ಟಿ20 ವಿಶ್ವಕಪ್‌: ಇಂದೇ ನಡೆಯಲಿದೆ ಟೀಮ್ ಇಂಡಿಯಾ ಆಯ್ಕೆ: ಸಮಯ ಹಾಗೂ ಇತರ ಮಾಹಿತಿ

ಮುಂಬೈ, ಸೆಪ್ಟೆಂಬರ್ 8: ಒಂದೆಡೆ ಟೀಮ್ ಇಂಡಿಯಾ ಇಂಗ್ಲೆಂಡ್‌ನಲ್ಲಿದ್ದು ಟೆಸ್ಟ್ ಸರಣಿಯಲ್ಲಿ ಅಂತಿಮ ಘಟ್ಟದಲ್ಲಿದ್ದರೆ ಮತ್ತೊಂದೆಡೆ ಟಿ20 ವಿಶ್ವಕಪ್‌ನ ವಿಚಾರವಾಗಿ ಅಭಿಮಾನಿಗಳ ಕುತೂಹಲ ಹೆಚ್ಚಾಗುತ್ತಿದೆ. ಟಿ20 ವಿಶ್ವಕಪ್‌ನಲ್ಲಿ ಭಾಗಿಯಾಗುವ ಭಾರತ ತಂಡದಲ್ಲಿ ಯಾರೆಲ್ಲಾ ಆಡಬಹುದು ಎಂಬ ಬಗ್ಗೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಸಾಕಷ್ಟು ಕಾತುರತೆಯನ್ನು ಹೊಂದಿದ್ದಾರೆ. ಈ ಎಲ್ಲಾ ಕಾತುರತೆಗೆ ಪೂರ್ಣವಿರಾಮ ಹಾಕಲು ಬಿಸಿಸಿಐ ಸಜ್ಜಾಗಿದೆ. ಟಿ20 ವಿಶ್ವಕಪ್‌ನಲ್ಲಿ ಭಾಗಿಯಾಗಲಿರುವ ಟೀಮ್ ಇಂಡಿಯಾದ ಸದಸ್ಯರ ಬಳಗವನ್ನು ಬಿಸಿಸಿಐ ಘೋಷಣೆಗೆ ಸಜ್ಜಾಗಿದೆ.

ಟಿ20 ವಿಶ್ವಕಪ್‌ಗೆ ದಿನಗಣನೆ ಆರಂಭವಾಗುತ್ತಿರುವ ಕಾರಣದಿಂದಾಗಿ ಟೀಮ್ ಇಂಡಿಯಾದ ಸದಸ್ಯರ ತಂಡವನ್ನು ಬಿಸಿಸಿಐ ಇಂದೇ ಘೋಷಣೆ ಮಾಡಲಿದೆ. ಸೆಪ್ಟಂಬರ್ 8 ರಾತ್ರಿ 9 ಗಂಟೆಗೆ ಟೀಮ್ ಇಂಡಿಯಾದ ಬಳಗವನ್ನು ಘೋಷಣೆ ಮಾಡಲು ಬಿಸಿಸಿಐ ಸಜ್ಜಾಗಿದೆ. ಈ ಬಗ್ಗೆ ಬಿಸಿಸಿಐ ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದು ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಿದೆ. ಈ ಮೂಲಕ ಟೀಮ್ ಇಂಡಿಯಾ ಸ್ಕ್ವಾಡ್ ಘೋಷಣೆಯ ವಿಚಾರವಾಗಿದ್ದ ಪ್ರಶ್ನೆಗಳಿಗೆ ತೆರೆ ಬೀಳಲಿದೆ.

ಭಾರತ vs ಇಂಗ್ಲೆಂಡ್: ಅಂತಿಮ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 3 ಪ್ರಮುಖ ಬದಲಾವಣೆ ಸಂಭವಭಾರತ vs ಇಂಗ್ಲೆಂಡ್: ಅಂತಿಮ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ 3 ಪ್ರಮುಖ ಬದಲಾವಣೆ ಸಂಭವ

ಬಿಸಿಸಿಐ ಆಯೋಜನೆ ಮಾಡುತ್ತಿರುವ ಈ ಬಾರಿಯ ಟಿ20 ವಿಶ್ವಕಪ್ ಭಾರತದಲ್ಲಿ ನಡೆಯಬೇಕಾಗಿತ್ತು. ಆದರೆ ಭಾರತದಲ್ಲಿ ಕೊರೊನಾವೈರಸ್‌ನ ಆತಂಕ ಇರುವ ಕಾರಣದಿಂದಾಗಿ ಯುಎಇ ಹಾಗೂ ಒಮಾನ್‌ಗೆ ವಿಶ್ವಕಪ್‌ನ ಪಂದ್ಯಗಳನ್ನು ಸ್ಥಾಳಾಂತರಿಸಲಾಗಿದೆ. ಅಕ್ಟೋಬರ್-ನವೆಂಬರ್‌ನಲ್ಲಿ ಈ ಟಿ20 ವಿಶ್ವಕಪ್‌ನ ಪಂದ್ಯಗಳು ನಡೆಯಲಿದೆ.

ಅತ್ಯಂತ ನಿರ್ಣಾಯಕವಾಗಿರುವ ಆಯ್ಕೆ ಸಮಿತಿಯ ಈ ಸಭೆಯಲ್ಲಿ ಆಯ್ಕೆ ಸಮಿತಿಯ ಸಂಚಾಲಕರು ಆಗಿರುವ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಭಾಗಿಯಾಗುವ ನಿರೀಕ್ಷೆಯಿದೆ. ಸಮಯ 9 ಗಂಟೆಗೆ ವರ್ಚುವಲ್ ಮಾಧ್ಯಮಗೋಷ್ಠಿಯ ಮೂಲಕ ಟೀಮ್ ಇಂಡಿಯಾ ಸದಸ್ಯರ ಘೋಷಣೆಯಲ್ಲಿ ಆಯ್ಕೆ ಸಮಿತಿ ಮಾಡಲಿದೆ.

ಟಿ20 ವಿಶ್ವಕೊ್‌ಗಾಗಿ ಬಹುತೇಕ ದೇಶಗಳ ಕ್ರಿಕೆಟ್ ಮಂಡಳಿಗಳು 15 ಸದಸ್ಯರ ತಂಡವನ್ನು ಘೋಷಿಸಿದೆ. ಆದರೆ ಬಿಸಿಸಿಐ 18 ಅಥವಾ 20 ಸದಸ್ಯರ ತಂಡವನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಕೊರೊನಾವೈರಸ್‌ನ ಕಾರಣದಿಂದಾಗಿ ಬಿಸಿಸಿಐ ಸ್ಕ್ವಾಡ್‌ನ ಸಾಮರ್ಥ್ಯವನ್ನು 30ಕ್ಕೆ ಹೆಚ್ಚಿಸಲು ಅವಕಾಶ ನೀಡಿದೆ. ಇದಕ್ಕೂ ಹಿಂದಿನ ಆವೃತ್ತಿಯಲ್ಲಿ 23 ಸದಸ್ಯರಿಗೆ ಅವಕಾಶ ಕಲ್ಪಿಸಿತ್ತು ಐಸಿಸಿ. ಈ ಸಂಖ್ಯೆ ಸಹಾಯಕ ಸಿಬ್ಬಂದಿಗಳನ್ನು ಸೇರಿಸಿಕೊಂಡಿರಬೇಕು. ಯಾವುದೇ ತಂಡ 30ಕ್ಕಿಂತ ಹೆಚ್ಚಿನ ಸದಸ್ಯರ ಸ್ಕ್ವಾಡ್‌ ಕರೆದುಕೊಂಡು ಹೋಗಲು ಅವಕಾಶವಿದೆ. ಆದರೆ ಇವುಗಳ ವೆಚ್ಚವನ್ನು ಆಯಾ ದೇಶಗಳ ಕ್ರಿಕೆಟ್ ಮಂಡಳಿಗಳು ಭರಿಸಬೇಕಾಗುತ್ತದೆ.

ಇಂಗ್ಲೆಂಡ್‌ಗೆ ಡ್ರಾ ಮಾಡಿಕೊಳ್ಳುವ ಯೋಗ್ಯತೆಯೂ ಇಲ್ಲ ಎಂಬುದು ನಾಚಿಕೆಗೇಡು; ಕಿಡಿಕಾರಿದ ಆಂಗ್ಲ ಕ್ರಿಕೆಟಿಗ!ಇಂಗ್ಲೆಂಡ್‌ಗೆ ಡ್ರಾ ಮಾಡಿಕೊಳ್ಳುವ ಯೋಗ್ಯತೆಯೂ ಇಲ್ಲ ಎಂಬುದು ನಾಚಿಕೆಗೇಡು; ಕಿಡಿಕಾರಿದ ಆಂಗ್ಲ ಕ್ರಿಕೆಟಿಗ!

ಟೀಮ್ ಇಂಡಿಯಾದಲ್ಲಿ 13-15 ಸದಸ್ಯರು ಖಂಡಿಯಾ ಆಯ್ಕೆಯಾಗುವಂತಾ ಪಟ್ಟಿಯಲ್ಲಿದ್ದಾರೆ. ಆದರೆ ಕೆಲ ಸ್ಥಾನಗಳ ಬಗ್ಗೆ ಆಯ್ಕೆ ಸಮಿತಿಯ ಸದಸ್ಯರು ಚರ್ಚೆ ನಡೆಸಿ ವಿಶ್ಲೇಷಣೆ ಮಾಡಲಿದ್ದಾರೆ.

ಟೀಮ್ ಇಂಡಿಯಾ ಸಂಭಾವ್ಯ ತಂಡ: ಕೆಎಲ್ ರಾಹುಲ್, ರೋಹಿತ್ ಶರ್ಮಾ (ಉಪ ನಾಯಕ), ವಿರಾಟ್ ಕೊಹ್ಲಿ (ನಾಯಕ), ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಶಿಖರ್ ಧವನ್
ಸಂಭಾವ್ಯ ಮೀಸಲು ಆಟಗಾರರು: ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ಪೃಥ್ವಿ ಶಾ, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ

ಐಸಿಸಿ ಟಿ20 ವಿಶ್ವಕಪ್ 2021 ಊಹಿಸು
Match 13 - October 23 2021, 03:30 PM
ಆಸ್ಟ್ರೇಲಿಯಾ
ದಕ್ಷಿಣ ಆಫ್ರಿಕಾ
Predict Now

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Wednesday, September 8, 2021, 18:16 [IST]
Other articles published on Sep 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X