For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್ ಫೈನಲ್: ಆಸ್ಟ್ರೇಲಿಯಾ vs ನ್ಯೂಜಿಲೆಂಡ್; ಟಾಸ್ ಗೆದ್ದ ಆಸಿಸ್ ಬ್ಯಾಟಿಂಗ್ ಆಯ್ಕೆ, Live ಸ್ಕೋರ್

T20 world cup 2021: Final Match, New Zealand vs Australia, Live score and Playing XI

ಟಿ20 ವಿಶ್ವಕಪ್ 2021ರ ಫೈನಲ್ ಪಂದ್ಯ ಈಗ ಆರಂಭವಾಗಿದೆ. ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಟಾಸ್ ಗೆದ್ದಿದ್ದು ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ತಂಡ ಮೊದಲಿಗೆ ಬ್ಯಾಟಿಂಗ್ ಮಾಡುವ ಮೂಲಕ ಎದುರಾಳಿಗೆ ರನ್ ನಿಗದಿಗೊಳಿಸುವ ಸವಾಲು ಸ್ವೀಕರಿಸಿದೆ.

ಇನ್ನು ಈ ಪಂದ್ಯದಲ್ಲಿಯೂ ಆಸ್ಟ್ರೇಲಿಯಾ ತಂಡ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಈ ಹಿಂದಿನ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ನ್ಯೂಜಿಲೆಂಡ್ ಅನುವಾರ್ಯವಾಗಿ ಬದಲಾವನೆ ಮಾಡಿಕೊಳ್ಳಬೇಕಾಯಿತು. ಕೈ ಮೂಳೆ ಮುರಿತಕ್ಕೊಳಗಾದ ಕಾನ್ವೆ ಹೊರಗುಳಿದಿದ್ದು ಅವರ ಬದಲಿಗೆ ಸೈಫರ್ಟ್ ಆಡುವ ಬಳಗದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಚೊಚ್ಚಲ ಟಿ20 ವಿಶ್ವಕಪ್ ಮುಡಿಗೇರಿಸಿಕೊಳ್ಳುವ ತವಕದಲ್ಲಿದೆ. ಸೆಮಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ರೋಚಕ ಗೆಲುವು ಸಾಧಿಸಿದ್ದರೆ ಆಸ್ಟ್ರೇಲಿಯಾ ತಂಡ ಪಾಕಿಸ್ತಾನಕ್ಕೆ ಸೋಲುಣಿಸಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತ್ತು. ಹೀಗಾಗಿ ಈ ಪಂದ್ಯದಲ್ಲಿ ಆರೋನ್ ಫಿಂಚ್ ಹಾಗೂ ಕೇನ್ ವಿಲಿಯಮ್ಸನ್ ಪಡೆ ಪರಸ್ಪರ ಜಿದ್ದಾಜಿದ್ದಿನ ಸ್ಪರ್ಧೆಗೆ ಇಳಿದಿದೆ.

Live ಸ್ಕೋರ್‌ಕಾರ್ಡ್ ಇಲ್ಲಿದೆ:

1
51708

ನ್ಯೂಜಿಲೆಂಡ್ ಆಡುವ ಬಳಗ: ಮಾರ್ಟಿನ್ ಗಪ್ಟಿಲ್, ಡ್ಯಾರಿಲ್ ಮಿಚೆಲ್, ಕೇನ್ ವಿಲಿಯಮ್ಸನ್ (ನಾಯಕ), ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಆಡಮ್ ಮಿಲ್ನೆ, ಟಿಮ್ ಸೌಥಿ, ಇಶ್ ಸೋಧಿ, ಟ್ರೆಂಟ್ ಬೌಲ್ಟ್
ಬೆಂಚ್: ಟಾಡ್ ಆಸ್ಟಲ್, ಕೈಲ್ ಜೇಮಿಸನ್, ಮಾರ್ಕ್ ಚಾಪ್ಮನ್

ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್
ಬೆಂಚ್: ಕೇನ್ ರಿಚರ್ಡ್ಸನ್, ಆಷ್ಟನ್ ಅಗರ್, ಮಿಚೆಲ್ ಸ್ವೆಪ್ಸನ್, ಜೋಶ್ ಇಂಗ್ಲಿಸ್

T20 ವಿಶ್ವಕಪ್ ಕಿರೀಟ ಆಸ್ಟ್ರೇಲಿಯಾ ಮುಡಿಗೆ: ಕಿವೀಸ್ ಗೆ ನಿರಾಸೆ | Oneindia Kannada

Story first published: Sunday, November 14, 2021, 19:34 [IST]
Other articles published on Nov 14, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+