ಟಿ20 ವಿಶ್ವಕಪ್ 2021, AUS vs SL: ಪಿಚ್‌ ರಿಪೋರ್ಟ್, ಸಂಭಾವ್ಯ ಆಡುವ ಬಳಗ, ನೇರಪ್ರಸಾರದ ಮಾಹಿತಿ

ಪ್ರಸಕ್ತ ಸಾಲಿನ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದ ಗ್ರೂಪ್‌ 1ರ ತಂಡಗಳಾದ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಇಂದು ( ಅಕ್ಟೋಬರ್ 28 ) ಸೆಣಸಾಟ ನಡೆಸುತ್ತಿವೆ. ಇದುವರೆಗೂ ಟೂರ್ನಿಯಲ್ಲಿ ತಲಾ ಒಂದೊಂದು ಪಂದ್ಯಗಳನ್ನಾಡಿರುವ ಆಸ್ಟ್ರೇಲಿಯ ಮತ್ತು ಶ್ರೀಲಂಕಾ ಆ ಪಂದ್ಯಗಳಲ್ಲಿ ಜಯಗಳಿಸಿದ್ದು ಗ್ರೂಪ್‌ 1 ಅಂಕಪಟ್ಟಿಯಲ್ಲಿ ಶ್ರೀಲಂಕಾ ದ್ವಿತೀಯ ಸ್ಥಾನ ಮತ್ತು ಆಸ್ಟ್ರೇಲಿಯಾ ತೃತೀಯ ಸ್ಥಾನಗಳನ್ನು ಪಡೆದುಕೊಂಡಿವೆ.

'ಒಬ್ಬನಿಂದ ತಂಡವಲ್ಲ'; ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ತುಟಿಬಿಚ್ಚಿದ ಪಂಜಾಬ್ ಕಿಂಗ್ಸ್ ಮಾಲೀಕರು!'ಒಬ್ಬನಿಂದ ತಂಡವಲ್ಲ'; ಕೆಎಲ್ ರಾಹುಲ್ ಉಳಿಸಿಕೊಳ್ಳುವ ಕುರಿತು ತುಟಿಬಿಚ್ಚಿದ ಪಂಜಾಬ್ ಕಿಂಗ್ಸ್ ಮಾಲೀಕರು!

ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಟೂರ್ನಿಯ ಸೂಪರ್ 12 ಹಂತದ ತಮ್ಮ ಮೊದಲನೇ ಪಂದ್ಯದಲ್ಲಿ ಜಯಗಳಿಸುವುದರ ಮೂಲಕ ಶುಭಾರಂಭವನ್ನು ಮಾಡಿವೆ. ಎರಡೂ ತಂಡಗಳು ತಲಾ 2 ಅಂಕಗಳನ್ನು ಪಡೆದಿದ್ದು ಉತ್ತಮ ನೆಟ್ ರನ್ ರೇಟ್ ಇರುವ ಕಾರಣ ಶ್ರೀಲಂಕಾ ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಆಸ್ಟ್ರೇಲಿಯಾ ತೃತೀಯ ಸ್ಥಾನದಲ್ಲಿದೆ. ಹೀಗೆ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ಎರಡೂ ತಂಡಗಳು ಸಹ ಗೆಲುವಿನಲ್ಲಿ ಸಮಬಲ ಸಾಧಿಸಿದ್ದು ಇಂದು ಇತ್ತಂಡಗಳ ನಡುವೆ ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೂ ಬಹುಮುಖ್ಯದ್ದಾಗಿದ್ದು ಈ ಪಂದ್ಯದಲ್ಲಿ ಗೆಲ್ಲುವ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಸೆಮಿಫೈನಲ್ ಹಾದಿಯನ್ನು ಭದ್ರಪಡಿಸಿಕೊಳ್ಳಲಿದೆ.

ಪಂದ್ಯದ ವಿವರ:

ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ತಂಡಗಳ ನಡುವೆ ಇಂದು ( ಅಕ್ಟೋಬರ್ 28 ) ನಡೆಯಲಿರುವ ಪಂದ್ಯ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ 22ನೇ ಪಂದ್ಯವಾಗಿದ್ದು, ಈ ಪಂದ್ಯ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7.30ಕ್ಕೆ ಆರಂಭಗೊಳ್ಳಲಿದೆ.

ಪಿಚ್‌ ರಿಪೋರ್ಟ್:

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪಂದ್ಯಗಳಲ್ಲಿ 140-160ರ ನಡುವಿನ ಮೊತ್ತಗಳನ್ನು ತಂಡಗಳು ಕಲೆಹಾಕಿವೆ. ಈ ಕ್ರೀಡಾಂಗಣದಲ್ಲಿ ಸರಾಸರಿ ಅಂತರರಾಷ್ಟ್ರೀಯ ಟಿ20 ಪಂದ್ಯಗಳ 1ನೇ ಇನಿಂಗ್ಸ್ ಸ್ಕೋರ್ 143 ಆಗಿದ್ದರೆ, ಸರಾಸರಿ 2ನೇ ಇನಿಂಗ್ಸ್ ಸರಾಸರಿ ಸ್ಕೋರ್ 122 ಆಗಿದೆ. ಕ್ರೀಡಾಂಗಣದಲ್ಲಿ ನಡೆದ ಈ ಬಾರಿಯ ಟಿ20 ವಿಶ್ವಕಪ್‌ನ ಕೊನೆಯ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 140+ ಮೊತ್ತವನ್ನು ದಾಖಲಿಸಿತು, ಅದನ್ನು ಸುಲಭವಾಗಿ ದಕ್ಷಿಣ ಆಫ್ರಿಕಾ ಬೆನ್ನಟ್ಟಿತು. ಕ್ರೀಡಾಂಗಣದಲ್ಲಿ ಸ್ಪಿನ್ನರ್‌ಗಳಿಗೆ ಅನುಕೂಲ ಹೆಚ್ಚಿದ್ದು ಎರಡನೇ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿ ಅಂಶ ಅನುಕೂಲವಾಗಲಿದೆ.

ಭಾರತ vs ನ್ಯೂಜಿಲೆಂಡ್‌: ಪಂದ್ಯಕ್ಕೂ ಮುನ್ನ ಕಿವೀಸ್‌ಗೆ ಉಂಟಾಗಿರುವ ಈ 2 ಸಮಸ್ಯೆಗಳಿಂದ ಭಾರತಕ್ಕೆ ಲಾಭಭಾರತ vs ನ್ಯೂಜಿಲೆಂಡ್‌: ಪಂದ್ಯಕ್ಕೂ ಮುನ್ನ ಕಿವೀಸ್‌ಗೆ ಉಂಟಾಗಿರುವ ಈ 2 ಸಮಸ್ಯೆಗಳಿಂದ ಭಾರತಕ್ಕೆ ಲಾಭ

ಸಂಭಾವ್ಯ ತಂಡಗಳು:

ಆಸ್ಟ್ರೇಲಿಯಾ ಸಂಭಾವ್ಯ ತಂಡ: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್‌), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಶ್ರೀಲಂಕಾ ಸಂಭಾವ್ಯ ತಂಡ: ಕುಸಲ್ ಪೆರೇರಾ (ವಿಕೆಟ್ ಕೀಪರ್‌), ಪಾತುಮ್ ನಿಸ್ಸಾಂಕ, ಚರಿತ್ ಅಸಲಂಕಾ, ಅವಿಷ್ಕ ಫೆರ್ನಾಂಡೋ, ಭಾನುಕಾ ರಾಜಪಕ್ಸೆ, ವನಿಂದು ಹಸರಂಗ, ದಸುನ್ ಶನಕ (ನಾಯಕ), ಚಾಮಿಕ ಕರುಣಾರತ್ನೆ, ದುಸ್ಮಂತ ಚಮೀರ, ಲಹಿರು ಕುಮಾರ, ಬಿನೂರ ಫೆರ್ನಾಂಡೊ

ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ಈ ಬಾರಿಯ ಟಿ20 ವಿಶ್ವಕಪ್‌ ಟೂರ್ನಿಯನ್ನು ಭಾರತದಲ್ಲಿ ನೇರ ಪ್ರಸಾರ ಮಾಡುತ್ತಿದೆ. ಡಿಸ್ನಿ + ಹಾಟ್‌ಸ್ಟಾರ್ ವಿಐಪಿ ಈ ಪಂದ್ಯಕ್ಕೆ ಲೈವ್ ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಅನ್ನು ಒದಗಿಸುತ್ತಿದೆ.

For Quick Alerts
ALLOW NOTIFICATIONS
For Daily Alerts
Story first published: Thursday, October 28, 2021, 13:48 [IST]
Other articles published on Oct 28, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X