ್, ಮೊಹಮ್ಮದ್ ನವಾಜ್, ಸರ್ಫರಾಜ್ ಅಹ್ಮದ್
ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಟ್ರೆಂಟ್ ಬೌಲ್ಟ್
ಬೆಂಚ್: ಟಾಡ್ ಆಸ್ಟಲ್, ಕೈಲ್ ಜೇಮಿಸನ್, ಮಾರ್ಕ್ ಚಾಪ್ಮನ್, ಆಡಮ್ ಮಿಲ್ನೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications