ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ಗೆ ಪ್ರಕಟವಾಗಿರುವ ಕೊಹ್ಲಿ ಪಡೆ ವಿರುದ್ಧ ಇದೆಂಥಾ ಆರೋಪ!

T20 world cup 2021: 6 Mumbai indians players Got place in 15-man squad

ಕಳೆದ ಏಪ್ರಿಲ್ 9ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯಾವುದೇ ಅಡಚಣೆಗಳಿಲ್ಲದೆ ಕೊರೋನಾ ಭೀತಿಯ ನಡುವೆಯೇ 29 ಪಂದ್ಯಗಳವರೆಗೆ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರು ಮತ್ತು ತಂಡದ ಸಿಬ್ಬಂದಿ ವರ್ಗದವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತುಕೊಂಡ ಬಿಸಿಸಿಐ ತಕ್ಷಣವೇ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದೇವೆ ಎಂಬ ಘೋಷಣೆಯನ್ನು ಮಾಡಿತ್ತು.

ಮ್ಯಾಂಚೆಸ್ಟರ್ ಪಂದ್ಯ ರದ್ದುಗೊಳಿಸುವ ಮುನ್ನ ಕೊಹ್ಲಿ ಮಾಡಿದ್ದ ಈ ಮನವಿಯನ್ನು ತಿರಸ್ಕರಿಸಿತ್ತು ಇಂಗ್ಲೆಂಡ್!ಮ್ಯಾಂಚೆಸ್ಟರ್ ಪಂದ್ಯ ರದ್ದುಗೊಳಿಸುವ ಮುನ್ನ ಕೊಹ್ಲಿ ಮಾಡಿದ್ದ ಈ ಮನವಿಯನ್ನು ತಿರಸ್ಕರಿಸಿತ್ತು ಇಂಗ್ಲೆಂಡ್!

ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ಸೆಪ್ಟೆಂಬರ್ 19ರಿಂದ ಯುಎಇಯಲ್ಲಿ ಮುಂದುವರೆಸಲಾಗುತ್ತಿದ್ದು ಈಗಾಗಲೇ ಎಲ್ಲಾ ತಂಡಗಳ ಹಲವಾರು ಆಟಗಾರರು ದುಬೈ ತಲುಪಿದ್ದು ತರಬೇತಿಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇನ್ನು ಇದಾದ ಬಳಿಕ ಯುಎಇಯಲ್ಲಿಯೇ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಅಕ್ಟೋಬರ್ 17ರಿಂದ ನವೆಂಬರ್‌ 14ರವರೆಗೆ ನಡೆಯಲಿದೆ.

ಬರೋಬ್ಬರಿ 5 ವರ್ಷಗಳ ನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮರಳಿ ಬಂದಿದ್ದು ಕ್ರಿಕೆಟ್ ಅಭಿಮಾನಿಗಳಲ್ಲಿ ಸಾಕಷ್ಟು ದೊಡ್ಡ ಮಟ್ಟದ ಕುತೂಹಲ ಮತ್ತು ನಿರೀಕ್ಷೆಯನ್ನು ಹುಟ್ಟುಹಾಕಿದೆ. ಹೀಗೆ ಯುಎಇಯಲ್ಲಿ ನಡೆಯಲಿರುವ ಐಪಿಎಲ್ ಮತ್ತು ಟಿ ಟ್ವೆಂಟಿ ವಿಶ್ವಕಪ್ ಈ ಎರಡೂ ಚುಟುಕು ಕದನಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಹೌದು ಇತ್ತೀಚಿಗಷ್ಟೆ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಬಿಸಿಸಿಐ 15 ಆಟಗಾರರನ್ನೊಳಗೊಂಡ ಭಾರತ ತಂಡವನ್ನು ಪ್ರಕಟಣೆ ಮಾಡಿದ ನಂತರ ಈ ಎರಡೂ ಟೂರ್ನಿಗಳನ್ನು ಹೋಲಿಕೆ ಮಾಡಿಕೊಂಡು ಸಾಕಷ್ಟು ಚರ್ಚೆಗಳನ್ನು ಕ್ರಿಕೆಟ್ ಅಭಿಮಾನಿಗಳು ಮಾಡತೊಡಗಿದ್ದಾರೆ.

ಅಂದು ಭಾರತದಲ್ಲಿ ಪಂದ್ಯ ರದ್ದಾದಾಗ ಇಂಗ್ಲೆಂಡ್ ನಡೆದುಕೊಂಡ ರೀತಿ ಮರೆಯೋಕಾಗಲ್ಲ: ಗವಾಸ್ಕರ್ಅಂದು ಭಾರತದಲ್ಲಿ ಪಂದ್ಯ ರದ್ದಾದಾಗ ಇಂಗ್ಲೆಂಡ್ ನಡೆದುಕೊಂಡ ರೀತಿ ಮರೆಯೋಕಾಗಲ್ಲ: ಗವಾಸ್ಕರ್

ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಲಾಗಿರುವ ಭಾರತ ತಂಡ, ಈ ಎರಡೂ ವಿಷಯಗಳನ್ನೊಳಗೊಂಡಂತೆ ಕ್ರಿಕೆಟ್ ಜಗತ್ತಿನಲ್ಲಿ ನಡೆಯುತ್ತಿರುವ ಕೆಲ ಗುಸುಗುಸು ಚರ್ಚೆಗಳ ವಿವರ ಮುಂದೆ ಇದೆ ಓದಿ..

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ತಂಡದ ತುಂಬಾ ಮುಂಬೈ ಇಂಡಿಯನ್ಸ್ ಆಟಗಾರರು!

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ತಂಡದ ತುಂಬಾ ಮುಂಬೈ ಇಂಡಿಯನ್ಸ್ ಆಟಗಾರರು!

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಇತ್ತೀಚೆಗಷ್ಟೇ ಬಿಸಿಸಿಐ 15 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟ ಮಾಡಿದೆ. ಹೀಗೆ ಪ್ರಕಟಿಸಲಾದ 15 ಆಟಗಾರರ ಪೈಕಿ 6 ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸುವ ಆಟಗಾರರಾಗಿದ್ದಾರೆ. ಈ ಕುರಿತು ಕೆಲ ಕ್ರಿಕೆಟ್ ಪ್ರೇಮಿಗಳು ಭಾರತ ತಂಡ ಪ್ರಕಟಿಸಿರುವ ಟಿ ಟ್ವೆಂಟಿ ವಿಶ್ವಕಪ್ ತಂಡದಲ್ಲಿ ಹೆಚ್ಚಿನ ಆಟಗಾರರು ಮುಂಬೈ ಇಂಡಿಯನ್ಸ್ ತಂಡದವರೇ ಆಗಿದ್ದಾರೆ ಎಂಬ ಆರೋಪವನ್ನು ಮಾಡುತ್ತಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಮತ್ತು ಅದರಲ್ಲಿರುವ ಮುಂಬೈ ಇಂಡಿಯನ್ಸ್ ಆಟಗಾರರ ಪಟ್ಟಿ

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಮತ್ತು ಅದರಲ್ಲಿರುವ ಮುಂಬೈ ಇಂಡಿಯನ್ಸ್ ಆಟಗಾರರ ಪಟ್ಟಿ

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪ ನಾಯಕ), ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ , ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ


ಈ 15 ಆಟಗಾರರ ತಂಡದಲ್ಲಿ ಸ್ಥಾನ ಪಡೆದುಕೊಂಡಿರುವ ಮುಂಬೈ ಇಂಡಿಯನ್ಸ್ ತಂಡದ 6 ಆಟಗಾರರ ಪಟ್ಟಿ ಇಲ್ಲಿದೆ: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶಾನ್, ಹಾರ್ದಿಕ್ ಪಾಂಡ್ಯ, ರಾಹುಲ್ ಚಹರ್ ಮತ್ತು ಜಸ್ಪ್ರೀತ್ ಬುಮ್ರಾ

ಮುಂಬೈ ಯುವ ಆಟಗಾರರಿಗೆ ಮಣೆ ಹಾಕಿದ್ರಾ ಆಯ್ಕೆಗಾರರು?

ಮುಂಬೈ ಯುವ ಆಟಗಾರರಿಗೆ ಮಣೆ ಹಾಕಿದ್ರಾ ಆಯ್ಕೆಗಾರರು?

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ ಭಾರತ ತಂಡದಲ್ಲಿ ಹೆಚ್ಚಾಗಿ ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರರೇ ಸ್ಥಾನ ಪಡೆದುಕೊಂಡಿರುವುದು ಇದೀಗ ತುಸು ಹೆಚ್ಚಿನ ಚರ್ಚೆಗೆ ಕಾರಣವಾಗಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಯುವ ಆಟಗಾರ ವರುಣ್ ಚಕ್ರವರ್ತಿ ಬಿಟ್ಟರೆ ಉಳಿದ ಯಾವುದೇ ತಂಡಗಳ ಯುವ ಆಟಗಾರರಿಗೂ ಕೂಡ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಆಯ್ಕೆಯಾಗಿರುವ ಭಾರತ ತಂಡದಲ್ಲಿ ಸ್ಥಾನ ನೀಡಿಲ್ಲ. ಆದರೆ ಮುಂಬೈ ಇಂಡಿಯನ್ಸ್ ತಂಡದ ಯುವ ಆಟಗಾರರಾದ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಮತ್ತು ರಾಹುಲ್ ಚಾಹರ್‌ಗೆ ಮಾತ್ರ ಅವಕಾಶ ನೀಡಲಾಗಿದೆ ಎಂಬ ಆರೋಪಗಳು ಕೂಡ ಹರಿದಾಡುತ್ತಿವೆ.

Story first published: Saturday, September 11, 2021, 18:17 [IST]
Other articles published on Sep 11, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X