ಟಿ20 ವಿಶ್ವಕಪ್: ಪ್ರಥಮ ಸೆಮಿಫೈನಲ್, ಇಂಗ್ಲೆಂಡ್ vs ನ್ಯೂಜಿಲೆಂಡ್, Live ಸ್ಕೋರ್

ಟಿ20 ವಿಶ್ವಕಪ್‌ನ ಮೊದಲ ಸೆಮಿ ಫೈನಲ್ ಪಂದ್ಯ ಇಂದು ನಡೆಯುತ್ತಿದೆ. ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಜಿಲೆಂಡ್ ತಂಡ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಇಯಾನ್ ಮಾರ್ಗನ್ ನೇತೃತ್ವದ ಇಂಗ್ಲೆಂಡ್ ತಂಡ ಮೊದಲಿಗೆ ಗುರಿ ನಿಗದು ಪಡಿಸುವ ಸವಾಲು ಸ್ವೀಕರಿಸಿದೆ.
ಸೂಪರ್ 12 ಹಂತದಲ್ಲಿ ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ಎರಡು ತಂಡಗಳು ಕೂಡ ಅದ್ಭುತ ಆಟವನ್ನು ಪ್ರದರ್ಶಿಸಿ ಸೆಮಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ಎರಡು ತಂಡಗಳು ಕುಡ ಆಡಿದ ಐದು ಪಂದ್ಯಗಳ ಪೈಕಿ ಒಂದರಲ್ಲಿ ಸೋಲು ಅನುಭವಿಸಿದ್ದು ಉಳಿದ ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಇದೀಗ ಫೈನಲ್ ಮೇಲೆ ದೃಷ್ಟಿನೆಟ್ಟಿದೆ. ನ್ಯೂಜಿಲೆಂಡ್ ಸತತ ಮೂರನೇ ಐಸಿಸಿ ಟೂರ್ನಿಯ ಫೈನಲ್ ಹಂತಕ್ಕೇರುವ ಧಾವಂತದಲ್ಲಿದ್ದರೆ ಇಂಗ್ಲೆಂಡ್ ತಂಡ ಏಕದಿನ ವಿಶ್ವಕಪ್‌ನಲ್ಲಿ ಚಾಂಪಿಯನ್ ಆದ ನಂತರ ಟಿ20ಯಲ್ಲಿಯೂ ಅದೇ ಸಾಧನೆ ಮಾಡುವ ಉತ್ಸಾಹದಲ್ಲಿದೆ.
Live ಸ್ಕೋರ್‌ಕಾರ್ಡ್
ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಮೊಯಿನ್ ಅಲಿ, ಇಯಾನ್ ಮಾರ್ಗನ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್
ಬೆಂಚ್: ಡೇವಿಡ್ ವಿಲ್ಲಿ, ಜೇಮ್ಸ್ ವಿನ್ಸ್, ರೀಸ್ ಟೋಪ್ಲಿ, ಟಾಮ್ ಕರನ್
ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್
ಬೆಂಚ್: ಟಾಡ್ ಆಸ್ಟಲ್, ಕೈಲ್ ಜೇಮಿಸನ್, ಟಿಮ್ ಸೀಫರ್ಟ್, ಮಾರ್ಕ್ ಚಾಪ್ಮನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications