ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆ

T20 World Cup 2021: Harsha Bhogle picks his best XI of the tournament, No Indian included

ಕಳೆದ ತಿಂಗಳ 17ರಂದು ಆರಂಭವಾಗಿದ್ದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಕಳೆದ ಭಾನುವಾರದಂದು ಅಂತ್ಯಗೊಂಡಿದ್ದು ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಡಿದವು. ನವೆಂಬರ್‌ 14ರ ಭಾನುವಾರದಂದು ನಡೆದ ಫೈನಲ್ ಪಂದ್ಯದ ಮೂಲಕ ಅಧಿಕೃತವಾಗಿ ತೆರೆಬಿದ್ದಿದೆ. ಇನ್ನು ಈ ಬಾರಿಯ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಸೆಣಸಾಟ ನಡೆಸಿದವು. ಈ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ 8 ವಿಕೆಟ್‍ಗಳ ಅಮೋಘ ಜಯವನ್ನು ಸಾಧಿಸುವುದರ ಮೂಲಕ ಇದೇ ಮೊದಲ ಬಾರಿಗೆ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಟಿ20 ವಿಶ್ವಕಪ್ 2021 ಫೈನಲ್‌: ನ್ಯೂಜಿಲೆಂಡ್‌ ಸೋಲಿಸಲು ಸಿಎಸ್‌ಕೆಯ ಈ ತಂತ್ರವೇ ಕಾರಣ ಎಂದ ಫಿಂಚ್!ಟಿ20 ವಿಶ್ವಕಪ್ 2021 ಫೈನಲ್‌: ನ್ಯೂಜಿಲೆಂಡ್‌ ಸೋಲಿಸಲು ಸಿಎಸ್‌ಕೆಯ ಈ ತಂತ್ರವೇ ಕಾರಣ ಎಂದ ಫಿಂಚ್!

ಇನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 172 ರನ್ ಗಳಿಸಿತು. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಮಿಚೆಲ್ ಮಾರ್ಷ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಮತ್ತು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಹೀಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಪರ ಡೇವಿಡ್ ವಾರ್ನರ್ ಮತ್ತು ಮಿಚೆಲ್ ಮಾರ್ಷ್ ಅಬ್ಬರಿಸಿದರೆ, ನ್ಯೂಜಿಲೆಂಡ್ ತಂಡದ ಪರ ನಾಯಕ ಕೇನ್ ವಿಲಿಯಮ್ಸನ್ ಅಬ್ಬರಿಸಿದರು. ಇನ್ನು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯ ಮುಗಿದ ನಂತರ ಐಸಿಸಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿತು. ಹೀಗೆ ಐಸಿಸಿ ಮಾತ್ರವಲ್ಲದೆ ಹಲವಾರು ಮಾಜಿ ಕ್ರಿಕೆಟಿಗರು ಮತ್ತು ಕ್ರಿಕೆಟ್ ಕಾಮೆಂಟೇಟರ್ಸ್ ಕೂಡ ತಮ್ಮ ಪ್ರಕಾರ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಆಟಗಾರರನ್ನು ಒಳಗೊಂಡ ತಂಡಗಳನ್ನು ಪ್ರಕಟಿಸುತ್ತಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಪ್ರಕಟಿಸಿದ ಐಸಿಸಿ; ಭಾರತೀಯರೇ ಇಲ್ಲ!ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಪ್ರಕಟಿಸಿದ ಐಸಿಸಿ; ಭಾರತೀಯರೇ ಇಲ್ಲ!

ಅದೇ ರೀತಿ ಈ ಸಾಲಿಗೆ ಭಾರತದ ಕ್ರಿಕೆಟ್ ಕಾಮೆಂಟೇಟರ್ ಆಗಿರುವ ಹರ್ಷ ಭೋಗ್ಲೆ ಕೂಡ ಸೇರಿಕೊಂಡಿದ್ದು ತಮ್ಮ ಪ್ರಕಾರ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನೊಳಗೊಂಡ ತಂಡವನ್ನು ಪ್ರಕಟಿಸಿದ್ದಾರೆ. ಹರ್ಷ ಭೋಗ್ಲೆ ಪ್ರಕಟಿಸಿರುವ ತಂಡದಲ್ಲಿ ಪಾಕಿಸ್ತಾನದ ಮೂವರು ಆಟಗಾರರು ಹಾಗೂ ಇಂಗ್ಲೆಂಡ್, ಶ್ರೀಲಂಕಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿಂದ ತಲಾ ಇಬ್ಬರು ಆಟಗಾರರು ಹಾಗೂ ನಮೀಬಿಯಾ ತಂಡದಿಂದ ಓರ್ವ ಆಟಗಾರ ಸ್ಥಾನ ಪಡೆದುಕೊಂಡಿದ್ದಾರೆ.

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನವನ್ನು ನೀಡಿರುವ ಆಧಾರದ ಮೇಲೆ 11 ಆಟಗಾರರನ್ನು ಆಯ್ಕೆ ಮಾಡಿದ್ದೇನೆ ಎಂದು ಹರ್ಷ ಭೋಗ್ಲೆ ಹೇಳಿದ್ದಾರೆ. ಹೀಗೆ ಹರ್ಷ ಭೋಗ್ಲೆ ಪ್ರಕಾರ ಈ ಬಾರಿಯ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ 11 ಆಟಗಾರರ ಪಟ್ಟಿ ಹೀಗಿದೆ: ಬಾಬರ್ ಆಜಮ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಚರಿತ್ ಅಸಲಂಕಾ, ಐಡೆನ್ ಮಾರ್ಕ್ರಾಮ್, ಶೋಯೆಬ್ ಮಲಿಕ್, ಮೊಯಿನ್ ಅಲಿ, ವನಿಂದು ಹಸರಂಗಾ, ಡೇವಿಡ್ ವೈಸ್, ಶಾಹೀನ್ ಅಫ್ರಿದಿ, ಜೋಶ್ ಹ್ಯಾಜಲ್‌ವುಡ್ ಮತ್ತು ಅನ್ರಿಚ್ ನಾರ್ಟ್ಜೆ.

ಹರ್ಷ ಭೋಗ್ಲೆ ಪ್ರಕಟಿಸಿರುವ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನೊಳಗೊಂಡ ತಂಡದಲ್ಲಿ ಟೀಮ್ ಇಂಡಿಯಾದ ಯಾವ ಆಟಗಾರನಿಗೂ ಕೂಡ ಸ್ಥಾನವನ್ನು ನೀಡಿಲ್ಲ. ಹರ್ಷ ಭೋಗ್ಲೆ ಮಾತ್ರವಲ್ಲದೇ ಐಸಿಸಿ ಪ್ರಕಟಿಸಿರುವ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರ ತಂಡದಲ್ಲಿಯೂ ಕೂಡ ಟೀಮ್ ಇಂಡಿಯಾದ ಯಾವೊಬ್ಬ ಆಟಗಾರನಿಗೂ ಕೂಡ ಸ್ಥಾನವನ್ನು ನೀಡಲಾಗಿಲ್ಲ.

T20 ವಿಶ್ವಕಪ್ ಕಿರೀಟ ಆಸ್ಟ್ರೇಲಿಯಾ ಮುಡಿಗೆ: ಕಿವೀಸ್ ಗೆ ನಿರಾಸೆ | Oneindia Kannada

Story first published: Tuesday, November 16, 2021, 10:19 [IST]
Other articles published on Nov 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X