ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ 2021: ಆಸ್ಟ್ರೇಲಿಯಾ vs ಶ್ರೀಲಂಕಾ ಮುಖಾಮುಖಿಯಲ್ಲಿ ಬಲಿಷ್ಠರಾರು ಗೊತ್ತಾ?

T20 World Cup 2021: Australia vs Sri Lanka Head to Head Records, Most runs, Most wickets & Other Stats

ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್‌ 1ರ ತಂಡಗಳಾದ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಇಂದು ( ಅಕ್ಟೋಬರ್ 28 ) ಸೆಣಸಾಟ ನಡೆಸುತ್ತಿವೆ. ಇದುವರೆಗೂ ಟೂರ್ನಿಯಲ್ಲಿ ತಲಾ ಒಂದೊಂದು ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯ ಮತ್ತು ಶ್ರೀಲಂಕಾ ಆ ಪಂದ್ಯಗಳಲ್ಲಿ ಜಯಗಳಿಸಿದ್ದು ಗ್ರೂಪ್‌ 1 ಅಂಕಪಟ್ಟಿಯಲ್ಲಿ ಶ್ರೀಲಂಕಾ ದ್ವಿತೀಯ ಸ್ಥಾನ ಮತ್ತು ಆಸ್ಟ್ರೇಲಿಯಾ ತೃತೀಯ ಸ್ಥಾನಗಳನ್ನು ಪಡೆದುಕೊಂಡಿವೆ.

ಭಾರತ vs ನ್ಯೂಜಿಲೆಂಡ್‌: ಪಂದ್ಯಕ್ಕೂ ಮುನ್ನ ಕಿವೀಸ್‌ಗೆ ಉಂಟಾಗಿರುವ ಈ 2 ಸಮಸ್ಯೆಗಳಿಂದ ಭಾರತಕ್ಕೆ ಲಾಭಭಾರತ vs ನ್ಯೂಜಿಲೆಂಡ್‌: ಪಂದ್ಯಕ್ಕೂ ಮುನ್ನ ಕಿವೀಸ್‌ಗೆ ಉಂಟಾಗಿರುವ ಈ 2 ಸಮಸ್ಯೆಗಳಿಂದ ಭಾರತಕ್ಕೆ ಲಾಭ

ಹೌದು, ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಟೂರ್ನಿಯ ಸೂಪರ್ 12 ಹಂತದ ತಮ್ಮ ಮೊದಲನೇ ಪಂದ್ಯದಲ್ಲಿ ಜಯಗಳಿಸುವುದರ ಮೂಲಕ ಶುಭಾರಂಭವನ್ನು ಮಾಡಿವೆ. ಎರಡೂ ತಂಡಗಳು ತಲಾ 2 ಅಂಕಗಳನ್ನು ಪಡೆದಿದ್ದು ಉತ್ತಮ ನೆಟ್ ರನ್ ರೇಟ್ ಇರುವ ಕಾರಣ ಶ್ರೀಲಂಕಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಆಸ್ಟ್ರೇಲಿಯಾ ತೃತೀಯ ಸ್ಥಾನದಲ್ಲಿದೆ. ಹೀಗೆ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಎರಡೂ ತಂಡಗಳು ಸಹ ಗೆಲುವಿನಲ್ಲಿ ಸಮಬಲ ಸಾಧಿಸಿದ್ದು ಇಂದು ಇತ್ತಂಡಗಳ ನಡುವೆ ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಬಹುಮುಖ್ಯದ್ದಾಗಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಹಾದಿಯನ್ನು ಭದ್ರಪಡಿಸಿಕೊಳ್ಳಲಿದೆ.

ಇನ್ನು ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವೆ ಇಂದು ( ಅಕ್ಟೋಬರ್ 28 ) ನಡೆಯಲಿರುವ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 22ನೇ ಪಂದ್ಯವಾಗಿದ್ದು, ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ vs ಶ್ರೀಲಂಕಾ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯ ಫಲಿತಾಂಶ

* ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಒಟ್ಟು 16 ಅಂತರರಾಷ್ಟ್ರೀಯ ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಎರಡೂ ತಂಡಗಳು ಸಹ ತಲಾ 8 ಪಂದ್ಯಗಳಲ್ಲಿ ಜಯ ಸಾಧಿಸುವುದರ ಮೂಲಕ ಸಮಬಲ ಸಾಧಿಸಿವೆ.

* ಇನ್ನು ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇದುವರೆಗೂ ಯಾವುದೇ ಪಂದ್ಯದಲ್ಲಿಯೂ ಮುಖಾಮುಖಿಯಾಗಿಲ್ಲ. ಹೀಗಾಗಿ ಇಂದು ನಡೆಯಲಿರುವ ಪಂದ್ಯದಲ್ಲಿ ಇದೇ ಮೊದಲ ಬಾರಿಗೆ ಈ ಕ್ರೀಡಾಂಗಣದಲ್ಲಿ ಈ ತಂಡಗಳು ಮುಖಾಮುಖಿಯಾಗುತ್ತಿವೆ.

'ಒಬ್ಬನಿಂದ ತಂಡವಲ್ಲ'; ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ತುಟಿಬಿಚ್ಚಿದ ಪಂಜಾಬ್ ಕಿಂಗ್ಸ್ ಮಾಲೀಕರು!'ಒಬ್ಬನಿಂದ ತಂಡವಲ್ಲ'; ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ತುಟಿಬಿಚ್ಚಿದ ಪಂಜಾಬ್ ಕಿಂಗ್ಸ್ ಮಾಲೀಕರು!

* ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಸೆಣಸಾಟದಲ್ಲಿ ಆಸ್ಟ್ರೇಲಿಯಾ 4 ಪಂದ್ಯಗಳಲ್ಲಿ ಗೆದ್ದಿದ್ದು, ಶ್ರೀಲಂಕಾ ಕೇವಲ 1 ಪಂದ್ಯದಲ್ಲಿ ಜಯ ಸಾಧಿಸಿದೆ. ಹೀಗೆ ಎರಡೂ ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ.

* ಇನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳ ಇತಿಹಾಸದಲ್ಲಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳು ಒಟ್ಟು 3 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯಗಳ ಪೈಕಿ ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ ಶ್ರೀಲಂಕಾ ಕೇವಲ 1 ಪಂದ್ಯದಲ್ಲಿ ಗೆದ್ದಿದೆ. ಈ ಮೂಲಕ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗಳಲ್ಲಿ ಇತ್ತಂಡಗಳ ನಡುವಿನ ಮುಖಾಮುಖಿಯಲ್ಲಿ ಆಸ್ಟ್ರೇಲಿಯಾ ತಂಡ ಮುನ್ನಡೆ ಸಾಧಿಸಿದೆ.

ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಿನ ಟಿ20 ಪಂದ್ಯಗಳಲ್ಲಿ ಅತ್ಯಧಿಕ ರನ್ ಗಳಿಸಿರುವ ಆಟಗಾರರೆಂದರೆ: ಆಸ್ಟ್ರೇಲಿಯಾ ತಂಡದ ಪರ ಗ್ಲೆನ್ ಮ್ಯಾಕ್ಸ್‌ವೆಲ್ ಅಜೇಯ 145 ಮತ್ತು ಶ್ರೀಲಂಕಾ ಪರ ತಿಲಕರತ್ನೆ ದಿಲ್ಶಾನ್ ಅಜೇಯ 104 ರನ್.

ಆಸ್ಟ್ರೇಲಿಯ ಮತ್ತು ಶ್ರೀಲಂಕಾ ನಡುವಿನ ಟಿ ಟ್ವೆಂಟಿ ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸಿರುವ ಆಟಗಾರರು: ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 447 ಮತ್ತು ಶ್ರೀಲಂಕಾ ಪರ ತಿಲಕರತ್ನೆ ದಿಲ್ಶಾನ್ 252 ರನ್.

Story first published: Thursday, October 28, 2021, 14:22 [IST]
Other articles published on Oct 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X