ಈ ತಂಡ ಇಟ್ಟುಕೊಂಡು ಟಿ20 ವಿಶ್ವಕಪ್‌ ಗೆಲ್ಲುತ್ತಾ ಇಂಗ್ಲೆಂಡ್?; 3 ಬಲಿಷ್ಠ ಆಟಗಾರರಿಗೆ ಇಲ್ಲ ಸ್ಥಾನ!

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ 5 ಪಂದ್ಯಗಳ ಟೆಸ್ಟ್ ಸರಣಿಯ 4 ಪಂದ್ಯಗಳು ಈಗಾಗಲೇ ಮುಗಿದಿದ್ದು ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 2-1 ಅಂತರದ ಮೇಲುಗೈ ಸಾಧಿಸಿ ಸರಣಿಯಲ್ಲಿ ಮುನ್ನಡೆಯನ್ನು ಸಾಧಿಸಿದೆ. ಈ ಸರಣಿಯ ಕೊನೆಯ ಪಂದ್ಯ ಸೆಪ್ಟೆಂಬರ್ 10ರ ಶುಕ್ರವಾರದಂದು ಆರಂಭವಾಗಲಿದ್ದು ಇದಕ್ಕೂ ಮೊದಲೇ ಭಾರತ ಮತ್ತು ಇಂಗ್ಲೆಂಡ್ ಎರಡೂ ತಂಡಗಳ ಕ್ರಿಕೆಟ್ ಬೋರ್ಡ್ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ತಂಡಗಳನ್ನು ಘೋಷಣೆ ಮಾಡಿವೆ.

ಅಂತಿಮ ಟೆಸ್ಟ್‌ನಿಂದ ಭಾರತದ ಈ ಇಬ್ಬರು ಸ್ಟಾರ್ ಆಟಗಾರರು ಹೊರಬೀಳುವ ಸಾಧ್ಯತೆ!ಅಂತಿಮ ಟೆಸ್ಟ್‌ನಿಂದ ಭಾರತದ ಈ ಇಬ್ಬರು ಸ್ಟಾರ್ ಆಟಗಾರರು ಹೊರಬೀಳುವ ಸಾಧ್ಯತೆ!

ಹೌದು, ನಿನ್ನೆಯಷ್ಟೇ ಬಿಸಿಸಿಐ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಣೆ ಮಾಡಿತ್ತು. ಇದಾದ ಬೆನ್ನಲ್ಲೇ ಈಗ ಇಂಗ್ಲೆಂಡ್ ಕೂಡ 15 ಆಟಗಾರರ ತಂಡವನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಘೋಷಣೆ ಮಾಡಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ ಬಹುತೇಕ ಎಲ್ಲಾ ತಂಡಗಳು ಸಹ ಟೂರ್ನಿಯಲ್ಲಿ ಭಾಗವಹಿಸಲಿರುವ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದವು. ಆದರೆ ತುಸು ತಡವಾಗಿ 15 ಆಟಗಾರರ ತಂಡವನ್ನು ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟಿಸಿರುವ ಹಾಲಿ ಏಕದಿನ ವಿಶ್ವಕಪ್ ಚಾಂಪಿಯನ್ ಇಂಗ್ಲೆಂಡ್ ಮೂವರು ಮ್ಯಾಚ್ ವಿನ್ನಿಂಗ್ ಪ್ರದರ್ಶನವನ್ನು ನೀಡುವ ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.

ಇಂಗ್ಲೆಂಡ್‌ಗೆ ಡ್ರಾ ಮಾಡಿಕೊಳ್ಳುವ ಯೋಗ್ಯತೆಯೂ ಇಲ್ಲ ಎಂಬುದು ನಾಚಿಕೆಗೇಡು; ಕಿಡಿಕಾರಿದ ಆಂಗ್ಲ ಕ್ರಿಕೆಟಿಗ!ಇಂಗ್ಲೆಂಡ್‌ಗೆ ಡ್ರಾ ಮಾಡಿಕೊಳ್ಳುವ ಯೋಗ್ಯತೆಯೂ ಇಲ್ಲ ಎಂಬುದು ನಾಚಿಕೆಗೇಡು; ಕಿಡಿಕಾರಿದ ಆಂಗ್ಲ ಕ್ರಿಕೆಟಿಗ!

ಸದ್ಯ ಇಂಗ್ಲೆಂಡ್ ತಂಡ ಪ್ರಕಟಿಸಿರುವ ತಂಡದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿದ್ದು ಉತ್ತಮ ಪ್ರದರ್ಶನವನ್ನು ನೀಡುವ ಆ ಮೂವರು ಆಟಗಾರರು ಇಲ್ಲದ ಈ ತಂಡ ನಿರೀಕ್ಷೆಯ ಮಟ್ಟವನ್ನು ತಲುಪುವುದು ಅನುಮಾನ ಎಂದು ಕ್ರೀಡಾಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿರುವ 15 ಆಟಗಾರರ ಇಂಗ್ಲೆಂಡ್ ತಂಡ ಮತ್ತು ತಂಡದಲ್ಲಿ ಸ್ಥಾನ ಪಡೆದುಕೊಳ್ಳದೆ ಹೊರಬಿದ್ದಿರುವ ಮೂವರು ಬಲಿಷ್ಠ ಆಟಗಾರರ ವಿವರ ಮುಂದೆ ಇದೆ ಓದಿ..

ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿರುವ ಇಂಗ್ಲೆಂಡ್ ತಂಡ

ಟಿ ಟ್ವೆಂಟಿ ವಿಶ್ವಕಪ್‌ಗೆ ಪ್ರಕಟವಾಗಿರುವ ಇಂಗ್ಲೆಂಡ್ ತಂಡ

ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ 15 ಆಟಗಾರರ ಇಂಗ್ಲೆಂಡ್ ತಂಡ ಹೀಗಿದೆ: ಇಯಾನ್ ಮಾರ್ಗನ್ (ನಾಯಕ), ಮೊಯೀನ್ ಅಲಿ, ಜಾನಿ ಬೈರ್‌ಸ್ಟೊ, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್, ಸ್ಯಾಮ್ ಕರನ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಡಾವಿಡ್ ಮಲನ್, ಟೈಮಲ್ ಮಿಲ್ಸ್, ಆದಿಲ್ ರಶೀದ್, ಜೇಸನ್ ರಾಯ್, ಡೇವಿಡ್ ವಿಲ್ಲಿ, ಕ್ರಿಸ್ ವೋಕ್ಸ್ ಮತ್ತು ಮಾರ್ಕ್ ವುಡ್

ಪ್ರವಾಸ ಮೀಸಲು: ಟಾಮ್ ಕರನ್, ಲಿಯಾಮ್ ಡಾಸನ್, ಜೇಮ್ಸ್ ವಿನ್ಸ್

ಸ್ಥಾನ ಪಡೆದುಕೊಳ್ಳದ ಮೂವರು ಬಲಿಷ್ಠ ಆಟಗಾರರು

ಸ್ಥಾನ ಪಡೆದುಕೊಳ್ಳದ ಮೂವರು ಬಲಿಷ್ಠ ಆಟಗಾರರು

ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗಿರುವ 15 ಆಟಗಾರರ ಇಂಗ್ಲೆಂಡ್ ತಂಡವನ್ನು ನೋಡಿದ ಪ್ರತಿಯೊಬ್ಬರೂ ಸಹ ವ್ಯಕ್ತಪಡಿಸುತ್ತಿರುವ ಅಭಿಪ್ರಾಯವೆಂದರೆ ಅಲೆಕ್ಸ್ ಹೇಲ್ಸ್, ಬೆನ್ ಸ್ಟೋಕ್ಸ್ ಮತ್ತು ಜೋಫ್ರಾ ಆರ್ಚರ್ ತಂಡದಲ್ಲಿ ಯಾಕಿಲ್ಲ ಎಂಬುದು. ಹೌದು, ಇಂಗ್ಲೆಂಡ್ ತಂಡದ ಟಿ ಟ್ವೆಂಟಿ ಸ್ಪೆಷಲಿಸ್ಟ್ ಮತ್ತು ಕಷ್ಟದ ಸಂದರ್ಭಗಳಲ್ಲಿ ತಂಡಕ್ಕೆ ಆಸರೆಯಾಗುತ್ತಿದ್ದ ಈ ಮೂವರು ಆಟಗಾರರನ್ನು ಟಿ ಟ್ವೆಂಟಿ ವಿಶ್ವಕಪ್ ತಂಡದಿಂದ ಕೈಬಿಟ್ಟಿರುವುದರ ಕುರಿತು ಇದೀಗ ದೊಡ್ಡ ಮಟ್ಟದಲ್ಲಿ ಪ್ರಶ್ನೆಗಳು ವ್ಯಕ್ತವಾಗುತ್ತಿದ್ದು ಈ ಮೂವರು ಆಟಗಾರರಿಲ್ಲದೇ ಇಂಗ್ಲೆಂಡ್ ಅಬ್ಬರದ ಪ್ರದರ್ಶನ ನೀಡಲಿದೆಯಾ ಎಂಬ ಅನುಮಾನ ಇದೀಗ ಎಲ್ಲರಲ್ಲಿಯೂ ಮೂಡಿದೆ.

Dhoni ಮಾರ್ಗದರ್ಶನದ ಬಗ್ಗೆ ಟೀಮ್ ಇಂಡಿಯಾ ನಾಯಕ Virat ಹೇಳೋದೇನು | Oneindia Kannada
ವಿಶ್ವಕಪ್ ಹೀರೋ ಬೆನ್ ಸ್ಟೋಕ್ಸ್ ಇಲ್ಲದ ಇಂಗ್ಲೆಂಡ್ ಯಾವ ರೀತಿ ಪ್ರದರ್ಶನ ನೀಡಲಿದೆ?

ವಿಶ್ವಕಪ್ ಹೀರೋ ಬೆನ್ ಸ್ಟೋಕ್ಸ್ ಇಲ್ಲದ ಇಂಗ್ಲೆಂಡ್ ಯಾವ ರೀತಿ ಪ್ರದರ್ಶನ ನೀಡಲಿದೆ?

2019ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೆನ್ ಸ್ಟೋಕ್ಸ್ ಇಂಗ್ಲೆಂಡ್ ತಂಡದ ಪರ ಯಾವ ರೀತಿಯ ಅದ್ಭುತ ಆಟವನ್ನು ಆಡಿದರು ಎಂಬುದರ ಬಗ್ಗೆ ಹೆಚ್ಚಿನ ವಿವರಣೆ ನೀಡುವ ಅಗತ್ಯವಿಲ್ಲ. ಬೆನ್ ಸ್ಟೋಕ್ಸ್ ತಂಡದಲ್ಲಿ ಇಲ್ಲದೇ ಇದ್ದಿದ್ದರೆ ಇಂಗ್ಲೆಂಡ್ ಏಕದಿನ ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಹೀಗೆ ಕಳೆದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿದ್ದ ಬೆನ್ ಸ್ಟೋಕ್ಸ್ ಕೆಲ ದಿನಗಳ ಕಾಲ ಕ್ರಿಕೆಟ್‍ನಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿದ್ದರು. ಸದ್ಯ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯಿಂದಲೂ ಸಹ ದೂರ ಉಳಿದಿದ್ದ ಬೆನ್ ಸ್ಟೋಕ್ಸ್ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ಎಣಿಸಲಾಗಿತ್ತು. ಆದರೆ ಬೆನ್ ಸ್ಟೋಕ್ಸ್ ಮುಂಬರಲಿರುವ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೂ ಸಹ ಇದೀಗ ಅಲಭ್ಯರಾಗಿದ್ದು, ಸ್ಟೋಕ್ಸ್ ಇಲ್ಲದ ಇಂಗ್ಲೆಂಡ್ ತಂಡ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆಲ್ಲಲಿದೆಯಾ ಎಂಬ ಅನುಮಾನದ ಪ್ರಶ್ನೆಗಳು ಮೂಡುತ್ತಿವೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 15 - October 24 2021, 03:30 PM
ಶ್ರೀಲಂಕಾ
ಬಾಂಗ್ಲಾದೇಶ್
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Thursday, September 9, 2021, 18:06 [IST]
Other articles published on Sep 9, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X