ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತದ ಕಳಪೆ ಪ್ರದರ್ಶನಕ್ಕೆ ಐಪಿಎಲ್ ಕಾರಣ?; ಸತತ ಸೋಲಿಗೆ ಅಸಲಿ ಕಾರಣ ಬಿಚ್ಚಿಟ್ಟ ಬ್ಯಾಟಿಂಗ್ ಕೋಚ್

T20 World Cup 2021: Batting coach Vikram Rathour revealed the reason behind Team Indias failure in the tournament

ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಆರಂಭವನ್ನು ಪಡೆದುಕೊಂಡಿತು. ಪ್ರಸ್ತುತ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಸೂಪರ್ 12 ಹಂತದಲ್ಲಿ ಗ್ರೂಪ್‌ 2ರಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ಟೀಮ್ ಇಂಡಿಯಾ ಸದ್ಯ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳು ಮುಗಿದ ನಂತರ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಹೌದು 6 ತಂಡಗಳನ್ನೊಳಗೊಂಡ ಗುಂಪಿನಲ್ಲಿ ಟೀಮ್ ಇಂಡಿಯಾ ಐದನೇ ಸ್ಥಾನ ಪಡೆದುಕೊಂಡಿದ್ದು, ಬಲಿಷ್ಠ ತಂಡವಾಗಿ ಈ ರೀತಿಯ ಕೆಳಸ್ಥಾನವನ್ನು ಪಡೆದುಕೊಂಡು ಸಾಕಷ್ಟು ಟೀಕೆಗೆ ಒಳಗಾಗಿದೆ.

ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!ಟಿ20 ವಿಶ್ವಕಪ್: ಫೈನಲ್‌ನಲ್ಲಿ ಪಾಕಿಸ್ತಾನದ ಜೊತೆ ಕಾದಾಟ ನಡೆಸಲಿರುವ ತಂಡವನ್ನು ಹೆಸರಿಸಿದ ಶೇನ್ ವಾರ್ನ್!

ಹೌದು, ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಸೋಲನ್ನು ಅನುಭವಿಸುವುದರ ಮೂಲಕ ಸೆಮಿಫೈನಲ್ ರೇಸ್‌ನಲ್ಲಿ ಹಿನ್ನಡೆಯನ್ನು ಅನುಭವಿಸಿದೆ ಹಾಗೂ ಸೆಮಿಫೈನಲ್ ಹಂತ ಪ್ರವೇಶಿಸುವಲ್ಲಿಯೂ ಅನುಮಾನವನ್ನು ಮೂಡಿಸಿದೆ. ಅಕ್ಟೋಬರ್ 24ರ ಭಾನುವಾರದಂದು ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ತನ್ನ ಬದ್ಧ ವೈರಿಯಾದ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೀನಾಯವಾದ ಸೋಲನ್ನು ಅನುಭವಿಸಿತ್ತು. ನಂತರ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಕ್ಟೋಬರ್ 31ರ ಭಾನುವಾರದಂದು ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ 8 ವಿಕೆಟ್‍ಗಳ ಭರ್ಜರಿ ಜಯವನ್ನು ದಾಖಲಿಸಿತ್ತು. ಹೀಗೆ ಟೀಮ್ ಇಂಡಿಯಾ ಟೂರ್ನಿಯಲ್ಲಿ ತನ್ನ ಎರಡನೇ ಪಂದ್ಯದಲ್ಲಿಯೂ ಸೋಲುವುದರ ಮೂಲಕ ನಿರಾಸೆಯನ್ನು ಮೂಡಿಸಿತು ಮತ್ತು ಟೀಕಾಕಾರರಿಗೆ ಆಹಾರವಾಯಿತು.

ನ್ಯೂಜಿಲೆಂಡ್‌ ವಿರುದ್ಧ ಜಯ ಸುಲಭದ ಮಾತಲ್ಲ; ಭಾರತಕ್ಕೆ ಹಿಂದಿನಿಂದಲೂ ಇದೆ ಈ ದೊಡ್ಡ ಸಮಸ್ಯೆ!ನ್ಯೂಜಿಲೆಂಡ್‌ ವಿರುದ್ಧ ಜಯ ಸುಲಭದ ಮಾತಲ್ಲ; ಭಾರತಕ್ಕೆ ಹಿಂದಿನಿಂದಲೂ ಇದೆ ಈ ದೊಡ್ಡ ಸಮಸ್ಯೆ!

ಹೀಗೆ ಟೂರ್ನಿಯಲ್ಲಿನ ತನ್ನ ಮೊದಲೆರಡು ಪಂದ್ಯಗಳಲ್ಲಿ ಸತತವಾಗಿ ಸೋತಿರುವ ಟೀಮ್ ಇಂಡಿಯಾ ವಿರುದ್ಧ ಹಲವಾರು ಮಾಜಿ ಕ್ರಿಕೆಟಿಗರು ಟೀಕೆಗಳನ್ನು ವ್ಯಕ್ತಪಡಿಸಿದರು. ಇನ್ನೂ ಕೆಲ ಕ್ರಿಕೆಟ್ ಪಂಡಿತರು ಮತ್ತು ಮಾಜಿ ಕ್ರಿಕೆಟಿಗರು ಟೀಮ್ ಇಂಡಿಯಾ ಆಟಗಾರರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿದ್ದೇ ಪ್ರಸ್ತುತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿಫಲವಾಗಲು ಕಾರಣವಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಹೀಗೆ ಇಂಡಿಯನ್ ಪ್ರಿಮಿಯರ್ ಲೀಗ್ ಟೂರ್ನಿಯಿಂದ ಟೀಮ್ ಇಂಡಿಯಾ ಆಟಗಾರರು ಸದ್ಯ ನಡೆಯುತ್ತಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡುತ್ತಿದ್ದಾರಾ ಎಂಬ ವಿಚಾರದ ಕುರಿತಾಗಿ ಮಾತನಾಡಿರುವ ಭಾರತದ ಬ್ಯಾಟಿಂಗ್ ತರಬೇತುದಾರ ವಿಕ್ರಂ ರಾಥೋರ್ ಈ ಕೆಳಕಂಡಂತೆ ತಮ್ಮ ಉತ್ತರವನ್ನು ನೀಡಿದ್ದಾರೆ.

ಐಪಿಎಲ್ ಆಡಿದ್ದರಿಂದ ಯಾವುದೇ ತೊಂದರೆಯಿಲ್ಲ

ಐಪಿಎಲ್ ಆಡಿದ್ದರಿಂದ ಯಾವುದೇ ತೊಂದರೆಯಿಲ್ಲ

"ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಭಾಗವಹಿಸಿ ನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಆಡುತ್ತಿರುವುದರಿಂದ ಯಾವುದೇ ರೀತಿಯ ತೊಂದರೆಗಳಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ವಿಶ್ವದ ಹಲವಾರು ಕ್ರಿಕೆಟಿಗರು ಭಾಗವಹಿಸುವುದರಿಂದ ಆಟಗಾರರಿಗೆ ಉತ್ತಮ ಅಭ್ಯಾಸ ಸಿಕ್ಕಂತಾಗಲಿದೆ. ಹೀಗೆ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಅಭ್ಯಾಸವನ್ನು ಪಡೆದುಕೊಂಡು ತದನಂತರ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುವುದರಿಂದ ತಂಡದ ಪ್ರದರ್ಶನದ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ" ಎಂದು ವಿಕ್ರಂ ರಾಥೋರ್ ತಿಳಿಸಿದ್ದಾರೆ.

ಭಾರತದ ವಿಫಲತೆಗೆ ಕಾರಣ ಬಿಚ್ಚಿಟ್ಟ ವಿಕ್ರಂ ರಾಥೋರ್

ಭಾರತದ ವಿಫಲತೆಗೆ ಕಾರಣ ಬಿಚ್ಚಿಟ್ಟ ವಿಕ್ರಂ ರಾಥೋರ್

ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ತನ್ನ ಮೊದಲನೇ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿತು, ತದನಂತರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿಯೂ ಕೂಡ ಸೋಲುಂಡಿತು. ಹೀಗೆ ಟೀಂ ಇಂಡಿಯಾದ ಸತತ 2 ಸೋಲಿನ ಕುರಿತು ಮಾತನಾಡಿರುವ ವಿಕ್ರಂ ರಾಥೋರ್ ಆ ಸೋಲುಗಳಿಗೆ ಕಾರಣವಾದ ಅಂಶವನ್ನು ಕೂಡ ಬಿಚ್ಚಿಟ್ಟಿದ್ದಾರೆ. "ಕೊನೆಯ 2 ಪಂದ್ಯಗಳಲ್ಲಿ ತಂಡದ ಕಳಪೆ ಪ್ರದರ್ಶನಕ್ಕೆ ಕಾರಣವಾದದ್ದು ನಾವು ನಮ್ಮ ಯೋಜನೆಗಳನ್ನು ಜಾರಿಗೆ ತರದೇ ಇದ್ದದ್ದೇ ಹೊರತು ನಮ್ಮ ತಂಡದ ತಯಾರಿಯಲ್ಲ" ಎಂದು ವಿಕ್ರಂ ರಾಥೋರ್ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿರೋರಿಗೆ ಅವಕಾಶ ಸಿಕ್ತಿಲ್ಲ,ಯುವಿ ಬಂದ್ರೆ ಚಾನ್ಸ್ ಕೊಡೋರು ಯಾರ್ ಗುರೂ!! | Oneindia Kannada
ಇನ್ನೊಂದು ಪಂದ್ಯ ಸೋತರೂ ಭಾರತಕ್ಕಿಲ್ಲ ಸೆಮಿಫೈನಲ್ ಪ್ರವೇಶ!

ಇನ್ನೊಂದು ಪಂದ್ಯ ಸೋತರೂ ಭಾರತಕ್ಕಿಲ್ಲ ಸೆಮಿಫೈನಲ್ ಪ್ರವೇಶ!

ಟೂರ್ನಿಯಲ್ಲಿ ಈಗಾಗಲೇ 2 ಪಂದ್ಯಗಳನ್ನು ಸೋತಿರುವ ಟೀಮ್ ಇಂಡಿಯಾ ಇನ್ನೂ 3 ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಈ 3 ಪಂದ್ಯಗಳ ಪೈಕಿ ಯಾವುದಾದರೊಂದು ಪಂದ್ಯದಲ್ಲಿ ಟೀಮ್ ಇಂಡಿಯಾ ಸೋತರೂ ಸೆಮಿಫೈನಲ್ ಪ್ರವೇಶಿಸುವ ರೇಸ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ.

Story first published: Wednesday, November 3, 2021, 10:16 [IST]
Other articles published on Nov 3, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X