ಟಿ20 ವಿಶ್ವಕಪ್ 2021 ಫೈನಲ್: ಆಸ್ಟ್ರೇಲಿಯಾ vs ನ್ಯೂಜಿಲೆಂಡ್ ಮುಖಾಮುಖಿಯಲ್ಲಿ ಬಲಿಷ್ಠ ತಂಡ ಯಾವುದು?

ಸದ್ಯ ಯುಎಇಯಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಕ್ತಾಯದ ಹಂತಕ್ಕೆ ಬಂದು ತಲುಪಿದ್ದು ಫೈನಲ್ ಪಂದ್ಯ ನವೆಂಬರ್ 14ರ ಭಾನುವಾರದಂದು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣೆಸಾಟ ನಡೆಸಲಿವೆ.
ಹೀಗೆ ಫೈನಲ್ ಪಂದ್ಯದಲ್ಲಿ ಸೆಣಸಾಟ ನಡೆಸಲಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಎರಡೂ ತಂಡಗಳು ಕೂಡ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಬಲಿಷ್ಠ ತಂಡಗಳನ್ನು ಸೆಮಿಫೈನಲ್ ಹಂತದಲ್ಲಿ ಸದೆ ಬಡಿಯುವುದರ ಮೂಲಕ ಫೈನಲ್ ಹಂತಕ್ಕೆ ಪ್ರವೇಶ ಪಡೆದುಕೊಂಡಿವೆ. ಮೊದಲಿಗೆ ನ್ಯೂಜಿಲೆಂಡ್ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವುದರ ಮೂಲಕ ಫೈನಲ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿತು. ಅತ್ತ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡ ಪಾಕಿಸ್ತಾನಕ್ಕೆ ಸೋಲುಣಿಸುವುದರ ಮೂಲಕ ಫೈನಲ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡಿದೆ.
ಇನ್ನು ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗುವ ಮುನ್ನ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ಪಂಡಿತರು ಸೆಮಿಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬಹುದಾದ ತಂಡಗಳನ್ನು ಊಹಿಸಿದ್ದರು. ಆದರೆ ಈ ಪೈಕಿ ಬಹುತೇಕರು ಆಸ್ಟ್ರೇಲಿಯ ತಂಡ ಸೆಮಿಫೈನಲ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಳ್ಳಲಿದೆ ಎಂದು ಊಹಿಸಿಯೇ ಇರಲಿಲ್ಲ. ಹೌದು, ಹಲವಾರು ಮಂದಿ ಆಸ್ಟ್ರೇಲಿಯಾವನ್ನು ಕಡೆಗಣಿಸಿದ್ದು ನಿಜ. ಆದರೆ ಈ ಕಡೆಗಣನೆಗೆ ತಮ್ಮ ಪ್ರದರ್ಶನದ ಮೂಲಕ ಉತ್ತರ ನೀಡಿರುವ ಆಸ್ಟ್ರೇಲಿಯಾ ಇದೀಗ ಫೈನಲ್ ಸುತ್ತಿಗೆ ಅರ್ಹತೆ ಪಡೆದುಕೊಂಡು ಟ್ರೋಫಿ ಎತ್ತಿಹಿಡಿಯುವಲ್ಲಿ ಚಿತ್ತ ನೆಟ್ಟಿದೆ.
ಈಗಾಗಲೇ ಹಲವಾರು ಐಸಿಸಿ ಟ್ರೋಫಿಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಇದುವರೆಗೂ ಕೂಡ ಯಾವುದೇ ಆವೃತ್ತಿಯಲ್ಲಿಯೂ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆದ್ದಿಲ್ಲ. ಅತ್ತ ನ್ಯೂಜಿಲೆಂಡ್ ಕೂಡ ಯಾವುದೇ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ಸ್ ಆಗಿ ಹೊರಹೊಮ್ಮಿಲ್ಲ. ಹೀಗಾಗಿ ಇಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಹಣಾಹಣಿ ರೋಚಕವಾಗಿರಲಿದ್ದು, ಇತ್ತಂಡಗಳಲ್ಲಿ ಯಾವ ತಂಡ ತನ್ನ ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿಯಲಿದೆ ಎಂಬುದು ಕುತೂಹಲವನ್ನು ಕೆರಳಿಸಿದೆ.
ಇನ್ನು ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿರುವ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಇದುವರೆಗೂ ನಡೆದಿರುವ ಟಿ ಟ್ವೆಂಟಿ ಪಂದ್ಯಗಳ ಹಣಾಹಣಿಯಲ್ಲಿ ಯಾವ ತಂಡ ಹೆಚ್ಚು ಪಂದ್ಯಗಳನ್ನು ಗೆದ್ದು ಬಲಿಷ್ಠ ಎನಿಸಿಕೊಂಡಿದೆ ಮತ್ತು ಟಿ ಟ್ವೆಂಟಿ ವಿಶ್ವಕಪ್ ಇತಿಹಾಸದಲ್ಲಿ ಇತ್ತಂಡಗಳ ನಡುವಿನ ಹಣಾಹಣಿಯಲ್ಲಿ ಯಾವ ತಂಡ ಗೆಲುವು ಸಾಧಿಸಿದೆ ಎಂಬುದರ ಕುರಿತಾದ ಮಾಹಿತಿ ಈ ಕೆಳಕಂಡಂತಿದೆ ನೋಡಿ..
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಒಟ್ಟಾರೆ ಟಿಟ್ವೆಂಟಿ ಮುಖಾಮುಖಿಯಲ್ಲಿ ಯಾರು ಬಲಿಷ್ಠರು?
ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಟಿ ಟ್ವೆಂಟಿ ಕ್ರಿಕೆಟ್ ಇತಿಹಾಸದಲ್ಲಿ ಇದುವರೆಗೂ ಒಟ್ಟು 14 ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪಂದ್ಯಗಳ ಪೈಕಿ ಆಸ್ಟ್ರೇಲಿಯಾ 9 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್ 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಈ ಮೂಲಕ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವಿನ ಒಟ್ಟಾರೆ ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಆಸ್ಟ್ರೇಲಿಯಾ ಸ್ಪಷ್ಟ ಮೇಲುಗೈ ಸಾಧಿಸಿದೆ.
ಇತ್ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಯಾರು ಹೆಚ್ಚು ಗೆದ್ದವರು?
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ಆಸ್ಟ್ರೇಲಿಯಾ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದರೆ, ನ್ಯೂಜಿಲೆಂಡ್ 3 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಈ ಮೂಲಕ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಕೊನೆಯ 5 ಟಿ ಟ್ವೆಂಟಿ ಪಂದ್ಯಗಳ ಮುಖಾಮುಖಿಯಲ್ಲಿ ನ್ಯೂಜಿಲೆಂಡ್ ಮುನ್ನಡೆ ಸಾಧಿಸಿದೆ.
ಟಿ ಟ್ವೆಂಟಿ ವಿಶ್ವಕಪ್ ಮುಖಾಮುಖಿಯ ಮಾಹಿತಿ
ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಟಿ ಟ್ವೆಂಟಿ ವಿಶ್ವಕಪ್ ಇತಿಹಾಸದಲ್ಲಿ ಕೇವಲ ಒಂದೇ ಒಂದು ಪಂದ್ಯದಲ್ಲಿ ಸೆಣಸಾಟ ನಡೆಸಿವೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ವಿರುದ್ಧ ನ್ಯೂಜಿಲೆಂಡ್ ಗೆಲುವನ್ನು ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications