ಟಿ ಟ್ವೆಂಟಿ ವಿಶ್ವಕಪ್: ಸೆಮಿಫೈನಲ್ ಪ್ರವೇಶಿಸಬಹುದಾದ ತಂಡಗಳನ್ನು ಹೆಸರಿಸಿದ ಗೌತಮ್ ಗಂಭೀರ್

ಕ್ರಿಕೆಟ್ ಜಗತ್ತಿನಲ್ಲಿ ಸದ್ಯ ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಹವಾ ಜೋರಾಗಿದೆ. ಈ ಸರಣಿ ಮುಗಿದ ಬೆನ್ನಲ್ಲೇ ಸೆಪ್ಟೆಂಬರ್ ತಿಂಗಳಿನಲ್ಲಿ 14 ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಯುಎಇಯಲ್ಲಿ ಮುಂದುವರಿಯಲಿದೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ ಕೆಲವೇ ದಿನಗಳಲ್ಲಿ ಯುಎಇಯಲ್ಲಿಯೇ ಅಕ್ಟೋಬರ್ 17 ರಿಂದ ಬಹುನಿರೀಕ್ಷಿತ ಕ್ರಿಕೆಟ್ ಟೂರ್ನಿಯಾದ ಟಿ ಟ್ವೆಂಟಿ ವಿಶ್ವಕಪ್ ಆರಂಭವಾಗಲಿದ್ದು ಈಗಿನಿಂದಲೇ ಕ್ರಿಕೆಟ್ ಜಗತ್ತಿನಲ್ಲಿ ಸದ್ದು ಮಾಡಲಾರಂಭಿಸಿದೆ.

ಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರುಟಿ ಟ್ವೆಂಟಿ ವಿಶ್ವಕಪ್‌ಗೆ ಹಾರ್ದಿಕ್ ಪಾಂಡ್ಯ ಬದಲು ಆಯ್ಕೆಯಾಗಬಲ್ಲ 3 ಆಟಗಾರರು

ಕಳೆದ ಮಂಗಳವಾರದಂದು ಐಸಿಸಿ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಲಿರುವ ಟಿ ಟ್ವೆಂಟಿ ವಿಶ್ವಕಪ್ 2021ರ ಟೂರ್ನಿಯಲ್ಲಿ ಭಾಗವಹಿಸಲಿರುವ ತಂಡಗಳ ಗುಂಪು, ವೇಳಾಪಟ್ಟಿ ಮತ್ತು ಪಂದ್ಯಗಳು ನಡೆಯುವ ಸ್ಥಳಗಳ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಂಡಿತ್ತು. ಹೀಗೆ ಲೀಗ್ ಹಂತದಲ್ಲಿ ಯಾವ ತಂಡ ಯಾವ ತಂಡದ ವಿರುದ್ಧ ಸೆಣಸಾಡಲಿದೆ ಎಂಬ ಮಾಹಿತಿ ಸಿಕ್ಕ ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮಾಜಿ ಕ್ರಿಕೆಟಿಗರು ಹಾಗೂ ಕ್ರೀಡಾ ಪಂಡಿತರು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಯಾವ ತಂಡ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ ಎಂಬುದರ ಕುರಿತು ಸಾಕಷ್ಟು ಚರ್ಚೆಗಳನ್ನು ನಡೆಸುತ್ತಿದ್ದು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರಟಿಟ್ವೆಂಟಿ ವಿಶ್ವಕಪ್‌: 15 ಆಟಗಾರರ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಸ್ಥಾನ ಪಡೆದ ಬಲಿಷ್ಠ ಆಟಗಾರ

ಇದೀಗ ಈ ಸಾಲಿಗೆ ಭಾರತದ ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ಗೌತಮ್ ಗಂಭೀರ್ ಕೂಡ ಸೇರಿಕೊಂಡಿದ್ದು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಯಾವ ಯಾವ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ ಎಂಬುದರ ಕುರಿತು ಭವಿಷ್ಯವನ್ನು ನುಡಿದಿದ್ದಾರೆ. ನಾಲ್ಕು ಬಲಿಷ್ಠ ತಂಡಗಳನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಲಿವೆ ಎಂದು ಹೆಸರಿಸಿರುವ ಗೌತಮ್ ಗಂಭೀರ್ ಈ ಕೆಳಕಂಡಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಈ ತಂಡಗಳು ಸೆಮಿಫೈನಲ್ ಪ್ರವೇಶಿಸುವುದು ಫಿಕ್ಸ್ ಎಂದ ಗಂಭೀರ್

ಈ ತಂಡಗಳು ಸೆಮಿಫೈನಲ್ ಪ್ರವೇಶಿಸುವುದು ಫಿಕ್ಸ್ ಎಂದ ಗಂಭೀರ್

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಸೆಮಿ ಫೈನಲ್ ಪ್ರವೇಶಿಸಲಿರುವ ತಂಡಗಳ ಕುರಿತು ಮಾತನಾಡಿದ ಗೌತಮ್ ಗಂಭೀರ್ ಭಾರತ, ನ್ಯೂಜಿಲೆಂಡ್, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೆಮಿಫೈನಲ್ ಪ್ರವೇಶಿಸುವಲ್ಲಿ ಯಶಸ್ವಿಯಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಹೆಸರು ತೆಗೆದುಕೊಳ್ಳದ ಗಂಭೀರ್

ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ಹೆಸರು ತೆಗೆದುಕೊಳ್ಳದ ಗಂಭೀರ್

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಓಡುವ ಕುದುರೆಗಳ ಪೈಕಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳ ಹೆಸರುಗಳು ಕೂಡಾ ಕೇಳಿ ಬರುತ್ತಿವೆ. ಕೆಲವರಂತೂ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಟ್ರೋಫಿಗಾಗಿ ಸೆಣಸಾಡುವುದು ಖಚಿತ ಎಂದು ಲೆಕ್ಕಾಚಾರ ಹಾಕುತ್ತಿದ್ದಾರೆ. ಆದರೆ ಗೌತಮ್ ಗಂಭೀರ್ ಮಾತ್ರ ಈ ಎರಡು ತಂಡಗಳ ಹೆಸರುಗಳನ್ನು ತೆಗೆದುಕೊಳ್ಳದೇ ಕಡೆಗಣಿಸಿದ್ದಾರೆ.

RCB ಪರ ಈ ಆಟಗಾರ ಈ ವರ್ಷ ಆಡುವುದಿಲ್ಲ | Oneindia Kannada
ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪಂದ್ಯಗಳು:

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪಂದ್ಯಗಳು:

* ಭಾರತ vs ಪಾಕಿಸ್ತಾನ - ಅಕ್ಟೋಬರ್ 24, ದುಬೈನಲ್ಲಿ ಸಂಜೆ 6 ಗಂಟೆಗೆ

* ಭಾರತ vs ನ್ಯೂಜಿಲೆಂಡ್‌ - ಅಕ್ಟೋಬರ್ 31, ದುಬೈನಲ್ಲಿ ಸಂಜೆ 6 ಗಂಟೆಗೆ

* ಭಾರತ vs ಅಫ್ಘಾನಿಸ್ತಾನ - ನವೆಂಬರ್‌ 3, ಅಬುಧಾಬಿಯಲ್ಲಿ ಸಂಜೆ 6 ಗಂಟೆಗೆ

* ಭಾರತ vs ಅರ್ಹತಾ ಸುತ್ತಿನ ಬಿ ಗುಂಪಿನ ಟಾಪ್ 1 ತಂಡ - ನವೆಂಬರ್‌ 5, ದುಬೈನಲ್ಲಿ ಸಂಜೆ 6 ಗಂಟೆಗೆ

* ಭಾರತ vs ಅರ್ಹತಾ ಸುತ್ತಿನ ಎ ಗುಂಪಿನ ಟಾಪ್ 2 ತಂಡ - ನವೆಂಬರ್‌ 8, ದುಬೈನಲ್ಲಿ ಸಂಜೆ 6 ಗಂಟೆಗೆ.

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 22 - October 28 2021, 07:30 PM
ಆಸ್ಟ್ರೇಲಿಯಾ
ಶ್ರೀಲಂಕಾ
Predict Now

For Quick Alerts
ALLOW NOTIFICATIONS
For Daily Alerts
Story first published: Friday, August 20, 2021, 14:36 [IST]
Other articles published on Aug 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X