
ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯುತ್ತಿರುವ ಫೈನಲ್ ಹಣಾಹಣಿಯಲ್ಲಿ ನ್ಯೂಜಿಲೆಂಡ್ ತಂಡ ಆಸ್ಟ್ರೇಲಿಯಾಗೆ ಸವಾಲಿನ ಗುರಿ ನೀಡಿದೆ. ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡಕ್ಕೆ ನಾಯಕ ಕೇನ್ ವಿಲಿಯಮ್ಸನ್ ನೀಡಿದ ಅದ್ಭುತ ಇನ್ನಿಂಗ್ಸ್‌ನ ಕಾರಣದಿಂದಾಗಿ ಸವಾಲಿನ ಗುರಿ ನೀಡಲು ಸಾಧ್ಯವಾಯಿತು.
ಉತ್ತಮ ಆರಂಭ ಪಡೆಯುವಲ್ಲಿ ನ್ಯೂಜಿಲೆಂಡ್ ತಂಡ ವಿಫಲವಾದರು ಕೂಡ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಮಾರ್ಟಿನ್ ಗಪ್ಟಿಲ್ 2ನೇ ವಿಕೆಟ್‌ಗೆ 48 ರನ್‌ಗಳ ಜೊತೆಯಾಟವನ್ನು ನೀಡಿದರು. ಮಾರ್ಟಿನ್ ಗಪ್ಟಿಲ್ 28 ರನ್‌ಗಳಿಗೆ ತಮ್ಮ ವಿಕೆಟ್ ಕಳೆದುಕೊಂಡರು. ಮತ್ತೊಂದೆಡೆ ನಾಯಕ ಕೇನ್ ವಿಲಿಯಮ್ಸನ್ ಅಬ್ಬರದಾಟ ಮುಂದುವರಿದಿತ್ತು. ಮೂರನೇ ವಿಕೆಟ್‌ಗೆ ಗ್ಲೆನ್ ಫಿಲಿಪ್ಸ್ ಜೊತೆಗೆ ಸೇರಿಕೊಂಡು 68 ರನ್‌ಗಳ ಜೊತೆಯಾವನ್ನು ಕೇನ್ ವಿಲಿಯಮ್ಸನ್ ನೀಡಿದರು. 18 ಎಸೆತಗಳಲ್ಲಿ 18 ರನ್‌ಗಳಿಸಿದ ಫಿಲಿಪ್ಸ್ ಬಳಿಕ ಹ್ಯಾಜಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು.
ಫಿಲಿಪ್ಸ್ ವಿಕೆಟ್ ಕಳೆದುಕೊಂಡ ಬಳಿಕ ಅದೇ ಓವರ್‌ನಲ್ಲಿ ಕೇನ್ ವಿಲಿಯನ್ಸನ್ ಕೂಡ ಔಟಾದರು. ಆದರೆ ಅಷ್ಟರಲ್ಲಾಗಲೇ ಕೇನ್ ಅದ್ಭುತವಾದ ಇನ್ನಿಂಗ್ಸ್ ಕಟ್ಟಿದ್ದರು. 48 ಎಸೆತಗಳನ್ನು ಎದುರಿಸಿದ ಕೇನ್ ವಿಲಿಯಮ್ಸನ್ ಭರ್ಜರಿ 85 ರನ್ ಗಳಸಿದರು. ಈ ಸುಂದರ ಇನ್ನಿಂಗ್ಸ್‌ನಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 10 ಬೌಂಡರಿ ಸೇರಿದೆ. 177.08ರ ಸ್ಟ್ರೈಕ್‌ರೇಟ್‌ನಲ್ಲಿ ಕೇನ್ ಬ್ಯಾಟ್ ಬೀಸಿದ್ದಾರೆ. ನಂತರ ನೀಶಮ್ 13 ರನ್‌ಗಳಿಸಿದರೆ ಸೈಫರ್ಟ್ 8 ರನ್‌ಗಳಿಸಿ ಅಜೇಯವಾಗಿ ಉಳಿದರು.
ಇನ್ನು ಆಸ್ಟ್ರೇಲಿಯಾ ಪರವಾಗಿ ಬೌಲಿಂಗ್‌ನಲ್ಲಿ ಜೋಶ್ ಹ್ಯಾಜಲ್‌ವುಡ್ ಅದ್ಭುತ ಬೌಲಿಂಗ್ ದಾಳಿ ನಡೆಸಿದ್ದಾರೆ. ನಾಲ್ಕು ಓವರ್‌ಗಳ ತಮ್ಮ ಬೌಲಿಂಗ್ ಕೋಟಾದಲ್ಲಿ ಹೇಜಲ್‌ವುಡ್ ಕೇವಲ 18 ರನ್ ನೀಡಿ 3 ವಿಕೆಟ್ ಪಡೆದುಕೊಂಡಿದ್ದಾರೆ. ಆಡಂ ಜಂಪಾ 1 ವಿಕೆಟ್ ಕಬಳಿಸಿದರು. ಆಸ್ಟ್ರೇಲಿಯಾದ ಪ್ರಮುಖ ವೇಗಿ ಸ್ಟಾರ್ಕ್ ಈ ಪಂದ್ಯದಲ್ಲಿ ಅತ್ಯಂತ ದುಬಾರಿಯಾದರು. ನಾಲ್ಕು ಓವರ್‌ಗಳಲ್ಲಿ ಸ್ಟಾರ್ಕ್ 60 ರನ್ ಎದುರಾಳಿಗೆ ಬಿಟ್ಟುಕೊಟ್ಟಿದ್ದಾರೆ.
ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡ್ಯಾರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್
ಬೆಂಚ್: ಟಾಡ್ ಆಸ್ಟಲ್, ಕೈಲ್ ಜೇಮಿಸನ್, ಮಾರ್ಕ್ ಚಾಪ್ಮನ್
ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಸ್