ಟಿ ಟ್ವೆಂಟಿ ವಿಶ್ವಕಪ್: ಸ್ಟಾರ್ ಆಟಗಾರರಿರುವ ಈ ದೊಡ್ಡ ತಂಡ ಕಳಪೆ ಪ್ರದರ್ಶನ ನೀಡಲಿದೆ ಎಂದ ಆಕಾಶ್ ಚೋಪ್ರಾ

ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ ಕ್ರಿಕೆಟ್ ಜಗತ್ತಿನಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಸರಣಿಯ ನಡುವೆಯೂ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕೂಡ ತುಸು ಹೆಚ್ಚೇ ಸದ್ದು ಮಾಡುತ್ತಿದ್ದು 5 ವರ್ಷಗಳ ಬಳಿಕ ನಡೆಯಲಿರುವ ಈ ಟೂರ್ನಿ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಚರ್ಚೆಗಳು ನಡೆಯುತ್ತಿವೆ.

ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರುಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು

ಅದರಲ್ಲಿಯೂ ಕಳೆದ ಮಂಗಳವಾರ ಐಸಿಸಿ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವುದರ ಮೂಲಕ ಟೂರ್ನಿಯ ಮೇಲೆ ಮತ್ತಷ್ಟು ನಿರೀಕ್ಷೆ ಮತ್ತು ಕುತೂಹಲದ ಮಟ್ಟವನ್ನು ಹೆಚ್ಚಿಸಿತು. ಐಸಿಸಿ ಯಾವ ಯಾವ ಪಂದ್ಯಗಳು ಯಾವ ದಿನ ನಡೆಯಲಿದೆ, ಯಾವ ತಂಡ ಯಾವ ಹಂತದಲ್ಲಿ ಯಾವ ತಂಡಗಳ ವಿರುದ್ಧ ಸೆಣಸಾಡಲಿದೆ ಮತ್ತು ಪಂದ್ಯಗಳು ಎಲ್ಲಿ ಹಾಗೂ ಯಾವಾಗ ನಡೆಯಲಿವೆ ಎಂಬ ಸಂಪೂರ್ಣ ಮಾಹಿತಿಯನ್ನು ಮಂಗಳವಾರ ಬಹಿರಂಗಪಡಿಸಿತ್ತು.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಭಾರತದಲ್ಲಿಯೇ ನಡೆಯಬೇಕಾಗಿತ್ತು, ಆದರೆ ದೇಶದಲ್ಲಿ ಕೊರೊನಾವೈರಸ್ ಭೀತಿ ಇದೆ. ಹಾಗೂ ಕಳೆದ ಏಪ್ರಿಲ್ ತಿಂಗಳಿನಲ್ಲಿ ಭಾರತದಲ್ಲಿ ಆರಂಭವಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೂಡ ಕೊರೊನಾ ವೈರಸ್ ಹೊಡೆತಕ್ಕೆ ಸಿಕ್ಕು ಯುಎಇಗೆ ಸ್ಥಳಾಂತರವಾಗಿದೆ. ಹೀಗಾಗಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಕೂಡ ಯುಎಇಗೆ ಮುಂಜಾಗ್ರತಾ ಕ್ರಮಗಳೊಂದಿಗೆ ಸ್ಥಳಾಂತರಿಸಲಾಗಿದೆ. ಅಕ್ಟೋಬರ್ 17 ರಂದು ಆರಂಭವಾಗಿ ನವೆಂಬರ್ 14 ರಂದು ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಅಂತ್ಯಗೊಳ್ಳಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಭಾರತದ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರ

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ದೊಡ್ಡ ದೊಡ್ಡ ಆಟಗಾರರೇ ಇರುವ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೇ ಸಂಕಷ್ಟಕ್ಕೆ ಸಿಲುಕಿಕೊಳ್ಳಲಿದೆ ಎಂದು ಆಕಾಶ್ ಚೋಪ್ರಾ ಈ ಕೆಳಕಂಡಂತೆ ಭವಿಷ್ಯ ನುಡಿದಿದ್ದಾರೆ.

ಆಸ್ಟ್ರೇಲಿಯಾ ಪ್ರದರ್ಶನದ ಕುರಿತು ಅನುಮಾನ ವ್ಯಕ್ತಪಡಿಸಿದ ಆಕಾಶ್ ಚೋಪ್ರಾ

ಆಸ್ಟ್ರೇಲಿಯಾ ಪ್ರದರ್ಶನದ ಕುರಿತು ಅನುಮಾನ ವ್ಯಕ್ತಪಡಿಸಿದ ಆಕಾಶ್ ಚೋಪ್ರಾ

ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಬಹುನಿರೀಕ್ಷಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡದ ಪ್ರದರ್ಶನದ ಕುರಿತು ಆಕಾಶ್ ಚೋಪ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ. ಆಸ್ಟ್ರೇಲಿಯಾ ತಂಡ ನೋಡಲು 5 ಬೆರಳುಗಳಂತೆ ಕಂಡರೂ ಸಹ ಮುಷ್ಟಿಯಾಗುವಷ್ಟು ಪರಿಣಾಮಕಾರಿಯಲ್ಲ ಎನಿಸುತ್ತದೆ ಎಂದು ಆಕಾಶ್ ಚೋಪ್ರಾ ಹೇಳಿದ್ದಾರೆ. ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ಸೂಪರ್ 12 ಹಂತದಲ್ಲಿ ಗ್ರೂಪ್ 1ರಲ್ಲಿ ಸ್ಥಾನ ಪಡೆದುಕೊಂಡಿದ್ದು, ಆಸ್ಟ್ರೇಲಿಯ ಜೊತೆ ಬಲಿಷ್ಠ ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಸೆಣಸಾಡಲಿವೆ, ಹೀಗಾಗಿ ಆಸ್ಟ್ರೇಲಿಯಾ ಸಂಕಷ್ಟಕ್ಕೆ ಸಿಲುಕಿಕೊಳ್ಳುವ ಸಾಧ್ಯತೆಗಳು ಹೆಚ್ಚಿವೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದರ ಮೂಲಕ ದೊಡ್ಡ ದೊಡ್ಡ ಆಟಗಾರರು ಇದ್ದರೂ ಸಹ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ಕಳಪೆ ಪ್ರದರ್ಶನ ನೀಡಲಿದೆ ಎಂದು ಆಕಾಶ್ ಚೋಪ್ರಾ ಪರೋಕ್ಷವಾಗಿ ಹೇಳಿದ್ದಾರೆ.

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾಗೆ ಬೌಲಿಂಗ್ ಸಮಸ್ಯೆ ತಪ್ಪಿದ್ದಲ್ಕ ಎಂದ ಚೋಪ್ರಾ

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾಗೆ ಬೌಲಿಂಗ್ ಸಮಸ್ಯೆ ತಪ್ಪಿದ್ದಲ್ಕ ಎಂದ ಚೋಪ್ರಾ

ಇನ್ನೂ ಮುಂದುವರಿದು ಆಸ್ಟ್ರೇಲಿಯಾ ಪ್ರದರ್ಶನದ ಕುರಿತು ಮಾತನಾಡಿರುವ ಆಕಾಶ್ ಚೋಪ್ರಾ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ತಂಡ ಬೌಲಿಂಗ್ ಸಮಸ್ಯೆಯನ್ನು ಎದುರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಪಂದ್ಯಗಳು ಯುಎಇನಲ್ಲಿ ನಡೆಯುವುದರಿಂದ ಸ್ಪಿನ್ ಬೌಲರ್‌ಗಳ ಅಗತ್ಯತೆ ಹೆಚ್ಚಿರುತ್ತದೆ, ಆದರೆ ಆಸ್ಟ್ರೇಲಿಯಾ ತಂಡದಲ್ಲಿ ಲಭ್ಯವಿರುವ ಸ್ಪಿನ್ ಬೌಲರ್‌ಗಳು ಆ್ಯಡಮ್ ಜಂಪಾ ಮತ್ತು ಅಗರ್ ಸ್ವೆಪ್‌ಸನ್ ಮಾತ್ರ. ಈ ಮೂವರು ಸ್ಪಿನ್ ಬೌಲರ್‌ಗಳೂ ಉತ್ತಮ ಬೌಲರ್‌ಗಳು ಎಂಬುದರಲ್ಲಿ ಅನುಮಾನವಿಲ್ಲ ಆದರೆ ಟಿ ಟ್ವೆಂಟಿ ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗೆ ಬೇಕಾದ ಅತ್ಯುತ್ತಮ ಸ್ಪಿನ್ ಬೌಲರ್‌ಗಳಾರೂ ಆಸ್ಟ್ರೇಲಿಯಾ ತಂಡದಲ್ಲಿಲ್ಲ ಎಂದು ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಪಾರ್ಟ್ ೨ ಸಿ ಎಸ್ ಕೆ ಭರ್ಜರಿ ಅಭ್ಯಾಸ ಶುರು | Oneindia Kannada
ಟಿ ಟ್ವೆಂಟಿ ವಿಶ್ವಕಪ್ 2021ರಲ್ಲಿ ಆಸ್ಟ್ರೇಲಿಯಾದ ಪಂದ್ಯಗಳು

ಟಿ ಟ್ವೆಂಟಿ ವಿಶ್ವಕಪ್ 2021ರಲ್ಲಿ ಆಸ್ಟ್ರೇಲಿಯಾದ ಪಂದ್ಯಗಳು

1. ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ - ಅಕ್ಟೋಬರ್ 23, ಅಬುಧಾಬಿಯಲ್ಲಿ 3.30ಕ್ಕೆ ನಡೆಯಲಿದೆ.

2. ಆಸ್ಟ್ರೇಲಿಯಾ vs ಎ1 - ಅಕ್ಟೋಬರ್ 28, ದುಬೈನಲ್ಲಿ ಸಂಜೆ 7.30ಕ್ಕೆ ನಡೆಯಲಿದೆ.

3. ಆಸ್ಟ್ರೇಲಿಯಾ vs ಇಂಗ್ಲೆಂಡ್ - ಅಕ್ಟೋಬರ್ 30, ದುಬೈನಲ್ಲಿ ಸಂಜೆ 7.30ಕ್ಕೆ ನಡೆಯಲಿದೆ.

4. ಆಸ್ಟ್ರೇಲಿಯಾ vs ಬಿ 2 - ನವೆಂಬರ್‌ 4, ಅಬುಧಾಬಿಯಲ್ಲಿ 3.30ಕ್ಕೆ ನಡೆಯಲಿದೆ.

5. ಆಸ್ಟ್ರೇಲಿಯಾ vs ವೆಸ್ಟ್ ಇಂಡೀಸ್ - ನವೆಂಬರ್‌ 6, ಅಬುಧಾಬಿಯಲ್ಲಿ 3.30ಕ್ಕೆ ನಡೆಯಲಿದೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Saturday, August 21, 2021, 14:18 [IST]
Other articles published on Aug 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X