For Quick Alerts
ALLOW NOTIFICATIONS  
For Daily Alerts
 

ಭಾರತ vs ಪಾಕ್: ಕೈಕೊಟ್ಟ ಓಪನರ್ಸ್, ಕೊಹ್ಲಿ-ಪಂತ್ ಆಸರೆ; ಪಾಕಿಸ್ತಾನಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದ ಭಾರತ

T20 World Cup 2021: India have given the target of 152 runs to pakistan

ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ( ಅಕ್ಟೋಬರ್ 24 ) ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸುತ್ತಿವೆ.

ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನದ ನಾಯಕ ಬಾಬರ್ ಅಜಮ್ ಫೀಲ್ಡಿಂಗ್ ಆಯ್ದುಕೊಂಡು ಮೊದಲು ಬ್ಯಾಟಿಂಗ್ ಮಾಡುವ ಅವಕಾಶವನ್ನು ಭಾರತ ತಂಡಕ್ಕೆ ನೀಡಿದರು. ಹೀಗೆ ಮೊದಲು ಬ್ಯಾಟಿಂಗ್ ಆರಂಭಿಸಿದ ಭಾರತ ತಂಡದ ಪರ ಆರಂಭಿಕ ಆಟಗಾರರಾಗಿ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಕಣಕ್ಕಿಳಿದರು. ಆದರೆ, ಟೀಮ್ ಇಂಡಿಯಾ ಆರಂಭದಲ್ಲಿಯೇ ಆರಂಭಿಕ ಆಟಗಾರರ ವಿಕೆಟ್‍ಗಳನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಯಿತು.

ತಂಡದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮೊದಲನೇ ಓವರ್‌ನಲ್ಲಿಯೇ ಶಾಹೀನ್ ಅಫ್ರಿದಿಗೆ ತಾವು ಎದುರಿಸಿದ ಮೊದಲ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿದರು. ಹೀಗೆ ರೋಹಿತ್ ಶರ್ಮಾ ಶೂನ್ಯಕ್ಕೆ ಪೆವಿಲಿಯನ್ ಸೇರಿಕೊಂಡರೆ, ತಂಡದ ಮತ್ತೋರ್ವ ಆರಂಭಿಕ ಆಟಗಾರ ಕೆಎಲ್ ರಾಹುಲ್ ಮೂರನೇ ಓವರ್‌ನ ಮೊದಲ ಎಸೆತದಲ್ಲಿ ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿದರು. ಕೆಎಲ್ ರಾಹುಲ್ ಕೂಡ ಉತ್ತಮ ಆಟವನ್ನು ಆಡುವಲ್ಲಿ ಎಡವಿ 3 ರನ್ ಗಳಿಸಿ ನಿರಾಸೆ ಮೂಡಿಸಿದರು. ಹೀಗೆ ಟೀಮ್ ಇಂಡಿಯಾ 6 ರನ್‌ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿಕೊಂಡಿತ್ತು. ಅತ್ತ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸೂರ್ಯಕುಮಾರ್ ಯಾದವ್ ಉತ್ತಮ ಇನ್ನಿಂಗ್ಸ್ ಕಟ್ಟುವ ಭರವಸೆ ಮೂಡಿಸಿದರಾದರೂ ಸೂರ್ಯಕುಮಾರ್ ಯಾದವ್ 11 ರನ್ ಗಳಿಸಿ ಔಟ್ ಆದರು. ಈ ಸಂದರ್ಭದಲ್ಲಿ ಟೀಮ್ ಇಂಡಿಯಾ 5.4 ಓವರ್‌ಗಳಲ್ಲಿ 31 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಕೆಟ್ಟ ಆರಂಭವನ್ನು ಮಾಡಿತ್ತು.

ಆದರೆ ತಂಡದ ನಾಯಕ ವಿರಾಟ್ ಕೊಹ್ಲಿ ಮಾತ್ರ ತಮ್ಮ ಜವಾಬ್ದಾರಿಯುತ ಆಟವನ್ನು ಮುಂದುವರೆಸಿದ 57 ರನ್ ಬಾರಿಸಿದರು. ವಿರಾಟ್ ಕೊಹ್ಲಿ ಜೊತೆಗೆ 53 ರನ್ ಗಳ ಜತೆಯಾಟವಾಡಿದ ರಿಷಭ್ ಪಂತ್ 39 ರನ್ ಗಳಿಸಿ ಔಟಾದರು. ಹೀಗೆ ಸಂಕಷ್ಟಕ್ಕೆ ಸಿಲುಕಿ ಅಲ್ಪ ಮೊತ್ತದತ್ತ ಸಾಗಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ಆಪದ್ಬಾಂಧವರಾಗಿ ನಿಂತರು. ಇನ್ನುಳಿದಂತೆ ರವೀಂದ್ರ ಜಡೇಜಾ 13, ಹಾರ್ದಿಕ್ ಪಾಂಡ್ಯ 11, ಭುವನೇಶ್ವರ್ ಕುಮಾರ್ ಅಜೇಯ 5 ಮತ್ತು ಮೊಹಮ್ಮದ್ ಶಮಿ ಅಜೇಯ 0 ರನ್ ಕಲೆ ಹಾಕಿದರು. ಈ ಮೂಲಕ ಟೀಮ್ ಇಂಡಿಯಾ ಪಾಕಿಸ್ತಾನ ವಿರುದ್ಧದ ಈ ಮಹತ್ವದ ಪಂದ್ಯದಲ್ಲಿ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 151 ರನ್ ಗಳಿಸಿದ್ದು 152 ರನ್‌ಗಳ ಸ್ಪರ್ಧಾತ್ಮಕ ಗುರಿಯನ್ನು ನೀಡಿದೆ.

ಇನ್ನು ಪಾಕಿಸ್ತಾನ ತಂಡದ ಪರ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಿದರು. ತಂಡದ ಪ್ರಮುಖ ಬೌಲರ್ ಶಾಹಿನ್ ಅಫ್ರಿದಿ ಭಾರತ ತಂಡದ ಆರಂಭಿಕ ಆಟಗಾರರಾದ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಅವರ ವಿಕೆಟ್‍ಗಳನ್ನು ಬೇಗನೆ ಪಡೆದು ಟೀಮ್ ಇಂಡಿಯಾ ಮೇಲೆ ಒತ್ತಡವನ್ನು ಹೇರಿದರು. ಹೀಗೆ ಉತ್ತಮ ಪ್ರದರ್ಶನ ನೀಡಿದ ಶಾಹೀನ್ ಅಫ್ರಿದಿ 3 ವಿಕೆಟ್ ಪಡೆದರೆ ಪಾಕಿಸ್ತಾನ ತಂಡದ ಇನ್ನುಳಿದ ಬೌಲರ್‌ಗಳಾದ ಹಸನ್ ಅಲಿ 2 ವಿಕೆಟ್ ಹಾಗೂ ಶಬದ್ ಖಾನ್ ಮತ್ತು ಹ್ಯಾರಿಸ್ ರೌಫ್ ತಲಾ 1 ವಿಕೆಟ್ ಪಡೆದರು.

Story first published: Sunday, October 24, 2021, 21:44 [IST]
Other articles published on Oct 24, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+