ಟಿ20 ವಿಶ್ವಕಪ್: ಈ ರೀತಿ ನಡೆದರೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವುದು ಪಕ್ಕಾ!

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೇಳಿಕೊಳ್ಳುವಂತಹ ಆರಂಭವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಲಿಲ್ಲ. ಟೂರ್ನಿಯ ಸೂಪರ್ 12 ಪಂದ್ಯಗಳು ಆರಂಭವಾಗುವ ಮುನ್ನ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಟೀಮ್ ಇಂಡಿಯಾ ಎರಡೂ ಪಂದ್ಯಗಳಲ್ಲಿ ಗೆಲ್ಲುವುದರ ಮೂಲಕ ಟೂರ್ನಿಯಲ್ಲಿ ಅಬ್ಬರಿಸುವ ಮುನ್ಸೂಚನೆ ನೀಡಿತ್ತು. ಆದರೆ ಸೂಪರ್ 12 ಸುತ್ತು ಆರಂಭವಾದ ನಂತರ ಟೀಮ್ ಇಂಡಿಯಾ ಅಭ್ಯಾಸ ಪಂದ್ಯದಲ್ಲಿ ತೋರಿದ್ದ ಪ್ರದರ್ಶನವನ್ನು ನೀಡುವಲ್ಲಿ ವಿಫಲವಾಯಿತು. ಸೂಪರ್ 12 ಸುತ್ತಿನಲ್ಲಿ ತನ್ನ ಮೊದಲೆರಡು ಪಂದ್ಯಗಳನ್ನು ಹೀನಾಯವಾಗಿ ಸೋತ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸುವಲ್ಲಿ ಕೂಡ ಹಿನ್ನಡೆಯನ್ನು ಅನುಭವಿಸಿತು.
ಹೌದು, ಅಕ್ಟೋಬರ್ 24ರ ಭಾನುವಾರದಂದು ನಡೆದಿದ್ದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ತನ್ನ ಬದ್ಧ ವೈರಿಯಾದ ಪಾಕಿಸ್ತಾನ ವಿರುದ್ಧ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೀನಾಯವಾದ ಸೋಲನ್ನು ಅನುಭವಿಸಿತ್ತು. ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾವನ್ನು ಪಾಕಿಸ್ತಾನ ವಿಶ್ವಕಪ್ ಹಣಾಹಣಿಯೊಂದರಲ್ಲಿ ಸೋಲಿಸಿದ ಮೈಲಿಗಲ್ಲನ್ನು ಈ ಪಂದ್ಯದ ಮೂಲಕ ನೆಟ್ಟಿತ್ತು. ಅಕ್ಟೋಬರ್ 31ರ ಭಾನುವಾರದಂದು ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ನ್ಯೂಜಿಲೆಂಡ್ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತ್ತು.
ಹೀಗೆ ಟೂರ್ನಿಯಲ್ಲಿ ತನ್ನ ಮೊದಲೆರಡು ಪಂದ್ಯಗಳಲ್ಲಿ ಹೀನಾಯವಾಗಿ ಸೋತ ಟೀಂ ಇಂಡಿಯಾ ನವೆಂಬರ್ 3ರಂದು ಅಫ್ಘಾನಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ 66 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸುವುದರ ಮೂಲಕ ಟೂರ್ನಿಯಲ್ಲಿ ತನ್ನ ಮೊದಲನೇ ಜಯವನ್ನು ಸಾಧಿಸಿತು. ನಂತರ ಟೂರ್ನಿಯಲ್ಲಿನ ತನ್ನ ನಾಲ್ಕನೇ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಸೆಣಸಾಡಿದ ಟೀಮ್ ಇಂಡಿಯಾ 6.3 ಓವರ್‌ಗಳಲ್ಲಿ 89 ರನ್ ಬಾರಿಸುವುದರ ಮೂಲಕ ಸ್ಕಾಟ್ಲೆಂಡ್ ನೀಡಿದ್ದ 86 ರನ್‌ಗಳ ಗುರಿಯನ್ನು ಸುಲಭವಾಗಿ ಬೆನ್ನತ್ತಿ ಭರ್ಜರಿ ಜಯ ಸಾಧಿಸಿ ಸದ್ಯ 4 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ತೃತೀಯ ಸ್ಥಾನದಲ್ಲಿದ್ದು +1.169 ನೆಟ್ ರನ್ ರೇಟ್ ಗಳಿಸಿಕೊಂಡಿದೆ. ಟೀಮ್ ಇಂಡಿಯಾ ಸಂಪಾದಿಸಿರುವ ಈ ನೆಟ್ ರನ್ ರೇಟ್‌ನ್ನು ಬೇರೆ ಯಾವುದೇ ತಂಡವೂ ಕೂಡ ಪಡೆದುಕೊಂಡಿಲ್ಲ. ಹೀಗಾಗಿ ಸೆಮಿಫೈನಲ್ ಪ್ರವೇಶಿಸುವಲ್ಲಿ ನೆಟ್ ರನ್ ರೇಟ್ ಆಧಾರವಾದರೆ ಟೀಮ್ ಇಂಡಿಯಾಗೆ ಇದೊಂದು ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ. ಸದ್ಯ ಉಳಿದಿರುವ ಪಂದ್ಯಗಳಲ್ಲಿ ಯಾವ ರೀತಿಯ ಫಲಿತಾಂಶ ಬಂದರೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲಿದೆ ಎಂಬುದರ ಮಾಹಿತಿ ಈ ಕೆಳಕಂಡಂತಿದೆ..

ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಸೋಲಲೇಬೇಕು
ಟೀಮ್ ಇಂಡಿಯಾ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಬೇಕಾದರೆ ಮುಖ್ಯವಾಗಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋಲಲೇಬೇಕಾಗಿದೆ. ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತರೆ ಮಾತ್ರ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶ ಲಭಿಸಲಿದೆ. ಒಂದುವೇಳೆ ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್ ಜಯ ಸಾಧಿಸಿದರೆ ಟೀಮ್ ಇಂಡಿಯಾ ಸೆಮಿಫೈನಲ್ ಕನಸು ಬಾಡಿ ಹೋಗಲಿದೆ.

ನ್ಯೂಜಿಲೆಂಡ್ ಸೋತರೆ ನೆಟ್ ರನ್ ರೇಟ್ ಆಧಾರದ ಮೇಲೆ ಟೀಮ್ ಇಂಡಿಯಾ ಸೆಮಿಫೈನಲ್ ತಲುಪಬಹುದು
ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತಿದ್ದೇ ಆದಲ್ಲಿ ಟೀಮ್ ಇಂಡಿಯಾ ಮತ್ತು ಅಫ್ಘಾನಿಸ್ತಾನ ತಂಡಗಳಿಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶಗಳು ಹೆಚ್ಚಲಿವೆ. ಸದ್ಯ ನ್ಯೂಜಿಲೆಂಡ್ ಮತ್ತು ಅಫ್ಗಾನಿಸ್ತಾನ ತಂಡಗಳಿಗಿಂತ ಭಾರತದ ನೆಟ್ ರನ್ ರೇಟ್ ಅಧಿಕವಾಗಿರುವ ಕಾರಣ ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯ ಮುಗಿದ ನಂತರ ಟೀಮ್ ಇಂಡಿಯಾಗೆ ಎಷ್ಟು ಅಂತರದಲ್ಲಿ ನಮೀಬಿಯಾ ವಿರುದ್ಧ ಗೆದ್ದರೆ ಸೆಮಿಫೈನಲ್ ಪ್ರವೇಶಿಸಬಹುದು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಹೀಗೆ ನ್ಯೂಜಿಲೆಂಡ್ ಸೋತರೆ ಟೀಮ್ ಇಂಡಿಯಾಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶಗಳು ಹೆಚ್ಚು ಇರಲಿವೆ.

ನಮೀಬಿಯಾ ವಿರುದ್ಧ ಟೀಮ್ ಇಂಡಿಯಾ ದೊಡ್ಡ ಅಂತರದಲ್ಲಿ ಗೆಲ್ಲಬೇಕು
ಭಾನುವಾರ ಆಫ್ಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆಯಲಿರುವ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋಲನ್ನು ಅನುಭವಿಸಿದರೆ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಎಷ್ಟು ಅಂತರದಿಂದ ಗೆಲ್ಲಬೇಕು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ. ಹೌದು, ಅಫ್ಘಾನಿಸ್ತಾನದ ವಿರುದ್ಧ ನ್ಯೂಜಿಲೆಂಡ್ ಸೋತರೆ ಅಫ್ಘಾನಿಸ್ತಾನದ ನೆಟ್ ರನ್ ರೇಟ್ ಮತ್ತಷ್ಟು ಹೆಚ್ಚಲಿದ್ದು, ಟೀಮ್ ಇಂಡಿಯಾ ಸೋಮವಾರ ನಡೆಯಲಿರುವ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ಆಫ್ಘಾನಿಸ್ತಾನಕ್ಕಿಂತ ಉತ್ತಮ ನೆಟ್ ರನ್ ರೇಟ್ ಹೊಂದಿದರೆ ಸೆಮಿಫೈನಲ್ ಪ್ರವೇಶಿಸಬಹುದಾಗಿದೆ.
ಇನ್ನು ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ತಂಡಗಳ ನಡುವಿನ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವೇನಾದರೂ ಜಯ ಸಾಧಿಸಿದರೆ ಟೀಮ್ ಇಂಡಿಯಾ ಅಧಿಕೃತವಾಗಿ ಟೂರ್ನಿಯಿಂದ ಹೊರ ಬೀಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications