ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್: ಭಾರತ vs ಆಸ್ಟ್ರೇಲಿಯಾ ಅಭ್ಯಾಸ ಪಂದ್ಯದಿಂದ ಕೊಹ್ಲಿ ಔಟ್, ಟಾಸ್ ವರದಿ & ಪ್ಲೇಯಿಂಗ್ XI

T20 World Cup 2021: India vs Australia Warm Up Match Toss Report, Live Score and live streaming

ಕಳೆದ ಭಾನುವಾರದಿಂದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಅರ್ಹತಾ ಸುತ್ತಿನ ಪಂದ್ಯಗಳು ಆರಂಭವಾಗಿದ್ದು ಬಹುನಿರೀಕ್ಷಿತ ಟೂರ್ನಿ ಚಾಲನೆ ಪಡೆದುಕೊಂಡಿದೆ. ಈ ಅರ್ಹತಾ ಸುತ್ತಿನ ಪಂದ್ಯಗಳ ಜೊತೆಗೆ ವಿವಿಧ ತಂಡಗಳ ಅಭ್ಯಾಸ ಪಂದ್ಯಗಳು ಕೂಡ ನಡೆಯುತ್ತಿದ್ದು, ಟೀಮ್ ಇಂಡಿಯಾ ಇಂದು ( ಅಕ್ಟೋಬರ್ 20 ) ತನ್ನ ಎರಡನೇ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೆಣಸಾಡುತ್ತಿದೆ.

ಟಿ20 ವಿಶ್ವಕಪ್: ಅರ್ಹತಾ ಸುತ್ತಿನ ಪಂದ್ಯದಲ್ಲಿ ಒಮಾನ್ ವಿರುದ್ಧ ಬಾಂಗ್ಲಾದೇಶಕ್ಕೆ ಜಯಟಿ20 ವಿಶ್ವಕಪ್: ಅರ್ಹತಾ ಸುತ್ತಿನ ಪಂದ್ಯದಲ್ಲಿ ಒಮಾನ್ ವಿರುದ್ಧ ಬಾಂಗ್ಲಾದೇಶಕ್ಕೆ ಜಯ

ದುಬೈನ ಐಸಿಸಿ ಅಕಾಡೆಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಈ ಅಭ್ಯಾಸ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದಿರುವ ಆಸ್ಟ್ರೇಲಿಯಾದ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದುಕೊಂಡಿರುವ ಕಾರಣದಿಂದಾಗಿ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸಾರಥ್ಯವನ್ನು ರೋಹಿತ್ ಶರ್ಮಾ ವಹಿಸಿಕೊಂಡಿದ್ದಾರೆ. ಟಾಸ್ ಮುಗಿದ ಬಳಿಕ ಮಾತನಾಡಿದ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಶಮಿ ಇಬ್ಬರು ಕೂಡ ಈ ಪಂದ್ಯದಲ್ಲಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಘೋಷಣೆಯನ್ನು ಮಾಡಿದರು. ಇತ್ತೀಚೆಗಷ್ಟೇ ನಡೆದ ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ರೋಹಿತ್ ಶರ್ಮಾ ವಿಶ್ರಾಂತಿ ಪಡೆದುಕೊಂಡಿದ್ದರು ಮತ್ತು ಇದೀಗ ಆಸ್ಟ್ರೇಲಿಯಾ ವಿರುದ್ಧದ ಈ ಅಭ್ಯಾಸ ಪಂದ್ಯದಲ್ಲಿ ವಿರಾಟ್ ಕೊಹ್ಲಿ ವಿಶ್ರಾಂತಿ ತೆಗೆದುಕೊಂಡಿದ್ದಾರೆ.

'ಕೂ' ಸೇರಿದ 15 ದಿನಗಳಲ್ಲೇ ವಿರೇಂದ್ರ ಸೆಹ್ವಾಗ್‌ಗೆ 1 ಲಕ್ಷ ಅನುಯಾಯಿಗಳು!'ಕೂ' ಸೇರಿದ 15 ದಿನಗಳಲ್ಲೇ ವಿರೇಂದ್ರ ಸೆಹ್ವಾಗ್‌ಗೆ 1 ಲಕ್ಷ ಅನುಯಾಯಿಗಳು!

ಭಾರತ ಪ್ಲೇಯಿಂಗ್ XI: ಕೆಎಲ್ ರಾಹುಲ್, ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ರಿಷಭ್ ಪಂತ್ (ವಿಕೆಟ್ ಕೀಪರ್‌), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಶಾರ್ದೂಲ್ ಠಾಕೂರ್, ವರುಣ್ ಚಕ್ರವರ್ತಿ

ಆಸ್ಟ್ರೇಲಿಯಾ ಪ್ಲೇಯಿಂಗ್ XI: ಡೇವಿಡ್ ವಾರ್ನರ್, ಆರನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಆಷ್ಟನ್ ಅಗರ್, ಮಿಚೆಲ್ ಸ್ಟಾರ್ಕ್, ಕೇನ್ ರಿಚರ್ಡ್ಸನ್, ಆಡಮ್ ಜಂಪಾ, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್

ಪಾಕ್ ಮುಂದೆ ಭಾರತ ಸೋಲೋದು ಗ್ಯಾರೆಂಟಿ ಅಂತಾ ಸೆಹ್ವಾಗ್ ಹೇಳಿದ್ಯಾಕೆ? | Oneindia Kannada

Story first published: Wednesday, October 20, 2021, 16:17 [IST]
Other articles published on Oct 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X