ಟಿ20 ವಿಶ್ವಕಪ್, ಆಸ್ಟ್ರೇಲಿಯಾ vs ನ್ಯೂಜಿಲೆಂಡ್: ಫೈನಲ್ ಪಂದ್ಯಕ್ಕೂ ಮುನ್ನ ತಿಳಿದುಕೊಳ್ಳಬೇಕಾದ ಮಾಹಿತಿ

ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಮಾತ್ರ ಈಗ ಬಾಕಿಯಿದ್ದು ಈ ಬಾರಿಯ ಚಾಂಪಿಯನ್ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಈ ಬಾರಿಯ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲು ಸಜ್ಜಾಗಿದೆ. ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದ್ದರೆ ಆಸ್ಟ್ರೇಲಿಯಾ ಬಲಿಷ್ಠ ಪಾಕಿಸ್ತಾನಕ್ಕೆ ಸೋಲುಣಿಸಿ ಟಿ20 ವಿಶ್ವಕಪ್‌ನ ಅಂತಿಮ ಘಟ್ಟಕ್ಕೆ ಪ್ರವೇಶ ಪಡೆದಿದೆ.
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಇದಕ್ಕೂ ಮುನ್ನ 2015ರ ಐಸಿಸಿ ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ತಂಡವನ್ನು ಮಣಿಸಿ ವಿಶ್ವಕಪ್ ಗೆದ್ದುಕೊಂಡಿತ್ತು. ಅಂದಿನ ಆ ಸೋಲನ್ನು ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ತೀರಿಸಿಕೊಳ್ಳಲು ನ್ಯೂಜಿಲೆಂಡ್‌ಗೆ ಉತ್ತಮ ಅವಕಾಶ ದೊರೆತಿದೆ.
ಇನ್ನು ಆಸ್ಟ್ರೇಲಿಯಾ ಈ ಫೈನಲ್ ಪಂದ್ಯದಲ್ಲಿ ಆಡುವ ಬಳಗದಲ್ಲಿ ಯಾವುದೇ ಬದಲಾವನೆ ಮಾಡಿಕೊಳ್ಳುವ ಸಾಧ್ಯತೆ ತೀರಾ ಕಡಿಮೆಯಿದೆ. ಆದರೆ ನ್ಯೂಜಿಲೆಂಡ್ ತಂಡದ ಮಧ್ಯಮ ಕ್ರಮಾಂಕದ ಆಟಗಾರ ಡೇವಿಡ್ ಕಾನ್ವೆ ಗಾಯಗೊಂಡು ಹೊರಬಿದ್ದಿರುವ ಕಾರಣದಿಂದಾಗಿ ವಿಶ್ವಕಪ್‌ನಿಂದ ಹೊರಬಿದ್ದಿದ್ದಾರೆ. ಹೀಗಾಗಿ ಒಂದು ಬದಲಾವಣೆ ಖಚಿತವಾಗಿದೆ. ಕಾನ್ವೆ ಸ್ಥಾನದಲ್ಲಿ ನ್ಯೂಜಿಲೆಂಡ್ ಟಿಮ್ ಸೈಫೋರ್ಟ್ ಅಥವಾ ಮಾರ್ಕ್ ಚಾಂಪ್‌ಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ.

ಫೈನಲ್ ಪಂದ್ಯದ ದಿನಾಂಕ ಹಾಗೂ ಸಮಯ
ಈ ಬಾರಿಯ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ನವೆಂಬರ್ 14ರಂದು ಭಾನುವಾರ ನಡೆಯಲಿದೆ. ಆಸ್ಟ್ರೇಲಯಾ ಹಾಗೂ ನ್ಯೂಜಿಲೆಂಡ್ ತಂಡಗಳು ದುಬೈ ಅಂತಾರಾಷ್ಟ್ರೀಊಯ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯ ಭಾರತೀಯ ಕಾಲಮಾನ 7:30ಕ್ಕೆ ಆರಂಭವಾಗಲಿದೆ.

ನೇರ ಪ್ರಸಾರ ಹಾಗೂ ಲೈವ್‌ಸ್ಟ್ರೀಮ್
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ಭಾರತದಲ್ಲಿ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದೆ. ಕನ್ನಡ ಸೇರಿದಂತೆ ಇಂಗ್ಲೀಷ್, ಹಿಂದಿ, ತಮಿಳು, ತೆಲುಗು ಭಾಷೆಗಳಲ್ಲಿ ಪಂದ್ಯದ ವೀಕ್ಷಕ ವಿವರಣೆ ಲಭ್ಯವಾಗಲಿದೆ. ಅಲ್ಲದೆ ಹಾಟ್‌ಸ್ಟಾರ್ ವಿಐಪಿ ಚಂದಾದಾರರು ಕೂಡ ಈ ಪಂದ್ಯದ ನೇರಪ್ರಸಾರವನ್ನು ವೀಕ್ಷಿಸಬಹುದು.

ಆಸ್ಟ್ರೇಲಿಯಾ vs ನ್ಯೂಜಿಲೆಂಡ್ ಹೆಡ್ ಟು ಹೆಡ್
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಟಿ20 ಮಾದರಿಯಲ್ಲಿ ಈವರೆಗೆ 14 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದರೆ ನ್ಯೂಜಿಲೆಂಡ್ ತಂಡ 5 ಬಾರಿ ಗೆಲುವು ಸಾಧಿಸಿದೆ. ಆದರೆ ಈ ಎರಡು ತಂಡಗಳು ಟಿ20 ವಿಶ್ವಕಪ್‌ನಲ್ಲಿ ಈವರೆಗೆ ಕೇವಲ ಒಂದು ಬಾರಿ ಮಾತ್ರವೇ ಮುಖಾಮುಖಿಯಾಗಿದ್ದು ಇದರಲ್ಲಿ ನ್ಯೂಜಿಲೆಂಡ್ ತಂಡ ಗೆಲುವು ಸಾಧಿಸಿದೆ.
ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿಲ್ಲ, ತಂಡದಿಂದಲೇ ಆಚೆ ಹಾಕಲಾಗಿದೆ; ಕಾರಣ ಆ ಓರ್ವ ಆಟಗಾರ!

ಆಸ್ಟ್ರೇಲಿಯಾದ ಸಂಭಾವ್ಯ ಆಡುವ ಬಳಗ
ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಸ್ಟೀವ್ ಸ್ಮಿತ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯ್ನಿಸ್, ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ನ್ಯೂಜಿಲೆಂಡ್ ಸಂಭಾವ್ಯ ಆಡುವ ಬಳಗ
ನ್ಯೂಜಿಲೆಂಡ್: ಮಾರ್ಟಿನ್ ಗಪ್ಟಿಲ್, ಡೇರಿಲ್ ಮಿಚೆಲ್, ಕೇನ್ ವಿಲಿಯಮ್ಸನ್(ನಾಯಕ), ಟಿಮ್ ಸೀಫರ್ಟ್/ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications