ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಪಾಕಿಸ್ತಾನ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದುಕೊಂಡ ಶೋಯೆಬ್ ಮಲಿಕ್

T20 world cup 2021: all rounder Shoaib Malik Replaces Sohaib Maqsood in Pakistan Squad

ಪಾಕಿಸ್ತಾನ ಕ್ರಿಕೆಟ್ ತಂಡದ ಅನುಭವಿ ಆಟಗಾರ ಆಲ್‌ರೌಂಡರ್ ಶೊಯೆಬ್ ಮಲಿಕ್ ಈ ಮೊದಲು ಘೋಷಿಸಿದ್ದ ಪಾಕಿಸ್ತಾನ ಕ್ರಿಕೆಟ್ ತಂಡದ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆದುಕೊಂಡಿರಲಿಲ್ಲ. ಆದರೆ ಈಗ ಸ್ಕ್ವಾಡ್‌ನಲ್ಲಿ ಒಂದು ಬದಲಾವಣೆಯನ್ನು ಮಾಡಿರುವ ಪಾಕ್ ಕ್ರಿಕೆಟ್ ಮಂಡಳಿ ಅನುಭವಿ ಆಟಗಾರನಿಗೆ ಮಣೆ ಹಾಕಿದೆ. ಶೋಯೆಬ್ ಮಕ್ಸೂದ್ ಬದಲಿಗೆ ಶೋಯೆಬ್ ಮಲಿಕ್‌ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಈ ಬಗ್ಗೆ ಶನಿವಾರ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧಿಕೃತವಾಗಿ ಮಾಹಿತಿ ನೀಡಿದೆ.

ಪಾಕಿಸ್ತಾನ ಕ್ರಿಕೆಟ್ ತಂಡದ ಹೊರಿಯ ಆಟಗಾರನಾಗಿರುವ ಶೋಹೈಬ್ ಮಕ್ಸೂದ್ ತಮ್ಮ ಸ್ಪೋಟಕ ಬ್ಯಾಟಿಂಗ್ ಶೈಲಿಯಿಂದ ಗಮನಸೆಳೆದಿರುವ ಆಟಗಾರ. ಇದೇ ಕಾರಣದಿಂದಾಗಿ ಪಾಕಿಸ್ತಾನದ ವಿಶ್ವಕಪ್‌ನ ತಂಡದಲ್ಲಿಯೂ ಅವರು ಸ್ಥಾನವನ್ನು ಗಿಟ್ಟಿಸಿಕೊಂಡಿದ್ದರು. ಆದರೆ ಶೋಹೈಬ್ ಖಾನ್ ಸದ್ಉ ಬೆನ್ನುನೋವಿಗೆ ಒಳಗಾಗಿದ್ದಾರೆ. ಅವರ ಎಂಆರ್‌ಐ ಸ್ಕ್ಯಾನಿಂಗ್ ನಡೆಸಲಾಗಿದ್ದು ವಿಶ್ವಕಪ್‌ನ ಬಳಗದಲ್ಲಿ ಭಾಗಿಯಾಗುವುದು ಅಸಮರ್ಥರಾಗಿದ್ದಾರೆ ಎಂದು ತಿಳಿದುಬಂದಿದೆ.

ನಾವು ನಮ್ಮ ಅತ್ಯುತ್ತಮ ಪ್ರದರ್ಶನ ನೀಡಿಲ್ಲ: ಆರ್‌ಸಿಬಿ ಪ್ರದರ್ಶನದ ಬಗ್ಗೆ ಎಬಿಡಿನಾವು ನಮ್ಮ ಅತ್ಯುತ್ತಮ ಪ್ರದರ್ಶನ ನೀಡಿಲ್ಲ: ಆರ್‌ಸಿಬಿ ಪ್ರದರ್ಶನದ ಬಗ್ಗೆ ಎಬಿಡಿ

ಈ ಬೆಳವಣಿಗೆಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಮೊಹಮ್ಮದ್ ವಾಸಿಂ ಪ್ರತಿಕ್ರಿಯಿಸಿದ್ದು ಮಕ್ಸೂದ್ ಅವರನ್ನು ತಂಡದಿಂದ ಕೈಬಿಡಬೇಕಾದ ಸಂದರ್ಭ ಬಂದಿರುವುದು ದುರದೃಷ್ಟಕರ ಎಂದಿದ್ದಾರೆ. ಪಾಕಿಸ್ತಾನದ ದೇಶೀಯ ಕ್ರಿಕೆಟ್ ಲೀಗ್ ನ್ಯಾಶನಲ್ ಟಿ20 ಕಪ್‌ನಲ್ಲಿ ಆಡುತ್ತಿದ್ದ ವೇಳೆ ಕಳೆದ ಅಕ್ಟೋಬರ್ 6ರಂದು ನಡೆದಿದ್ದ ಪಂದ್ಯದಲ್ಲಿ ಮಕ್ಸೂದ್ ಗಾಯಗೊಂಡಿದ್ದರು.

"ಶೋಹೈಬ್ ಮಕ್ಸೂದ್ ಮುಂಬರುವ ಟಿ20 ವಿಶ್ವಕಪ್‌ನ ಪಾಕಿಸ್ತಾನ ತಂಡದಿಂದ ಅನುವಾರ್ಯವಾಗಿ ಹೊರಗುಳಿಯಬೇಕಿದೆ. ಈ ತಂಡದಲ್ಲಿ ಅವರು ಸ್ಥಾನ ಗಿಟ್ಟಿಸಲು ಸಾಕಷ್ಟು ಪರಿಶ್ರಮಪಟ್ಟಿದ್ದರು ಹಾಗೂ ಅವರ ಫಾರ್ಮ್ ಕೂಡ ಅದ್ಭುತವಾಗಿತ್ತು. ತಂಡದಿಮದ ಹೊರಬಿದ್ದಿರುವ ಬಗ್ಗೆ ನಾವು ಬೇಸರಗೊಮಡಿದ್ದೇವೆ. ಆದರೆ ಗಾಯಗಳು ಕ್ರೀಡೆಯ ಅವಿಭಾಜ್ಯ ಅಂಗವಾಗಿದೆ. ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿದ್ದು ಮುಂಬರುವ ಸರಣಿಗಳಲ್ಲಿ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸುವ ವಿಶ್ವಾಸದಲ್ಲಿದ್ದೇವೆ" ಎಂದಿದ್ದಾರೆ ಮುಖ್ಯ ಆಯ್ಕೆಗಾರ ಮೊಹಮ್ಮದ್ ವಾಸಿಂ.

ಎಂಐ ಪ್ಲೇ ಆಫ್ಸ್‌ ಅವಕಾಶ ಮುಗಿದ ಬಳಿಕ ಭಾವನಾತ್ಮಕ ಪೋಸ್ಟ್ ಹಾಕಿದ ರೋಹಿತ್ಎಂಐ ಪ್ಲೇ ಆಫ್ಸ್‌ ಅವಕಾಶ ಮುಗಿದ ಬಳಿಕ ಭಾವನಾತ್ಮಕ ಪೋಸ್ಟ್ ಹಾಕಿದ ರೋಹಿತ್

ಇನ್ನು ಇದೇ ಸಂದರ್ಭದಲ್ಲಿ ಶೋಯೆಬ್ ಮಲಿಕ್‌ಗೆ ಸ್ಥಾನ ನೀಡಿರುವ ವಿಚಾರವಾಗಿಯೂ ಮುಖ್ಯ ಆಯ್ಕೆಗಾರ ಮೊಹಮ್ಮದ್ ವಾಸಿಂ ಘೋಷಣೆ ಮಾಡಿದರು. ಮಕ್ಸೂದ್ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂಬ ವಿಚಾರವಾಗಿ ನಾವು ಚರ್ಚೆಯನ್ನು ನಡೆಸಿದ್ದೇವೆ. ಈ ಸಂದರ್ಭದಲ್ಲಿ ನಾವು ಶೋಯೆಬ್ ಮಲಿಕ್ ಅವರನ್ನು ಸೇರ್ಪಡೆಗೊಳಿಸುವ ನಿರ್ಧಾರವನ್ನು ಮಾಡಿದ್ದೇವೆ. ಶೋಯೆಬ್ ಮಲಿಕ್ ಅವರ ಅನುಭವ ಪಾಕಿಸ್ತಾನದ ಇಡೀ ತಂಡಕ್ಕೆ ಉಪಯುಕ್ತವಾಗಲಿದೆ ಎಂಬ ವಿಶ್ವಾಸ ನಮಗಿದೆ" ಎಂದು ಮೊಹಮ್ಮದ್ ವಾಸಿಂ ತಮ್ಮ ಪತ್ರಿಕಾ ಪ್ರಕಟನೆಯೊಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಟಿ20 ವಿಶ್ವಕಪ್‌ನ ಉದ್ಘಾಟನಾ ಆವೃತ್ತಿಯಲ್ಲಿ ಪಾಕಿಸ್ತಾನ ತಂಡದ ನಾಯಕನಾಗಿದ್ದರು ಶೋಯೆಬ್ ಮಲಿಕ್. 2007ರಲ್ಲಿ ನಡೆದಿದ್ದ ಆ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಫೈನಲ್‌ಗೆ ಪ್ರವೇಶಿಸಿ ಭಾರತದ ವಿರುದ್ಧ ಸೋಲು ಕಮಡು ರನ್ನರ್‌ಅಪ್ ಆಗಿತ್ತು. ಬಳಿಕ 2009ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದಾಗ ಮಲಿಕ್ ತಂಡದ ಭಾಗವಾಗಿದ್ದರು. 2010ರ ಟಿ20 ವಿಶ್ವಕಪ್‌ನ ತಂಡದಿಂದ ಹೊರಗುಳಿದಿದ್ದ ಮಲಿಕ್ ಅದಾದ ಬಳಿಕ ನಡೆದ 2012, 2014 ಹಾಗೂ 2016ರ ವಿಶ್ವಕಪ್‌ನಲ್ಲಿ ಪಾಕ್ ತಂಡದ ಪರವಾಗಿ ಆಡಿದ್ದರು. ಈಗ ಮತ್ತೊಮ್ಮೆ ಕೊನೆಯ ಕ್ಷಣದಲ್ಲಿ ಶೋಯೆಬ್ ಮಲಿಕ್ ಪಾಕಿಸ್ತಾನ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಎಸ್‌ಆರ್‌ಎಚ್ ವೇಗಿ ಉಮ್ರಾನ್ ಟಿ20 ವಿಶ್ವಕಪ್‌ಗೆ ನೆಟ್ ಬೌಲರ್ ಆಗಿ ಆಯ್ಕೆ?!ಎಸ್‌ಆರ್‌ಎಚ್ ವೇಗಿ ಉಮ್ರಾನ್ ಟಿ20 ವಿಶ್ವಕಪ್‌ಗೆ ನೆಟ್ ಬೌಲರ್ ಆಗಿ ಆಯ್ಕೆ?!

ಪಾಕಿಸ್ತಾನ ಸ್ಕ್ವಾಡ್ ಹೀಗಿದೆ: ಬಾಬರ್ ಅಝಾಮ್ (ನಾಯಕ), ಶಾದಬ್ ಖಾನ್, ಆಸಿಫ್ ಅಲಿ, ಅಜಮ್ ಖಾನ್, ಹ್ಯಾರಿಸ್ ರೌಫ್, ಹಸನ್ ಅಲಿ, ಇಮದ್ ವಾಸಿಂ, ಖುಷ್ದಿಲ್ ಶಾ, ಮೊಹಮ್ಮದ್ ಹಫೀಜ್, ಮೊಹಮ್ಮದ್ ಹಸ್ನೈನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಂ, ಶಾಹೀನ್ ಶಾ ಅಫ್ರಿದಿ, ಶೋಯೆಬ್ ಮಲಿಕ್

Story first published: Sunday, October 10, 2021, 12:44 [IST]
Other articles published on Oct 10, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X