For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಫೈನಲ್‌ಗೇರಲು ನ್ಯೂಜಿಲೆಂಡ್‌ಗೆ 167 ರನ್‌ಗಳ ಗುರಿ ನೀಡಿದ ಇಂಗ್ಲೆಂಡ್

T20 world cup: 1st Semi Final Match, New Zealand need 167 runs to win against England

ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯ ನಡೆಯುತ್ತಿದ್ದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುತ್ತಿವೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ನಡೆಸಿದ ಇಂಗ್ಲೆಂಡ್ ತಂಡ ಕಿವೀಸ್ ಪಡೆಗೆ 167 ರನ್‌ಗಳ ಸವಾಲಿನ ಗುರಿ ನೀಡಿದೆ. ಈ ಗುರಿಯನ್ನು ನ್ಯೂಜಿಲೆಂಡ್ ಬೆನ್ನಟ್ಟಲಿದೆಯಾ ಅಥವಾ ಇಂಗ್ಲೆಂಡ್ ಬೌಲರ್‌ಗಳು ಈ ಮೊತ್ತವನ್ನು ರಕ್ಷಿಸಿಕೊಳ್ಳುತ್ತಾರಾ ಎಂಬ ಪ್ರಶ್ನೆಗೆ ಕೆಲವೇ ಸಮಯಗಳಲ್ಲಿ ಉತ್ತರ ಸ್ಪಷ್ಟವಾಗಲಿದೆ.

ಮೊದಲಿಗೆ ಬ್ಯಾಟಿಂಗ್ ನಡೆಸಿದ್ ಇಂಗ್ಲೆಂಡ್ ತಂಡಕ್ಕೆ ಹೇಳಿಕೊಳ್ಳುವಂತಾ ಆರಂಭ ದೊರೆಯಲಿಲ್ಲ. ಜಾನಿ ಬೈರ್‌ಸ್ಟೋವ್ 17 ಎಸೆತಗಳನ್ನು ಎದುರಿಸಿ 13 ರನ್‌ಗಳನ್ನಷ್ಟೇ ಗಳಿಸಿ ವಿಕೆಟ್ ಕಳೆದುಕೊಂಡರು. ಇನ್ನು ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನಿಡಿ ಮಿಂಚಿದ್ದ ಜೋಸ್ ಬಟ್ಲರ್ ಕೂಡ 29 ರನ್‌ಗಳಿಗೆ ತಮ್ಮ ಹೋರಾಟವನ್ನು ಅಂತ್ಯಗೊಳಿಸಿದರು. ಈ ಮೂಲಕ ಇಂಗ್ಲೆಂಡ್ 8.1 ಓವರ್‌ಗಳಲ್ಲಿ 53 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡಿತ್ತು. ಆದರೆ ನಂತರ ಜೊತೆಯಾದ ಡೇವಿಡ್ ಮಲನ್ ಹಾಗೂ ಮೊಯೀನ್ ಅಲಿ ಇಂಗ್ಲೆಂಡ್ ತಂಡಕ್ಕೆ ಅದ್ಭುತ ಜೊತೆಯಾಟವೊಂದನ್ನು ನೀಡಿದರು.

ಡೇವಿಡ್ ಮಲನ್ 30 ಎಸೆತಗಳಲ್ಲಿ 41 ರನ್‌ಗಳಿಸಿ ಟಿಮ್ ಸೌಥಿಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಈ ಜೋಡಿ ಬೇರ್ಪಟ್ಟಿತು. ನಂತರ ಬಂದ ಲಿವಿಂಗ್ಸ್ಟನ್ 10 ಎಸೆತಗಳಲ್ಲಿ 17 ರನ್ ಬಾರಿಸಿ ವಿಕೆಟ್ ಕಳೆದುಕೊಂಡರು. ಮತ್ತೊಂದೆಡೆ ಮೊಯೀನ್ ಅಲಿ ಜವಾಬ್ಧಾರಿಯುತ ಪ್ರದರ್ಶನ ಮುಂದಿವರಿಸಿದ್ದರು. ಅಂತಿಮವಾಗಿ ಇಂಗ್ಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 166 ರನ್‌ಗಳಿಸಲು ಯಶಸ್ವಿಯಾಯಿತು. ಮೊಯೀನ್ ಅಲಿ 37 ಎಸೆತಗಳಲ್ಲಿ 51 ರನ್ ಬಾರಿಸಿ ಅಜೇಯವಾಗಿ ಉಳಿದರು.

ಇಂಗ್ಲೆಂಡ್ ಆಡುವ ಬಳಗ: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಮೊಯಿನ್ ಅಲಿ, ಇಯಾನ್ ಮಾರ್ಗನ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡಾನ್, ಆದಿಲ್ ರಶೀದ್, ಮಾರ್ಕ್ ವುಡ್

ಬೆಂಚ್: ಡೇವಿಡ್ ವಿಲ್ಲಿ, ಜೇಮ್ಸ್ ವಿನ್ಸ್, ರೀಸ್ ಟೋಪ್ಲಿ, ಟಾಮ್ ಕರನ್

ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್
ಬೆಂಚ್: ಟಾಡ್ ಆಸ್ಟಲ್, ಕೈಲ್ ಜೇಮಿಸನ್, ಟಿಮ್ ಸೀಫರ್ಟ್, ಮಾರ್ಕ್ ಚಾಪ್ಮನ್

ಈತನ ಎಂಟ್ರಿಯಿಂದ ಟೀಂ ಇಂಡಿಯಾದಲ್ಲಿ ಹಾರ್ದಿಕ್ ಭವಿಷ್ಯ ಅತಂತ್ರ | Oneindia Kannada

Story first published: Wednesday, November 10, 2021, 21:33 [IST]
Other articles published on Nov 10, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+